ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ರಾಜ್ಯಾದ್ಯಂತ ಅಬ್ಬರಿಸಿದ ಮಳೆ; ಕರ್ನಾಟಕದಲ್ಲಿ ಸಿಡಿಲಿಗೆ ಒಂದೇ ದಿನ ಏಳು ಮಂದಿ ಬಲಿ

ರಾಜ್ಯದಲ್ಲಿ ಬೇಸಿಗೆ ಮಳೆಯಿಂದ ಕರಾವಳಿ, ಮಲೆನಾಡು, ಒಳನಾಡುಗಳಲ್ಲಿ ವಿವಿಧೆಡೆ ಬೆಳೆಗಳಿಗೆ ಹಾನಿಯಾಗಿದೆ. ಜೋರು ಗಾಳಿ ಮಳೆಗೆ ಬೆಳೆಗಳು ನೆಲಕಚ್ಚಿವೆ. ಮಂಗಳವಾರ ಸಿಡಿಲಾಘಾತಕ್ಕೆ ಬಳ್ಳಾರಿ ಜಿಲ್ಲೆಯಲ್ಲಿ ಒಂದೇ ಕುಟುಂಬದ ಇಬ್ಬರು, ಕೊಪ್ಪಳ ಮತ್ತು ಹಾವೇರಿ ಜಿಲ್ಲೆಯಲ್ಲಿ ತಲಾ ಇಬ್ಬರು ಹಾಗೂ ವಿಜಯಪುರ ಜಿಲ್ಲೆಯ ಒಬ್ಬರು ಸೇರಿ ಒಟ್ಟು ಏಳು ಮಂದಿ ಮೃತಪಟ್ಟಿದ್ದಾರೆ.

ಬಳ್ಳಾರಿ ಜಿಲ್ಲೆಸಿರುಗುಪ್ಪ ತಾಲೂಕಿನ ರಾರಾವಿ ಗ್ರಾಮದ ಜಮೀನಿನ ಕೆಲಸದಲ್ಲಿ ತೊಡಗಿದ್ದ ಬೀರಪ್ಪ (45) ಹಾಗೂ ಅವರ ಅಣ್ಣನ ಮಗ ಸುನೀಲ (26) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೊಪ್ಪಳ ಜಿಲ್ಲೆ ಕಾರಟಗಿ ತಾಲೂಕಿನ ಮೈಲಾಪುರ ಗ್ರಾಮದ ಬಸನಗೌಡ (40) ಹಾಗೂ ಕನಕಗಿರಿ ತಾಲೂಕಿನ ಹುಲಿಹೈದರ್‌ ಗ್ರಾಮದ ಯಂಕಪ್ಪ ಜಾಡಿ (45) ಮೃತರು. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕಿನ ತಂಗಡಗಿ ಗ್ರಾಮದಲ್ಲಿ ಸಿಡಿಲು ಬಡಿದು ರೈತ ಮಲ್ಲಪ್ಪ ಗುರಶಾಂತಪ್ಪ ತಾಳಿಕೋಟಿ (47) ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಹಾವೇರಿಯಲ್ಲೂ ಸಿಡಿಲಿಗೆ ಇಬ್ಬರು ಬಲಿಯಾಗಿದ್ದಾರೆ. ಹೊಲದ ಕೆಲಸಕ್ಕೆ ಹೋಗಿ ಮನೆಗೆ ಬರುತ್ತಿರುವ ಸಂದರ್ಭದಲ್ಲಿ ಸಿಡಿಲು ಬಡಿದು 29 ವರ್ಷದ ಯುವ ರೈತ ಸುನೀಲ ಸುರೇಶಪ್ಪ ಕಾಳೇರ ಸಾವನಪ್ಪಿದ ಘಟನೆ ರಟ್ಟೀಹಳ್ಳಿ ತಾಲೂಕಿನ ಕುಡಪಲಿ ಗ್ರಾಮದಲ್ಲಿ ನಡೆದಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!