ಜನ ಮನದ ನಾಡಿ ಮಿಡಿತ

Advertisement

ಧಾರವಾಡದಲ್ಲಿ ವಿಶ್ವದ ಅತ್ಯಂತ ದುಬಾರಿ ಬೆಲೆಯ ಮಾವು.. ಒಂದು ಹಣ್ಣಿನ ಬೆಲೆ 10 ಸಾವಿರ ರೂಪಾಯಿ

ವಿಶ್ವದ ಅತ್ಯಂತ ದುಬಾರಿ ಮಾವಿನ ಹಣ್ಣು ಪ್ರದರ್ಶನ ಧಾರವಾಡದಲ್ಲಿ ನಡೆಯುತ್ತಿದೆ. ಧಾರವಾಡ ತೋಟಗಾರಿಕೆ ಇಲಾಖೆಯ ಮಾವು ಮೇಳದಲ್ಲಿ ಪ್ರದರ್ಶನದಲ್ಲಿ ಜಪಾನಿನ ಮಿಯಾ ಜಾಕಿ ಎಂಬ ಒಂದು ಮಾವು ಕೂಡ ಇದೆ.

ಈ ಒಂದು ಮಿಯಾ ಜಾಕಿ ಮಾವಿನ ಹಣ್ಣಿಗೆ 10 ಸಾವಿರ ರೂಪಾಯಿ ಬೆಲೆ ಆಗಿದೆ. ಕೇಜಿಗೆ 2.7 ಲಕ್ಷ ರೂಪಾಯಿ ಬೆಲೆಯಾಗಿದೆ. ಧಾರವಾಡ ಕಲಕೇರಿ ಗ್ರಾಮದಲ್ಲಿ ಪ್ರಮೋದ ಗಾಂವಕರ್ ಎಂಬ ರೈತ ಮಿಯಾ ಜಾಕಿ ಹಣ್ಣನ್ನು ಬೆಳೆದಿದ್ದಾರೆ. ಕಳೆದ ನಾಲ್ಕು ವರ್ಷದಿಂದ ಕೇವಲ 4 ರಿಂದ 5 ಮಾವು ಬಿಡುತಿದ್ದ ಮಿಯಾ ಜಾಕಿ ಮರ, ಈ ವರ್ಷ ಬಂಪರ್ ಬೆಳೆ ನೀಡಿದೆ. 25 ಮಿಯಾ ಜಾಕಿ ಮಾವು ಬಿಟ್ಟಿದೆ. ಆ ಮೂಲಕ ಒಂದೇ ಮಾವಿನ ಮರದಿಂದ ಮಾಲೀಕ ಭರ್ಜರಿ ಲಾಭ ಮಾಡಿದ್ದಾರೆ. ಸದ್ಯ ಧಾರವಾಡ ಮಾವು ಮೇಳದಲ್ಲಿ ಇದರ ಬಗ್ಗೆ ಚರ್ಚೆ ಆಗ್ತಿದೆ. ಕಣ್ಣು, ಲಿವರ್‌ಗೆ ಇದು ಒಳ್ಳೆಯದು ಎನ್ನುತ್ತಾರೆ.

ಇನ್ನು, ಮಿಯಾ ಜಾಕಿಯ ಎಲ್ಲಾ ಹಣ್ಣುಗಳು ಈಗಾಗಲೇ ಆನ್‌ಲೈನ್‌ನಲ್ಲಿ ಮಾರಾಟವಾಗಿವೆ ಎಂದು ತಿಳಿದುಬಂದಿದೆ. ಪ್ರಮೋದ ಗಾಂವಕರ್ ಅವರು ಸುಮಾರು 7 ಸಾವಿರ ಮಾವಿನ ಮರಗಳನ್ನು ಹೊಂದಿದ್ದಾರೆ. ಅವುಗಳಲ್ಲಿ 25 ಬೇರೆ ಬೇರೆ ತಳಿಯ ಮಾವಿನ ಮರ ಇವೆ. ಮಾವಿನ ಹಣ್ಣನ್ನು ಕೊಪ್ಪಳದ ಗ್ರಾಹಕರೊಬ್ಬರಿಗೆ ಪ್ರತಿ ಹಣ್ಣಿಗೆ 10 ಸಾವಿರ ರೂಪಾಯಿಯಂತೆ ಮಾರಾಟ ಮಾಡಿದ್ದೇನೆ. ರಾಜ್ಯದಲ್ಲಿ ಕೆಲವೇ ಖರೀದಿದಾರರು ಲಭ್ಯವಿದ್ದಾರೆ. ಇದು ಪೌಷ್ಠಿಕಾಂಶದಿAದ ಸಮೃದ್ಧವಾಗಿದೆ. ವಿಟಮಿನ್ ಎ, ಬಿ ಮತ್ತು ಸಿ ಹೊಂದಿದೆ. ಹಣ್ಣಿನ ಸೇವನೆ ಚರ್ಮದ ಆರೋಗ್ಯಕ್ಕೂ ಒಳ್ಳೆಯದು. ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಇತರ ಬೆಳೆಗಾರರಿಗೆ ಅರಿವು ಮೂಡಿಸುವುದಕ್ಕಾಗಿ ಇಲ್ಲಿ ಒಂದು ಹಣ್ಣನ್ನು ಪ್ರದರ್ಶಿಸಿದ್ದೇನಷ್ಟೆ ಎಂದು ಪ್ರಮೋದ ಗಾಂವಕರ್ ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!