ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ಕೇಂದ್ರದಿಂದ ಸರಿಯಾಗಿ ಅನುದಾನ ಬಿಡುಗಡೆಯಾಗುತ್ತಲ್ಲ; ದಿಶಾ ಸಭೆಯಲ್ಲಿ ಸಿಎಂ ಆಕ್ರೋಶ

ಕೇಂದ್ರ ಸರ್ಕಾರದಿಂದ ಬರಬೇಕಾದ ಪಿಂಚಣಿ ಎರಡು ವರ್ಷದಿಂದ ರಾಜ್ಯಕ್ಕೆ ಕೊಟ್ಟಿಲ್ಲ. ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಕೇಂದ್ರದಿಂದ ಹಣ ಬಾರದೇ ಇರುವುದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧಾನ ವ್ಯಕ್ತಪಡಿಸಿದರು. ವಿಧಾನಸೌಧದ ಸಮ್ಮೇಳನಾ ಕೊಠಡಿಯಲ್ಲಿ ನಡೆದ ರಾಜ್ಯ ಮಟ್ಟದ ದಿಶಾ ಸಮಿತಿ ಸಭೆಯಲ್ಲಿ ಮಾತನಾಡಿದರು. ರಾಜ್ಯ ಸರ್ಕಾರವೇ ಬಹುತೇಕ ಹಣ ಕೊಡುವ ಯೋಜನೆಗಳಿಗೆ ಪ್ರಧಾನಿ ಮತ್ತು ಕೇಂದ್ರದ ಹೆಸರಿದೆ. ಆದರೂ ಚೂರು, ಪಾರು ಕೇಂದ್ರದ ಹಣವೂ ಬರುತ್ತಿಲ್ಲ. ಈ ನಿರಂತರ ಅನ್ಯಾಯ ಪ್ರಶ್ನಿಸಬೇಕಲ್ಲವೇ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

ಕೇಂದ್ರ ಸರ್ಕಾರಕ್ಕೆ , ಕೇಂದ್ರದ ಮಂತ್ರಿಗಳಿಗೆ ಮತ್ತು ಪ್ರಧಾನ ಮಂತ್ರಿಯವರಿಗೆ ರಾಜ್ಯ ಸರ್ಕಾರದಿಂದ ಮೇಲಿಂದ ಮೇಲೆ ಬರೆದ ಪತ್ರಗಳ ಮಾಹಿತಿ ನೀಡಿದ ಸಿಎಂ , ಪತ್ರವನ್ನು ಸಭೆಯಲ್ಲಿ ಓದಿ ಸಂಸದರ ಗಮನ‌ ಸೆಳೆದರು.

15 ನೇ ಹಣಕಾಸು ಆಯೋಗದಲ್ಲಿ 5495 ಕೋಟಿ ರೂಪಾಯಿ ವಿಶೇಷ ಅನುದಾನ ಕೊಡಬೇಕು, ಕೆರೆ ಮತ್ತು ಫೆರಿಫೆರಲ್ ರಿಂಗ್ ರಸ್ತೆಗೆ ಕೊಡಬೇಕಾದ ಹಣ ಸೇರಿ ಒಟ್ಟು 11495 ಕೋಟಿ ರೂಪಾಯಿ ಕೇಂದ್ರದಿಂದ ಬರಬೇಕಿತ್ತು. ಏನನ್ನೂ ಕೊಡುತ್ತಿಲ್ಲ .

ನಾವು ರಾಜ್ಯದಿಂದ 4.5 ಲಕ್ಷ ಕೋಟಿ ತೆರಿಗೆ ಕೊಟ್ಟರೂ ರಾಜ್ಯಕ್ಕೆ ಸಣ್ಣ ನೆರವೂ ಕೇಂದ್ರದಿಂದ ಬರುವುದಿಲ್ಲ , ಕೇಂದ್ರ ಪುರಸ್ಕೃತ ಯೋಜನೆಗಳಿಗೂ ಹಣ ಕೊಡುವುದಿಲ್ಲ, ಆದರೆ ಅಭಿವೃದ್ಧಿಗೆ ರಾಜ್ಯ ಸರ್ಕಾರದ ಬಳಿ ಹಣ ಇಲ್ಲ ಅಂತ ನೀವೇ ಹೊರಗೆ ಆರೋಪ ಮಾತಾಡ್ತೀರಿ ಎಂದು ಸಿಎಂ ಟೀಕಿಸಿದರು.

ನಾನೇ ಎರಡು ಬಾರಿ ಭೇಟಿ ನಿರ್ಮಲಾ ಸೀತರಾಮನ್ ಅವರಿಗೆ ಭೇಟಿ ಮಾಡಿ ಮನವಿ ಮಾಡಿದರೂ ಕೊಡಲಿಲ್ಲ. ರಾಜ್ಯದ ಸಂಸದರು ಒಟ್ಟಾಗಿ ಇದನ್ನು ಕೊಡಿಸಲು ಯತ್ನಿಸಬೇಕು. ಇಷ್ಟು ದಿನಗಳೊಳಗೆ ನೀವು ಕೊಡಿಸಬೇಕಿತ್ತು. ಜವಾಬ್ದಾರಿಯಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸಬೇಡಿ ಎಂದು ಸಿಎಂ ಆಕ್ರೋಶ ಹೊರ ಹಾಕಿದರು.

ರಾಜ್ಯ ಸರ್ಕಾರ ನಿರಂತರವಾಗಿ ಒಟ್ಟು 5665 ಕೋಟಿ ಪಿಂಚಣಿ ಕೊಡುತ್ತಲೇ ಬರುತ್ತದೆ. ಆದರೆ, 559 ಕೋಟಿ ಮಾತ್ರ ಕೇಂದ್ರ ಸರ್ಕಾರ ಕೊಡುತ್ತದೆ. ಈ ಸಣ್ಣ ಮೊತ್ತವನ್ನೂ ಕೇಂದ್ರ ಸರ್ಕಾರಕ್ಕೆ ಕೊಡಲು ಸಾಧ್ಯವಾಗುತ್ತಿಲ್ಲ. ಇದನ್ನೂ ಕೇಂದ್ರ ಎರಡು ವರ್ಷಗಳಿಂದ ಬಾಕಿ ಉಳಿಸಿಕೊಂಡಿದೆ. ಇದು ಏಕೆ ಎಂದು ಪ್ರಶ್ನಿಸಿದರು.

ಸಭೆಯಲ್ಲಿ ಕೇಂದ್ರದಿಂದ ಇನ್ನೂ ನರೇಗಾ ಹಣ ಬಾರದ ಅಂಕಿ ಅಂಶಗಳನ್ನು ಅಧಿಕಾರಿಗಳು ಸಭೆಯ ಗಮನಕ್ಕೆ ತಂದರು. ಕೇಂದ್ರ ಪಿಂಚಣಿ ಹಣ ಬಾಕಿ ಉಳಿಸಿಕೊಂಡಿರುವ ಬಗ್ಗೆಯೂ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.

ಜಿಲ್ಲಾ ಮಟ್ಟದಲ್ಲಿ ದಿಶಾ ಸಭೆಗಳು ನಿಗದಿತವಾಗಿ ನಡೆಯಬೇಕು ಎಂದು ಸೂಚನೆ ನೀಡಿದ ಮುಖ್ಯಮಂತ್ರಿಗಳು ಸಂಸದರೂ ಈ ಬಗ್ಗೆ ಆಸಕ್ತಿ ವಹಿಸಬೇಕು ಎಂದರು. ಮೂರು ತಿಂಗಳ ಒಳಗೆ ನರೇಗಾ ಕ್ರಿಯಾ ಯೋಜನೆ ಕಡ್ಡಾಯವಾಗಿ ಸಿದ್ಧಪಡಿಸಬೇಕು. ಏನೇ ಕಾರಣದಿಂದ ಹಿಂದಿನ ಕ್ರಿಯಾ ಯೋಜನೆ ಆಗಿದ್ದರೆ ಅದನ್ನು ಮುಂದಿನ ಕ್ರಿಯಾ ಯೋಜನೆಯಲ್ಲಿ ಸೇರ್ಪಡೆಗೊಳಿಸಿ ಎಂದು ಸಿಎಂ ಸೂಚನೆ ನೀಡಿದರು.

ರಾಷ್ಟ್ರೀಯ ಗ್ರಾಮೀಣ ಕುಡಿಯುವ ನೀರಿನ ಯೋಜನೆಗಾಗಿ ಕೇಂದ್ರದಿಂದ ಬರಬೇಕಾಗಿದ್ದ ಎರಡು ವರ್ಷದ ಪಾಲು 10,000 ಕೋಟಿಯಷ್ಟು ಬಾಕಿ ಉಳಿದಿದೆ. ಹೀಗೆ ಬಾಕಿ ಉಳಿಸಿಕೊಂಡಿರುವುದರಿಂದ ಬಹಳ ಸಮಸ್ಯೆ ಆಗುತ್ತಿದೆ ಎಂದು ಅಧಿಕಾರಿಗಳು ಆತಂಕ ವ್ಯಕ್ತಪಡಿಸಿದರು.

2023-24 ರ ಸಾಲಿನಲ್ಲಿ 7656 ಕೋಟಿ, 24-25 ರ ಸಾಲಿನಲ್ಲಿ 3233 ಕೋಟಿ ಹಣವನ್ನು ಕೇಂದ್ರ ಜಲಜೀವನ್ ಮಿಷನ್ ಯೋಜನೆಯಲ್ಲಿ ಬಾಕಿ ಉಳಿಸಿಕೊಂಡಿದೆ ಎಂದು ಅಧಿಕಾರಿಗಳು ಅಂಕಿ ಅಂಶ ಮುಂದಿಟ್ಟರು. ಈ ವೇಳೆ, ಏಕೆ ಕೇಂದ್ರ ಸರ್ಕಾರದ ಬಳಿ ಹಣ ಇಲ್ಲವೇ ? ಕುಡಿಯುವ ನೀರಿಗೆ ಹಣ ಕೊಡಲಾಗದಷ್ಟು ಕೇಂದ್ರ ದುರ್ಬಲವಾಗಿದೆಯೇ ಎಂದು ದಿಶಾ ಸಮಿತಿ ಸದಸ್ಯರಾದ ಶಾಸಕ ರಿಜ್ವಾನ್ ಅರ್ಷದ್ ಅವರು ಸಂಸದರಿಗೆ ಪ್ರಶ್ನಿಸಿದರು.‌

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!