ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಸುಹಾಸ್ ಶೆಟ್ಟಿ ಕೊಲೆಗೆ ಸಹಕರಿಸಿದ್ದ ಮೂವರ ಬಂಧನ..!

ಬಜ್ಪೆಯಲ್ಲಿ ನಡೆದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮತ್ತೆ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.

ಬಂಧಿತರನ್ನು ಕಳವಾರು ಗ್ರಾಮದ ಅಝರುದ್ದೀನ್ ಯಾನೆ ಅಝರ್ ಯಾನೆ ಅಜ್ಜು , ಬಜ್ಪೆಯಲ್ಲಿ ವಾಸವಾಗಿರುವ ಅಬ್ದುಲ್ ಖಾದರ್ ಯಾನೆ ನೌಫಲ್, ಮೂಲತಃ ಫರಂಗಿಪೇಟೆ ಕುಂಪನಮಜಲಿನ ಪ್ರಸಕ್ತ ಹಾಸನ ಜಿಲ್ಲೆ ಕೆ.ಆರ್.ಪುರಂ ನಿವಾಸಿ ನೌಷಾದ್ ಯಾನೆ ವಾಮಂಜೂರು ನೌಷಾದ್ ಎಂದು ಗುರುತಿಸಲಾಗಿದೆ.

ಆರೋಪಿಗಳ ಪೈಕಿ ಅಝರುದ್ದೀನ್ ಎಂಬಾತನ ವಿರುದ್ಧ ಈ ಹಿಂದೆ ಪಣಂಬೂರು, ಸುರತ್ಕಲ್, ಮುಲ್ಕಿ ಪೊಲೀಸ್ ಠಾಣೆಗಳಲ್ಲಿ 3 ಕಳವು ಪ್ರಕರಣ ದಾಖಲಾಗಿದೆ. ಈತನು ಸುಹಾಸ್ ಶೆಟ್ಟಿಯ ಚಲನವಲನದ ಬಗ್ಗೆ ಮಾಹಿತಿಯನ್ನು ನೀಡಿ ಕೊಲೆಗೆ ಸಹಕರಿಸಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

ಆರೋಪಿ ಅಬ್ದುಲ್ ಖಾದರ್ ಎಂಬಾತನು ಆರೋಪಿಗಳು ಕೊಲೆ ಕೃತ್ಯ ನಡೆಸಿದ ನಂತರ ಕಾರಿನಲ್ಲಿ ಪರಾರಿಯಾಗುವ ವೇಳೆ ಆರೋಪಿಗಳಿಗೆ ಸಹಕರಿಸಿದ್ದ. ಇನ್ನೋರ್ವ ಆರೋಪಿ ನೌಷಾದ್ ಎಂಬಾತನು ಇತರ ಆರೋಪಿಗಳ ಜೊತೆ ಕೊಲೆಗೆ ಸಂಚು ರೂಪಿಸಿದ್ದ. ಈತನ ವಿರುದ್ಧವೂ ಅನೇಕ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಾಗಿದ್ದವು. ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಈ ಪೈಕಿ ಅಝರುದ್ದೀನ್‌ಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ. ಇತರ ಇಬ್ಬರನ್ನು ಹೆಚ್ಚಿನ ವಿಚಾರಣೆಗಾಗಿ 7 ದಿನಗಳ ಪೊಲೀಸ್ ಕಸ್ಟಡಿಗೆ ಪಡೆಯಲಾಗಿದೆ. ಈ ಕೊಲೆ ಪ್ರಕರಣದಲ್ಲಿ ಭಾಗಿಯಾದ ಇತರ ಆರೋಪಿಗಳ ಪತ್ತೆ ಕಾರ್ಯ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!