ಬೋಧಿಸತ್ವ ಬುದ್ಧ ಫೌಂಡೇಶನ್ ಉಡುಪಿ ಜಿಲ್ಲೆ, ಬೋಧಿಸತ್ವ ಬುದ್ಧ ವಿಹಾರ ಹಾವಂಜೆ ಮತ್ತು ಕರ್ನಾಟಕ ದಲಿತ ಸಂಘರ್ಷ ಸಮಿತಿ ಭೀಮವಾದ ಉಡುಪಿ ಜಿಲ್ಲೆ ಇವುಗಳ ಸಂಯುಕ್ತ ಆಶ್ರಯದಲ್ಲಿ ಬುದ್ಧ ಜಯಂತಿಯ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ಎಲ್ಲಾ 150 ಒಳರೋಗಿಗಳಿಗೆ ಹಣ್ಣು ಹಂಪಲುಗಳನ್ನು ವಿತರಿಸಲಾಯಿತು.

ವಂದನೆ- ಮೈತ್ರಿ ಧ್ಯಾನ ನಂತರ ಹಾವಂಜೆಯಲ್ಲಿರುವ ಬೋಧಿಸತ್ವ ಬುದ್ಧ ವಿಹಾರದಲ್ಲಿ ಧಮ್ಮಾಚಾರಿ ಶಂಭು ಸುವರ್ಣ ನೇತೃತ್ವದಲ್ಲಿ ಬುದ್ಧ ವಂದನೆ, ಧ್ಯಾನ ಮತ್ತು ಮೈತ್ರಿ ಧ್ಯಾನ ಜರಗಿತು. ಸಭಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು.



