ರಾಷ್ಟ್ರೀಯ ಹೆದ್ದಾರಿ 66ರ ಮುಲ್ಕಿ ಬಸ್ ನಿಲ್ದಾಣದ ಬಳಿ ಕೆಎಸ್‌ಆರ್ಟಿಸಿ ಬಸ್‌ಗೆ ಸ್ಕೂಟರ್ ಢಿಕ್ಕಿಯಾಗಿ ಇಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಗಾಯಗೊಂಡವರನ್ನು ಮುಲ್ಕಿ ಸಮೀಪದ ಚಿತ್ರಾಪು ನಿವಾಸಿಗಳು ಎಂದು ತಿಳಿದು ಬಂದಿದೆ.

ಮಂಗಳೂರಿನಿ0ದ ಪಣಜಿ ಕಡೆಗೆ ಹೋಗುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಲ್ಕಿ ಬಸ್ ನಿಲ್ದಾಣದ ಬಳಿ ಪ್ರಯಾಣಿಕರನ್ನ ಹತ್ತಿಸಲು ನಿಲ್ಲಿಸಿದಾಗ ಅದೇ ದಿಕ್ಕಿನಲ್ಲಿ ಹೋಗುತ್ತಿದ್ದ ಸ್ಕೂಟರ್ ಸವಾರ ನಿಯಂತ್ರಣ ತಪ್ಪಿ ಬಸ್‌ನ ಹಿಂಭಾಗಕ್ಕೆ ಡಿಕ್ಕಿ ಹೊಡೆದಿದ್ದಾನೆ. ಅಪಘಾತದಿಂದ ಸ್ಕೂಟರ್ ಸವಾರ ಹಾಗೂ ಸಹ ಸವಾರನಿಗೆ ಗಾಯಗಳಾಗಿದ್ದು, ಸ್ಥಳಕ್ಕೆ ಮಂಗಳೂರು ಉತ್ತರ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ಅಪಘಾತದಿಂದ ಸ್ಕೂಟರ್ ಸಂಪೂರ್ಣ ಜಖಂಗೊ0ಡಿದೆ. ರಾಷ್ಟ್ರೀಯ ಹೆದ್ದಾರಿ ಚತುಷ್ಪಥಗೊಂಡ ಬಳಿಕ ಮುಲ್ಕಿ ಬಸ್ಟಾಂಡ್ ಜಂಕ್ಷನ್ ಅಪಾಯಕಾರಿಯಾಗಿ ಪರಿಣಮಿಸಿದ್ದು ಅಪಘಾತ ವಲಯ ಎಂದೇ ಗುರುತಿಸಿಕೊಂಡಿದೆ.ಈ ಭಾಗದಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ನಾಗರಿಕರು ಒತ್ತಾಯಿಸಿದ್ದಾರೆ.



