ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಮದ್ಯ,ಬಿಯರ್ ದರ ಏರಿಕೆ; ವೈನ್ ಮರ್ಚೆಂಟ್ ಅಸೋಸಿಯೇಷನ್ ಅಸಮಾಧಾನ

ರಾಜ್ಯ ಸರ್ಕಾರ ನಾಲ್ಕನೇ ಬಾರಿ ಬಿಯರ್ ದರ ಏರಿಕೆ ಮಾಡುತ್ತಿದೆ. ಐಎಂಎಲ್ ದರವನ್ನು ಎರಡು ಬಾರಿ ಏರಿಕೆ ಮಾಡಿದೆ. ಈ ಬಗ್ಗೆ ಕಾನೂನು ಹೋರಾಟಕ್ಕೂ ಅವಕಾಶ ಇಲ್ಲ. ನಮ್ಮ ಬೇಡಿಕೆಯನ್ನು ಮುಖ್ಯಮಂತ್ರಿಗಳಿಗೆ ತಿಳಿಸಿದ್ದೇವೆ.

ಆದರೆ ನಮ್ಮ ಯಾವ ಬೇಡಿಕೆಯನ್ನೂ ಈಡೇರಿಸಿಲ್ಲ ಎಂದು ವೈನ್ ಮಚೆರ್ಂಟ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಗೋವಿಂದರಾಜ್ ಹೆಗ್ಡೆ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿಗಳು ಮೇ21ಕ್ಕೆ ಸಭೆ ಕರೆದಿದ್ದಾರೆ. ಮತ್ತೊಮ್ಮೆ ಅವರಲ್ಲಿ ಮನವಿ ಮಾಡುತ್ತೇವೆ. ಸರಕಾರ ಆದಾಯದ ದೃಷ್ಟಿಯಿಂದ ಈ ರೀತಿ ಮಾಡುತ್ತಿದೆ. ಚೀಪರ್ ಮದ್ಯ ಹಾಗೂ ಬಿಯರ್‍ನ ಮೇಲೆ ದರ ಏರಿಕೆ ಮಾಡಲಾಗಿದೆ. ಸರ್ಕಾರದ ನೋಟಿಫಿಕೇಶನ್‍ಗೆ ನಾವು ಆಕ್ಷೇಪ ಹಾಕಿದ್ದೆವು. 2012ರಿಂದ 6 ಬಾರಿ ಈ ಸ್ಲಾಬ್ ಗಳಿಗೆ ದರ ಏರಿಕೆ ಮಾಡಿದ್ದಾರೆ. ಚೀಪರ್ ಸ್ಲಾಬ್ ಬಳಸುವವರು ಕೂಲಿ ಕಾರ್ಮಿಕರು. ಯಾವ ಸ್ಲಾಬ್‍ನಲ್ಲಿ ಸೇಲ್ಸ್ ಜಾಸ್ತಿ ಇದೆಯೋ ಆ ದರವನ್ನೇ ಏರಿಸುತ್ತಿದ್ದಾರೆ. ಇನ್ನು ಅಬಕಾರಿ ಶುಲ್ಕವನ್ನೂ ಜಾಸ್ತಿ ಮಾಡುತ್ತಿದ್ದಾರೆ. ಈ ರೀತಿ ಮಾಡುವುದು ಸರಿಯಲ್ಲ, ಇದಕ್ಕೆ ನಮ್ಮ ವಿರೋಧ ಇದೆ
ಎಂದು ಅವರು ಹೇಳಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!