ರಾಜ್ಯದ ಕಾಂಗ್ರೆಸ್ ಸರ್ಕಾರದ ಎರಡು ವರ್ಷದ ಸಾಧನೆ ಏನೂ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ.

ರಾಜ್ಯ ಸರ್ಕಾರದ ಆಡಳಿತ ವ್ಯವಸ್ಥೆ ಸಂಪೂರ್ಣ ವಿಫಲ ಎಂದು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ. ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಧರ್ಮ ಧ್ವೇಷ ಮಾಡುವುದು, ಕೇಂದ್ರ ಸರ್ಕಾರವನ್ನು ದೂರುವುದು, ಪ್ರಧಾನಿಯ ಡ್ರೆಸ್ ಬಗ್ಗೆ ಮಾತನಾಡುವಂತಹ ಬಾಲಿಷ ಕೆಲಸವನ್ನು ಸಂತೋಷ್ ಲಾಡ್ ಮಾಡಿದ್ದಾರೆ. ಶುದ್ಧ ನೀರು ನೀಡುವ ಜಲಜೀವನ್ ಯೋಜನೆ ಸಂಪೂರ್ಣ ವಿಫಲವಾಗಿದೆ. ಪರಿಶಿಷ್ಟ ಪಂಗಡಕ್ಕೆ ರಾಜ್ಯ ಸರ್ಕಾರ ಅನ್ಯಾಯ ಮಾಡುತ್ತಿದೆ ಎಂದ್ರು. ಇನ್ನು ಈ ಸುದ್ದಿಗೋಷ್ಟಿಯಲ್ಲಿ ಶಾಸಕರಾದ ಡಾ. ವೈ.ಭರತ್ ಶೆಟ್ಟಿ, ರಾಜೇಶ್ ನಾಯ್ಕ್, ಬಿಜೆಪಿ ಜಿಲ್ಲಾಧ್ಯಕ್ಷರಾದ ಸತೀಶ್ ಕುಂಪಲ, ಎಂಎಲ್‌ಸಿ ಕಿಶೋರ್ ಕುಮಾರ್ ಬೊಟ್ಯಾಡಿ, ಪ್ರತಾಪ್ ಸಿಂಹ, ಉಪಸ್ಥಿತರಿದ್ರು.



