ಜನ ಮನದ ನಾಡಿ ಮಿಡಿತ

Advertisement

ನವದೆಹಲಿ: ಅಂಡರ್ 19 ತಂಡದ ಆಟಗಾರರ ಪಟ್ಟಿ ಪ್ರಕಟ; ವೈಭವ್‌ ಸೂರ್ಯವಂಶಿಗೆ ಅವಕಾಶ

ಮುಂಬರುವ ಇಂಗ್ಲೆಂಡ್‌ ಪ್ರವಾಸದ ಭಾರತ 19ರ ವಯೋಮನ ಕ್ರಿಕೆಟ್‌ ತಂಡವನ್ನು ಮೇ 22 ರಂದು ಗುರುವಾರ ಭಾರತೀಯ ಕ್ರಿಕೆಟ್‌ ನಿಯಂತ್ರಣ ಮಂಡಳಿ (BCCI) ಪ್ರಕಟಿಸಿದೆ. 2025ರ ಇಂಡಿಯನ್‌ ಪ್ರೀಮಿಯರ್‌ ಲೀಗ್‌ ಟೂರ್ನಿಯಲ್ಲಿ ರಾಜಸ್ಥಾನ್‌ ರಾಯಲ್ಸ್‌ ಪರ ಅತ್ಯುತ್ತಮ ಬ್ಯಾಟಿಂಗ್‌ ಪ್ರದರ್ಶನ ತೋರುವ ಮೂಲಕ ಎಲ್ಲರ ಗಮನ ಸೆಳೆದಿದ್ದ 14ರ ವಯಸ್ಸಿನ ಪೋರ ವೈಭವ್‌ ಸೂರ್ಯವಂಶಿ ಭಾರತ ಅಂಡರ-19 ತಂಡದಲ್ಲಿ ಚೊಚ್ಚಲ ಅವಕಾಶವನ್ನು ಪಡೆದಿದ್ದಾರೆ. ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಯುವ ಆರಂಭಿಕ ಆಯುಷ್‌ ಮ್ಹಾತ್ರೆ ಅವರು ಭಾರತ ಕಿರಿಯರ ತಂಡಕ್ಕೆ ನಾಯಕನನ್ನಾಗಿ ನೇಮಿಸಲಾಗಿದೆ.

ಜೂನ್‌ 24 ರಿಂದ ಜುಲೈ 23ರವರೆಗೂ ಭಾರತ ತಂಡ ಇಂಗ್ಲೆಂಡ್‌ ಪ್ರವಾಸವನ್ನು ಹಮ್ಮಿಕೊಳ್ಳಲಿದೆ. ಇಂಗ್ಲೆಂಡ್‌ ಹಾಗೂ ಭಾರತ ತಂಡಗಳು ಮೊದಲಿಗೆ ಅಭ್ಯಾಸವನ್ನು ಪಂದ್ಯವನ್ನು ಆಡಲಿದೆ. ನಂತರ ಐದು ಪಂದ್ಯಗಳ ಯುವ ಏಕದಿನ ಸರಣಿಯಲ್ಲಿ ಉಭಯ ತಂಡಗಳು ಕಾದಾಟ ನಡೆಸಲಿವೆ. ನಂತರ ಎರಡು ದಿನಗಳ ಹಲವು ಪಂದ್ಯಗಳನ್ನು ಉಭಯ ತಂಡಗಳು ಕಾದಾಟ ನಡೆಸಲಿವೆ. ಇಂಗ್ಲೆಂಡ್‌ನಲ್ಲಿ ವೇಗದ ಬೌಲಿಂಗ್‌ ಕಂಡೀಷನ್ಸ್‌ ಇರುವ ಕಾರಣ ಭಾರತ ಅಂಡರ್‌-19 ತಂಡಕ್ಕೆ ಕಠಿಣ ಸವಾಲು ಎದುರಾಗಲಿದೆ.

 

Leave a Reply

Your email address will not be published. Required fields are marked *

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

ಬಂಟ್ವಾಳ: ಮೊಡಂಕಾಪು ಆಯ್ಯಪ್ಪ ಮಂದಿರದಲ್ಲಿ ನಡೆದ ಸಭೆಯಲ್ಲಿ ಮೂರನೇ ಅವಧಿಯ ಅಧ್ಯಕ್ಷರಾಗಿ ಆಯ್ಕೆಯಾದ ಸುನಿಲ್ ಎನ್

ಬಂಟ್ವಾಳ: ಸುರಿದ ಮಳೆಗೆ ಅವರಣಗೋಡೆ ಕುಸಿದು ಬಿದ್ದು ಹಾನಿ…!

ಪುತ್ತೂರಿನ ಪ್ರಕರಣ, ಕಾರ್ಕಳದ ಅಭಿಷೇಕ್ ಆತ್ಮಹತ್ಯೆಗೆ ಸಂಬಂಧಿಸಿ ಗ್ರಹಸಚಿವರಿಗೆ ಐವನ್ ಡಿಸೋಜಾ ಅವರಿಂದ ಮನವಿ

ಮಂಗಳೂರು: ಪೊಲೀಸ್ ಠಾಣಾ ವ್ಯಾಪ್ತಿಯ ಮೂರು ಕಡೆ ಜಾನುವಾರು ವಧೆ…!

ಉಡುಪಿ: ಅಂಬಲಪಾಡಿಯಲ್ಲಿ ನೇಣಿಗೆ ಶರಣಾದ ಯುವಪ್ರೇಮಿಗಳು….!

ಮಂಗಳೂರು: ಮಾಧವ ಕೊಳತ್ತ ಮಜಲು ಅವರಿಗೆ ಕದ್ರಿ ಬಾಲಕೃಷ್ಣ ಶೆಟ್ಟಿ ಪ್ರಶಸ್ತಿ..!

error: Content is protected !!