ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು: ರಾಮನಗರ ಜಿಲ್ಲೆ ಇನ್ನು ಮುಂದೆ ಬೆಂಗಳೂರು ದಕ್ಷಿಣ ಜಿಲ್ಲೆ

ರಾಮನಗರ ಜಿಲ್ಲೆಯನ್ನು ಬೆಂಗಳೂರು ದಕ್ಷಿಣ ಜಿಲ್ಲೆ ಎಂದು ನಾಮಕರಣ ಮಾಡಲು ತೀರ್ಮಾನ ಮಾಡಲಾಗಿದೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.

ಸಚಿವ ಸಂಪುಟ ಸಭೆ ಬಳಿಕ ಮಾತನಾಡಿರುವ ಡಿ.ಕೆ.ಶಿವಕುಮಾರ್, ಇವತ್ತಿನ ಸಭೆಯಲ್ಲಿ ರಾಮನಗರ ಜಿಲ್ಲೆಯ ಹೆಸರು ಬದಲಾಯಿಸುವ ಬಗ್ಗೆ ನಿರ್ಧಾರ ಮಾಡಲಾಗಿದೆ. ಅಧಿಕೃತವಾಗಿ ಈ ಸಂಬಂಧ ಆದೇಶ ಹೊರ ಬೀಳಲಿದೆ. ಇನ್ಮುಂದೆ ರಾಮನಗರ ಹೆಡ್ ಕ್ವಾಟ್ರಸ್ ಆಗಿರಲಿದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ಸರ್ಕಾರವು ರಾಮನಗರ ಜಿಲ್ಲೆಯನ್ನು ‘ಬೆಂಗಳೂರು ದಕ್ಷಿಣ’ ಎಂದು ನಾಮಕರಣ ಮಾಡುವ ನಿರ್ಧಾರವನ್ನು ಜುಲೈ, 2024ರಲ್ಲೂ ತೆಗೆದುಕೊಂಡಿತ್ತು. ಈ ನಾಮಕರಣವು ‘ಬ್ರ್ಯಾಂಡ್ ಬೆಂಗಳೂರು’ ಹೆಸರಿನ ಮೂಲಕ ಜಿಲ್ಲೆಗೆ ಅಭಿವೃದ್ಧಿ ಮತ್ತು ಹೂಡಿಕೆ ಆಕರ್ಷಿಸಲು ಉದ್ದೇಶಿತವಾಗಿದೆ.

ಯಾವುದೇ ಜಿಲ್ಲೆಯ ಹೆಸರನ್ನು ಬದಲಾವಣೆ ಮಾಡಲು ಕೇಂದ್ರ ಗೃಹ ಸಚಿವಾಲಯದ ಒಪ್ಪಿಗೆ ಬೇಕಾಗಿತ್ತು. ಅಂತೆಯೇ ಕಳೆದ ಬಾರಿ ಕರ್ನಾಟಕ ಸರ್ಕಾರದ ತೀರ್ಮಾನವನ್ನು ಕೇಂದ್ರ ಸರ್ಕಾರ ತಿರಸ್ಕರಿಸಿತ್ತು. ಹೀಗಾಗಿ ಈ ಬಾರಿಯ ಪ್ರಸ್ತಾಪ ಏನಾಗಲಿದೆ ಅನ್ನೋದು ತೀವ್ರ ಕುತೂಹಲ ಮೂಡಿದೆ. ಕೇಂದ್ರ ಸಚಿವ ಸಂಪುಟದಲ್ಲಿ ಜೆಡಿಎಸ್​ ನಾಯಕ ಹೆಚ್​​ಡಿ ಕುಮಾರಸ್ವಾಮಿ ಇದ್ದಾರೆ. ಕುಮಾರಸ್ವಾಮಿ ಅವರು ಮೊದಲನಿಂದಲೂ ರಾಮನಗರ ಜಿಲ್ಲೆಯ ಹೆಸರು ಬದಲಾವಣೆಗೆ ವಿರೋಧಿಸುತ್ತ ಬಂದಿದ್ದಾರೆ.

 

 

ಈ ಬಗ್ಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರಾಮನಗರ ಹೆಸರು ಬದಲಾವಣೆಯ ಅಧಿಸೂಚನೆ ಇವತ್ತು ಆಗುತ್ತೆ. ಹೆಸರು ಬದಲಾವಣೆ ಮಾಡಲು ಯಾವುದೇ ಹಣ ಖರ್ಚಾಗೋದಿಲ್ಲ. ರಾಮನಗರ ಮೊದಲು ಬೆಂಗಳೂರು ಜಿಲ್ಲೆಗೆ ಸೇರಿತ್ತು. ಕನಕಪುರ, ಚನ್ನಪಟ್ಟಣ ಬೆಂಗಳೂರು ಜಿಲ್ಲೆಗೆ ಸೇರಿತ್ತು. ಹಿಂದೆ ನಾನು ಕೂಡ ಬೆಂಗಳೂರು ಜಿಲ್ಲೆಯ ಜಿಲ್ಲಾ ಪಂಚಾಯತ್ ಸದಸ್ಯನಾಗಿದ್ದೆ. ಬೆಂಗಳೂರು ಹೆಸರು ಉಳಿಸಬೇಕಿತ್ತು. ಅದಕ್ಕಾಗಿ ಹೆಸರು ಬದಲಾವಣೆ ಮಾಡಿದ್ದೇವೆ ಎಂದರು.

ನನ್ನನ್ನ ಕೂಡ ನೀವು ಬೆಂಗಳೂರು ದಕ್ಷಿಣ ಜಿಲ್ಲೆಯವರು ಅಂತ ಕರೆಯಬೇಕು. ಹೆಸರು ಬದಲಾವಣೆಗೆ ಕೇಂದ್ರಕ್ಕೆ ಯಾವುದೇ ಅಧಿಕಾರ‌ ಇರಲಿಲ್ಲ. ಕೇಂದ್ರದ‌ ಗಮನಕ್ಕೆ ತರಬೇಕಿತ್ತು, ಹಾಗಾಗಿ ಹೆಸರನ್ನ ಕಳುಹಿಸಿಕೊಟ್ಟಿದ್ದೆವು ಅಷ್ಟೇ. ವಿಶ್ವದಲ್ಲೇ ಬೆಂಗಳೂರು ದಕ್ಷಿಣ ದೊಡ್ಡದಾಗಿ ಬೆಳೆಯುತ್ತಿದೆ. ಕಾನೂನು ಚೌಕಟ್ಟನ್ನು ಗಮನದಲ್ಲಿಟ್ಟುಕೊಂಡು ಹೆಸರು ಬದಲಾವಣೆ ಮಾಡಿದ್ದೇವೆ. ಕ್ಷೇತ್ರದಲ್ಲಿ ಯಾವುದೇ ಬದಲಾವಣೆ ಇರೋದಿಲ್ಲ. ಈಗ ಹೇಗಿದೆಯೋ ಹಾಗೆಯೇ ಇರಲಿದೆ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!