ಜನ ಮನದ ನಾಡಿ ಮಿಡಿತ

Advertisement

ಛತ್ತೀಸಗಢ: ಮತ್ತೊಬ್ಬ ನಕ್ಸಲ್ ಎನ್ಕೌಂಟರ್ ಗೆ ಬಲಿ, ಕಾರ್ಯಾಚರಣೆ ವೇಳೆ ಕೋಬ್ರಾ ಕಮಾಂಡೋ ಹುತಾತ್ಮ

ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರ ಬೇಟೆ ಹಲವು ದಿನಗಳಿಂದ ಭರ್ಜರಿಯಾಗಿ ನಡೆಯುತ್ತಿದೆ. ಇದೀಗ ಮತ್ತೆ ಛತ್ತೀಸಗಢದ ಬಿಜಾಪುರ ಜಿಲ್ಲೆಯಲ್ಲಿ ಭದ್ರತಾ ಪಡೆ ಮತ್ತು ನಕ್ಸಲರ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಹತನಾಗಿದ್ದಾನೆ ಎಂದು ಅಧಿಕಾರಿಗಳು ಇಂದು ತಿಳಿಸಿದ್ದಾರೆ.

ಇದೇ ವೇಳೆ ನಕ್ಸಲ್ ನಿಗ್ರಹ ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಕಮಾಂಡೊ ಹುತಾತ್ಮರಾಗಿದ್ದು, ಮತ್ತೊಬ್ಬರು ಗಾಯಗೊಂಡಿದ್ದಾರೆ ಎಂದು ಅವರು ತಿಳಿಸಿದ್ದಾರೆ. ಜಿಲ್ಲೆಯ ಉಸೂ‌ರ್ ಪೊಲೀಸ್ ಠಾಣೆ ವ್ಯಾಪ್ತಿಯ ತುಮ್ರಲ್ ಪ್ರದೇಶದಲ್ಲಿ ಕಾರ್ಯಾಚರಣೆ ಮುಂದುವರಿದಿದೆ. ಸಿಆರ್‌ಪಿಎಫ್‌ನ ಕೋಬ್ರಾ ಘಟಕದ 210ನೇ ಬೆಟಾಲಿಯನ್, ಛತ್ತೀಸಗಢ ಪೊಲೀಸ್ ಡಿಆರ್‌ಜಿ ಮತ್ತು ಎಸ್‌ಟಿಎಫ್ ಪಡೆಗಳು ಜಂಟಿ ಕಾರ್ಯಾಚರಣೆಯಲ್ಲಿ ನಡೆಸಿವೆ.

ಈ ಪ್ರದೇಶದಿಂದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. ನಕ್ಸಲ್ ವಾದ ತೊಡೆದುಹಾಕುವ ಕಾರ್ಯಾಚರಣೆಯಲ್ಲಿ ಸಿಆರ್‌ಪಿಎಫ್‌ನ ಕೋಬ್ರಾ ಕಮಾಂಡೊ ಪಡೆ ನಿರಂತರ ಕಾರ್ಯಾಚರಣೆಯಲ್ಲಿ ತೊಡಗಿಸಿಕೊಂಡಿದೆ.

ಛತ್ತೀಸಗಢದ ಬಸ್ತಾರ್ ಪ್ರದೇಶದಲ್ಲಿ ಬುಧವಾರ ನಡೆದ ಎನ್‌ಕೌಂಟರ್‌ನಲ್ಲಿ ಸಿಪಿಐ (ಮಾವೋವಾದಿ) ಪಕ್ಷದ ಪ್ರಧಾನ ಕಾರ್ಯದರ್ಶಿ, ನಕ್ಸಲ್ ನಾಯಕ ನಂಬಾಲಾ ಕೇಶವ್ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ 27 ನಕ್ಸಲರನ್ನು ಭದ್ರತಾ ಪಡೆಗಳು ಹತ್ಯೆ ಮಾಡಿವೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

ಮಂಗಳೂರು: ರಾಜಾಜಿ ಉದ್ಯಾನವನದಲ್ಲಿ ಗಾಂಧಿ ಜಯಂತಿ ಆಚರಣೆ

ಸುಳ್ಯ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವಾರಂಟ್ ಆರೋಪಿ ಸುಳ್ಯ ಪೊಲೀಸರ ವಶಕ್ಕೆ…!

ಕಾಸರಗೋಡು: ಮುಗುರೋಡ್‌ನಲ್ಲಿ ಕಾರು-ಬೈಕ್ ಅಪಘಾತ: ಬೈಕ್ ಸವಾರ ಸಾವು, ಪತ್ನಿಗೆ ಗಂಭೀರ ಗಾಯ..!

ಸುಳ್ಯ: ಗ್ಯಾರೇಜ್‌ನಲ್ಲಿ ನಿಲ್ಲಿಸಿದ್ದ ಬೈಕ್‌ಗೆ ಬೆಂಕಿ: ಇಬ್ಬರು ಆರೋಪಿಗಳ ಬಂಧನ…!

error: Content is protected !!