ಜನ ಮನದ ನಾಡಿ ಮಿಡಿತ

Advertisement

ಬಿಕಾನೆರ್ : ನವೀಕರಿಸಿದ 103 ರೈಲು ನಿಲ್ದಾಣಗಳ ಉದ್ಘಾಟನೆ ಮಾಡಿದ ಪ್ರಧಾನಿ

‘ಅಮೃತ ಭಾರತ’ ಯೋಜನೆಯಡಿ ₹1,100 ಕೋಟಿ ವೆಚ್ಚದಲ್ಲಿ ನವೀಕರಿಸಿದ 103 ರೈಲು ನಿಲ್ದಾಣಗಳ ಉದ್ಘಾಟನೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ವಿಡಿಯೊ ಕಾನ್ಸ್‌ರೆನ್ಸ್ ಮೂಲಕ ನೆರವೇರಿಸಿದ್ದಾರೆ.

ಈ ಸಂದರ್ಭದಲ್ಲಿ ಪ್ರತಿಕ್ರಿಯಿಸಿದ ಪ್ರಧಾನಿ ಮೋದಿ, ‘ದೇಶವು ತನ್ನ ರೈಲು ಜಾಲ ಮತ್ತು ಮೂಲಸೌಕರ್ಯವನ್ನು ಆಧುನೀಕರಿಸುತ್ತಿದೆ. ಇದು ದೇಶದ ವೇಗ ಮತ್ತು ಪ್ರಗತಿಯನ್ನು ಬಿಂಬಿಸುತ್ತದೆ’ ಎಂದು ಹೇಳಿದ್ದಾರೆ.

₹1.100 ಕೋಟಿಗೂ ಹೆಚ್ಚು ವೆಚ್ಚದಲ್ಲಿ 18 ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳನ್ನು ಒಳಗೊಂಡ 86 ಜಿಲ್ಲೆಗಳಲ್ಲಿ ಒಟ್ಟು 103 ನವೀಕರಿಸಿದ ಅಮೃತ ಭಾರತ ರೈಲು ನಿಲ್ದಾಣಗಳನ್ನು ಪ್ರಧಾನಿ ಮೋದಿ ದೇಶಕ್ಕೆ ಸಮರ್ಪಿಸಿದ್ದಾರೆ. ನವೀಕರಿಸಿದ ರೈಲ್ವೆ ನಿಲ್ದಾಣಗಳು ಅತ್ಯಾಧುನಿಕ ಸೌಲಭ್ಯಗಳನ್ನು ಒಳಗೊಂಡಿರಲಿವೆ. ‘ನವೀಕರಣಗೊಂಡ ಈ ರೈಲು ನಿಲ್ದಾಣಗಳು ಅಮೃತ ಭಾರತ ನಿಲ್ದಾಣಗಳೆಂದು ಗುರುತಿಸಲಿವೆ. 100ಕ್ಕೂ ಹೆಚ್ಚು ಅಮೃತ ಭಾರತ ನಿಲ್ದಾಣಗಳ ನವೀಕರಣ ಪೂರ್ಣಗೊಂಡಿವೆ. ಹಿಂದಿನ ಪರಿಸ್ಥಿತಿ ಹೇಗಿತ್ತು ಮತ್ತು ಈಗಿನ ಪರಿಸ್ಥಿತಿ ಹೇಗಿದೆ ಎಂಬುದರ ಕುರಿತು ಜನರು ಸಾಮಾಜಿಕ ಮಾಧ್ಯಗಳಲ್ಲಿ ಹಂಚುತ್ತಿದ್ದಾರೆ’ ಎಂದು ಪ್ರಧಾನಿ ಮೋದಿ ಉಲ್ಲೇಖಿಸಿದ್ದಾರೆ.

‘ಈ ಅಮೃತ ಭಾರತ ಕೇಂದ್ರಗಳಲ್ಲಿ ಅಭಿವೃದ್ಧಿ ಹಾಗೂ ಪರಂಪರೆ ಸ್ಪಷ್ಟವಾಗಿ ಎದ್ದು ಕಾಣಿಸುತ್ತಿದೆ. ಅವುಗಳು ಸ್ಥಳೀಯ ಕಲೆ ಹಾಗೂ ಸಂಸ್ಕೃತಿಯ ಪ್ರತೀಕವಾಗಿವೆ. ಪ್ರತಿಯೊಂದು ಅಮೃತ ಭಾರತ ನಿಲ್ದಾಣದಲ್ಲಿ ದೇಶದ ಸಾವಿರಾರು ವರ್ಷಗಳ ಹಳೆಯ ಪರಂಪರೆಯನ್ನು ಕಾಣಬಹುದಾಗಿದೆ’ ಎಂದು ಹೇಳಿದ್ದಾರೆ.

‘ಅಮೃತ ಭಾರತ’ ಈ ಮೂಲಕ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದ್ದು, ಹೊಸ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ’ ಎಂದಿದ್ದಾರೆ.
ಅಮೃತ ಭಾರತ ಯೋಜನೆ ಅಡಿಯಲ್ಲಿ 1,300ಕ್ಕೂ ಹೆಚ್ಚು ನಿಲ್ದಾಣಗಳನ್ನು ನವೀಕರಿಸಲಾಗುತ್ತಿದೆ.

Leave a Reply

Your email address will not be published. Required fields are marked *

ಬಂಟ್ವಾಳ: ಪಾಣೆಮಂಗಳೂರು ಹಳೆಯ ಸೇತುವೆ ಮೇಲೆ ರಿಕ್ಷಾ ನಿಲ್ಲಿಸಿ ಚಾಲಕ ಕಾಣೆ..!

ಬಂಟ್ವಾಳ: ಬಂಟ್ವಾಳ ತಾಲೂಕಿನ ತುಂಬೆ ಗ್ರಾಮದ ಚೆನ್ನಕೇಶವ ನಾಪತ್ತೆ

ಬಂಟ್ವಾಳ: ಕಾಮಗಾರಿಯ ಪ್ರಗತಿಯ ಕುರಿತು ಪುರಸಭಾ ಜನಪ್ರತಿನಿಧಿಗಳ ಸಭೆ….!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕೇಪು ಗ್ರಾಮ ಪಂಚಾಯಿತಿಗೆ ಕಿಶೋರ್ ಕುಮಾರ್ ಭೇಟಿ…!

ಬಂಟ್ವಾಳ: ಕಾರು ಮೇಲ್ಸೇತುವೆಗೆ ಡಿ*ಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಚಾಲಕ…!

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

error: Content is protected !!