2025ನೇ ಸಾಲಿನ ಇಂಡಿಯನ್ ಪ್ರೀಮಿಯರ್ ಲೀಗ್ ಟ್ವೆಂಟಿ-20 ಕ್ರಿಕೆಟ್ ಟೂರ್ನಿಯಲ್ಲಿ ಇಂದು ನಡೆಯುತ್ತಿರುವ ಪಂದ್ಯದಲ್ಲಿ ಗುಜರಾತ್ ಟೈಟನ್ಸ್ ತಂಡವು ಲಖನೌ ಸೂಪರ್ ಜೈಂಟ್ಸ್ ಸವಾಲನ್ನು ಎದುರಿಸುತ್ತಿದೆ. ಈ ಪಂದ್ಯವು ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿದೆ.

ಟಾಸ್ ಗೆದ್ದಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಶುಭಮನ್ ಗಿಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ. ಈಗಾಗಲೇ ಪ್ಲೇಆಫ್ ಪ್ರವೇಶಿಸಿರುವ ಗುಜರಾತ್ ಟೈಟನ್ಸ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಕಾಯ್ದುಕೊಳ್ಳುವ ಇರಾದೆಯಲ್ಲಿದೆ.ಮತ್ತೊಂದೆಡೆ ಈಗಾಗಲೇ ಪ್ಲೇ ಆಫ್ ಹಾದಿಯಿಂದ ಹೊರಬಿದ್ದಿರುವ ಲಖನೌ ತಂಡವು ಸಮಾಧಾನಕರ ಗೆಲುವಿನ ನಿರೀಕ್ಷೆಯಲ್ಲಿದೆ. ಲೀಗ್‌ನಲ್ಲಿ 12 ಪಂದ್ಯಗಳಿಂದ 18 ಅಂಕಗಳನ್ನು ಗಳಿಸಿರುವ ಗುಜರಾತ್, ಸದ್ಯ ಪಾಯಿಂಟ್ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಪಂಜಾಬ್ ಕಿಂಗ್ ತಂಡಗಳು ಕ್ರಮವಾಗಿ ಎರಡು ಮತ್ತು ಮೂರನೇ ಸ್ಥಾನಗಳಲ್ಲಿವೆ.



