ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶಾಸಕರ ಅಮಾನತು ಸ್ಪೀಕರ್ ಆದೇಶವೇ ಅಸಾಂವಿಧಾನಿಕ : ಯಶ್ ಪಾಲ್ ಸುವರ್ಣ

ಕಳೆದ ಅಧಿವೇಶನ ಅವಧಿಯಲ್ಲಿ ಸ್ಪೀಕರ್ 18 ಮಂದಿ ಶಾಸಕರ ಅಮಾನತು ಆದೇಶವೇ ಅಸಾಂವಿಧಾನಿಕ ನಡೆಯಾಗಿದ್ದು, ಇದೀಗ ಸ್ಪೀಕರ್‌ರವರು ತಮ್ಮ ಆದೇಶವನ್ನು ಹಿಂಪಡೆಯುವ ಮೂಲಕ ಶಾಸಕರಾಗಿ ನಮ್ಮ ಜವಾಬ್ದಾರಿಯನ್ನು ನಿರ್ವಹಿಸಲು ಅವಕಾಶ ನೀಡಿದಂತಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ಪ್ರತಿಕ್ರಿಯೆ ನೀಡಿದ್ದಾರೆ.


ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಸರಕಾರಿ ಕಾಮಗಾರಿಯಲ್ಲಿ ಮುಸ್ಲಿಂ ಗುತ್ತಿಗೆದಾರರಿಗೆ ಮೀಸಲಾತಿ ಹಾಗೂ ಕಾಂಗ್ರೆಸ್ ಸಚಿವರು ಶಾಸಕರ ಹನಿಟ್ರ‍್ಯಾಪ್ ವಿಚಾರದ ಬಗ್ಗೆ ವಿಪಕ್ಷದ ಶಾಸಕರಾಗಿ ಸದನದಲ್ಲಿ ಆಡಳಿತರೂಡ ಸರಕಾರವನ್ನು ವಿರೋಧಿಸುವುದು ನಮ್ಮ ಕರ್ತವ್ಯ. ಸ್ಪೀಕರ್ ಏಕಪಕ್ಷೀಯವಾಗಿ 6 ತಿಂಗಳ ಕಾಲ ಶಾಸಕರನ್ನು ಅಮಾನತು ಮಾಡುವ ಮೂಲಕ ನಮ್ಮ ಸಂವಿಧಾನ ಬದ್ಧ ಹಕ್ಕುಗಳನ್ನು ನಿರ್ಬಂಧಿಸಿದ್ದು ದುರದೃಷ್ಟಕರ. ಈಗಾಗಲೇ ಬಿಜೆಪಿ ಪಕ್ಷದ ವತಿಯಿಂದ ಸ್ಪೀಕರ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್ನಲ್ಲಿ ಅರ್ಜಿ ಸಲ್ಲಿಸಲಾಗಿದ್ದು, ರಾಜ್ಯದ ಘನವೆತ್ತ ರಾಜ್ಯಪಾಲರೂ ಸ್ಪೀಕರ್ ರವರಿಗೆ ಅಮಾನತು ಆದೇಶ ಹಿಂಪಡೆಯುವAತೆ ಪತ್ರ ಬರೆದಿದ್ರು. ಓರ್ವ ವಿಪಕ್ಷ ಶಾಸಕನಾಗಿ ಸರ್ಕಾರದ ಜನವಿರೋಧಿ ನೀತಿ ಹಾಗೂ ಮಸೂದೆಗಳನ್ನು ವಿರೋಧಿಸುವುದು ನನ್ನ ಕರ್ತವ್ಯ. ಇಂತಹ ಅಮಾನತು ಆದೇಶಗಳಿಂದ ನಮ್ಮ ಹೋರಾಟವನ್ನು ಹತ್ತಿಕ್ಕಲು ಎಂದಿಗೂ ಸಾಧ್ಯವಿಲ್ಲ ಹಾಗೂ ನಮ್ಮ ಸಿದ್ಧಾಂತ ಹಾಗೂ ರಾಷ್ಟೀಯ ವಿಚಾರದಲ್ಲಿ ಎಂದಿಗೂ ರಾಜೀ ಮಾಡುವ ಪ್ರಶ್ನೆಯೇ ಇಲ್ಲ ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ತುಳುನಾಡಿಗೆ ಕಯ್ಯಾರ ಕಿಞ್ಞಣ್ಣ ರೈ ಕೊಡುಗೆ ಅಪಾರ: ಜಯಕರ ಶೆಟ್ಟಿ

ಮಂಗಳೂರು: ಮಂಗಳೂರು ಪತ್ರಕರ್ತ ಸುರೇಶ್ ಡಿ. ಪಳ್ಳಿಗೆ ನಾರದ ಪುರಸ್ಕಾರ ಘೋಷಣೆ

ರಾಷ್ಟ್ರ ಪ್ರಶಸ್ತಿ ವಿಜೇತೆ ರೂಪಶ್ರೀ ವರ್ಕಾಡಿಗೆ ಬಿಜೆಪಿ ಜಿಲ್ಲಾ ಘಟಕದಿಂದ ಸನ್ಮಾನ…!

ಬಿಜೆಪಿ ರಾಷ್ಟ್ರೀಯ ವಕ್ತಾರ ಹುದ್ದೆಗೆ ಪೂನಾವಾಲಾ ಗುಡ್‌ಬೈ?…

ಚಿನ್ನದ ದರದಲ್ಲಿ ಬದಲಾವಣೆ; ಹೊಸ ಬೆಲೆ ಪ್ರಕಟ…!

ತುಮಕೂರು: ಪೊಲೀಸ್ ಪುತ್ರನೇ ಹೈಡ್ರೋ ಗಾಂಜಾ ಜಾಲದ ರೂವಾರಿ..!

ಪಾಕಿಸ್ತಾನದಲ್ಲಿ ಭೀಕರ ಗಣಿ ಸ್ಫೋಟ; 32 ಕಾರ್ಮಿಕರ ದುರ್ಮರಣ…!

ಬೀರತಮ್ಮನಹಳ್ಳಿ ಕೆರೆಯಲ್ಲಿ ಮೀನುಗಳ ಮಾರಣಹೋಮ; ತನಿಖೆ ಆರಂಭ…!

ಕುಂದಾಪುರ: ಐವನ್ ಮಸ್ಕರೇನಸ್ ಹತ್ಯೆ; ಪೊಲೀಸ್ ತನಿಖೆಯಲ್ಲಿ ಹೊಸ ಮಾಹಿತಿ..!

error: Content is protected !!