ಮಂಗಳೂರು ಹೊರವಲಯದ ಮರವೂರು ಬಳಿ ಮನೆಗಳಿಗೆ ಮಳೆ ನೀರು ನುಗ್ಗಿದೆ. ಫಲ್ಗುಣಿ ನದಿ ಸಮೀಪದಲ್ಲೇ ಇರುವ ಮನೆಗಳಿಗೆ ನೀರು ನುಗ್ಗಿದ್ದು, ಮನೆ ಮಂದಿ ಮೊಣಕಾಲು ಮಟ್ಟದ ನೀರಿನಲ್ಲಿ ನಡೆಯುತ್ತಿದ್ದಾರೆ.

ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ. ಮನೆಯಲ್ಲಿದ್ದ ಫ್ರಿಡ್ಜ್ ಅರ್ಧಾಂಶ ನೀರಿನಲ್ಲಿ ಮುಳುಗಿದೆ. ಸ್ಥಳೀಯವಾಗಿ ಮಣ್ಣು ಹಾಕುವುದರಿಂದ ನೀರು ಹೋಗದೆ ಸಮಸ್ಯೆಯಾಗಿದೆ ಎಂದು ಸ್ಥಳೀಯರು ಹೇಳುತ್ತಿದ್ದಾರೆ. ನೀರಿನ ಮಟ್ಟ ಏರುತ್ತಿರುವುದರಿಂದ ಕೆಲವು ಮನೆಗಳ ನಿವಾಸಿಗಳನ್ನು ಸ್ಥಳಾಂತರ ಮಾಡಲಾಗಿದೆ. ಮಂಗಳೂರು ಹೊರವಲಯದ ಮರವೂರು ಬಳಿ ಮನೆಗಳಿಗೆ ಮಳೆ ನೀರು ನುಗ್ಗಿದೆ.



