ಅದಮಾರು ಮಠದ ವತಿಯಿಂದ ನಡೆದ ಸಂತ ಸನ್ಮಾರ್ಗ ಶಿಬಿರದಲ್ಲಿ ಮಕ್ಕಳು ಮತ್ತು ಪೋಷಕರಿಗೆ ವಿದ್ವಾಂಸರಿಂದ ವಿವಿಧ ಆಯಾಮಗಳಲ್ಲಿ ರಾಮಾಯಣ, ಮಹಾಭಾರತ, ಭಗವದ್ಗೀತೆಯ ಮಹತ್ವವನ್ನು ಸಾರುವ ಉಪನ್ಯಾಸಗಳನ್ನು ಆಯೋಜಿಸಲಾಗಿತ್ತು.

ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ,ಒಡಿಯೂರು ಶ್ರೀ ಗುರುದೇವಾನಂದ ಸ್ವಾಮೀಜಿ,ವಜ್ರದೇಹಿ ಶ್ರೀ ರಾಜಶೇಖರಾನಂದ ಸ್ವಾಮೀಜಿ,ಚಿತ್ರಾಪುರ ಶ್ರೀ ವಿದ್ಯೇಂದ್ರ ತೀರ್ಥ ಸ್ವಾಮೀಜಿ,ಕೊಂಡೆವೂರು ಶ್ರೀ ಯೋಗಾನಂದ ಸರಸ್ವತೀ ಸ್ವಾಮೀಜಿ,ಕರಿಂಜೆ ಮುಕ್ತಾನಂದ ಸ್ವಾಮೀಜಿ ಉಪಸ್ಥಿತಿಯಲ್ಲಿ ಶಿಬಿರ ಭಾರತೀಯ ಸಂಸ್ಕೃತಿಯ ಬಗ್ಗೆ ಅರಿವು ಮೂಡಿಸಲಾಯಿತು.



