ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ಮೇ 21 ರಂದು ‘ಯಕ್ಷಗಾನ ಕಲಾವಿದರ ಸಮಾವೇಶ’

ಉಡುಪಿ ಯಕ್ಷಗಾನ ಕಲಾರಂಗದ ವತಿಯಿಂದ ‘ಯಕ್ಷಗಾನ ಕಲಾವಿದರ ಸಮಾವೇಶ’ ಇದೇ ಮೇ ೩೧ರಂದು ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ ಎಂದು ಯಕ್ಷಗಾನ ಕಲಾರಂಗದ ಅಧ್ಯಕ್ಷ ಗಂಗಾಧರ್ ರಾವ್ ತಿಳಿಸಿದರು. ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕರ್ನಾಟಕ ಯಕ್ಷಗಾನ ಅಕಾಡೆಮಿ ಪ್ರಾಯೋಜಕತ್ವದಲ್ಲಿ ಬೆಳಿಗ್ಗೆ ೯ಗಂಟೆಗೆ ಕಲಾವಿದರಿಗೆ ಕೆಎಮ್‌ಸಿ ಮಣಿಪಾಲ ವೈದ್ಯರಿಂದ ಆರೋಗ್ಯ ತಪಾಸಣೆ ನಡೆಯಲಿದೆ. ಬೆಳಿಗ್ಗೆ ೧೦ಗಂಟೆಗೆ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ತಲ್ಲೂರು ಶಿವರಾಮ್ ಶೆಟ್ಟಿ ಸಮಾವೇಶವನ್ನು ಉದ್ಘಾಟಿಸಲಿದ್ದಾರೆ. ಬಳಿಕ ೧೦.೩೦ಕ್ಕೆ ಮಾಧವ ಮಾತೃ ಗ್ರಾಮಂ ಕೂಡಿಯಾಟ್ಟಂ ಗುರುಕುಲಂ ಇಜ್ಜೌಲಕುಡ, ತ್ರಿಶೂರ್ ಇವರಿಂದ “ಕೂಡಿಯಾಟ್ಟಂ”, “ಸೀತಾಪಹರಣಂ-ಜಟಾಯುವಧA” ಪ್ರದರ್ಶನಗೊಳ್ಳಲಿದೆ. ೧೧.೩೦ಕ್ಕೆ ಯಕ್ಷಗಾನ ಕಲಾವಿದರಿಗೆ “ಕಲೆ ಪೂರ್ಣಾವಧಿ ಉದ್ಯೋಗವಾಗಿರಬೇಕೆ.. ಉಪವೃತ್ತಿಯಾಗಿರಬೇಕೆ..?” ವಿಷಯದ ಕುರಿತು ಚರ್ಚೆ ಕಾರ್ಯಕ್ರಮ ನಡೆಯಲಿದೆ ಎಂದರು. 

ಕಲಾರAಗದ ಕಾರ್ಯದರ್ಶಿ ಮುರಲಿ ಕಡೆಕಾರ್ ಮಾತನಾಡಿ, ಮಧ್ಯಾಹ್ನ ೨.೩೦ಕ್ಕೆ ನಡೆಯುವ ಸಮಾರೋಪದಲ್ಲಿ ಪರ್ಯಾಯ ಪುತ್ತಿಗೆ ಶ್ರೀ ಸುಗುಣೇಂದ್ರತೀರ್ಥರು ಹಾಗೂ ಕಿರಿಯ ಶ್ರೀ ಸುಶೀಂಧ್ರತೀರ್ಥರು ೫೦ ಮಂದಿ ಹಿರಿಯ ಕಲಾವಿದರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಪೇಜಾವರ ಶ್ರೀ ವಿಶ್ವಪ್ರಸನ್ನತೀರ್ಥರು ಆರ್ಶೀವಚನ ನೀಡಲಿದ್ದಾರೆ. ಉದ್ಯಮಿ ಡಾ.ಜಿ.ಶಂಕರ್ ಅಧ್ಯಕ್ಷತೆ ವಹಿಸಲಿದ್ದಾರೆ. ಮಣಿಪಾಲ ಮಾಹೆ ಸಹಕುಲಾಧಿಪತಿ ಡಾ. ಎಚ್.ಎಸ್ ಬಲ್ಲಾಳ್ ಸುವರ್ಣ ಉಡುಗೊರೆ ವಿತರಣೆ ಮಾಡಲಿದ್ದಾರೆ ಎಂದು ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಲಾರಂಗದ ಉಪಾಧ್ಯಕ್ಷ ಎಸ್.ವಿ. ಭಟ್, ಜೊತೆ ಕಾರ್ಯದರ್ಶಿ ನಾರಾಯಣ ಎಂ. ಹೆಗಡೆ, ಕೋಶಾಧಿಕಾರಿ ಸದಾಶಿವ ರಾವ್ ಉಪಸ್ಥಿತರಿದ್ದರು.
===========================

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!