ಜನ ಮನದ ನಾಡಿ ಮಿಡಿತ

Advertisement

ಅಹಮದಾಬಾದ್ : ಐಪಿಎಲ್ ಫೈನಲ್ ನಲ್ಲಿ ಭಾರತೀಯ ಸಶಸ್ತ್ರ ಪಡೆಗಳಿಗೆ ಗೌರವಾರ್ಪಣೆ

ಇಂಡಿಯನ್ ಪ್ರೀಮಿಯರ್ ಲೀಗ್ 2025ರ ಫೈನಲ್ ಪಂದ್ಯವನ್ನು ಭಾರತೀಯ ಸೈನಿಕರಿಗೆ ಅರ್ಪಿಸಲು ಬಿಸಿಸಿಐ ನಿರ್ಧರಿಸಿದೆ. ಇದಕ್ಕಾಗಿ ಜೂನ್ 3 ರಂದು ನಡೆಯಲಿರುವ ಅಂತಿಮ ಪಂದ್ಯದ ಸಮಾರೋಪ ಸಮಾರಂಭದಲ್ಲಿ ‘ಆಪರೇಷನ್ ಸಿಂಧೂರ್‘ ವಿಜಯೋತ್ಸವ ಆಚರಿಸಲಾಗುತ್ತದೆ. ಏಪ್ರಿಲ್ 22 ರಂದು ಪಾಕಿಸ್ತಾನ ಬೆಂಬಲಿತ ಉಗ್ರರು ಜಮ್ಮು-ಕಾಶ್ಮೀರದ ಪಹಲ್ಗಾಮ್​ನಲ್ಲಿ 26 ಮಂದಿ ಭಾರತೀಯರನ್ನು ಹತ್ಯೆಗೈದಿದ್ದರು. ಇದಕ್ಕೆ ಪ್ರತಿಯಾಗಿ ಭಾರತೀಯ ಸೇನೆ ಆಪರೇಷನ್ ಸಿಂಧೂರ್ ಮೂಲಕ ಪಾಕ್ ಮೇಲೆ ದಾಳಿ ನಡೆಸಿ ಪ್ರತೀಕಾರ ತೀರಿಸಿದ್ದರು. ಭಾರತೀಯ ಸೇನೆಯ ಈ ಕಾರ್ಯವನ್ನು ಗೌರವಿಸುವ ಸಲುವಾಗಿ ಇದೀಗ ಇಂಡಿಯನ್ ಪ್ರೀಮಿಯರ್ ಲೀಗ್​ನ ಫೈನಲ್ ಪಂದ್ಯದ ವೇಳೆ ಆಪರೇಷನ್ ಸಿಂಧೂರ್ ವಿಜಯೋತ್ಸವ ಆಚರಿಸಲು ನಿರ್ಧರಿಸಲಾಗಿದೆ.

ನಮ್ಮ ಸಶಸ್ತ್ರ ಪಡೆಗಳ ಶೌರ್ಯ, ಧೈರ್ಯ ಮತ್ತು ನಿಸ್ವಾರ್ಥ ಸೇವೆಗೆ ಬಿಸಿಸಿಐ ಗೌರವಿಸುತ್ತದೆ. ಆಪರೇಷನ್ ಸಿಂಧೂರ್ ಅಡಿಯಲ್ಲಿ ಅವರ ವೀರೋಚಿತ ಪ್ರಯತ್ನಗಳು ರಾಷ್ಟ್ರವನ್ನು ರಕ್ಷಿಸುತ್ತಿವೆ ಮತ್ತು ಪ್ರೇರೇಪಿಸುತ್ತಿವೆ. ಇದರ ಗೌರವಾರ್ಥವಾಗಿ, ಐಪಿಎಲ್​ ಫೈನಲ್ ಪಂದ್ಯವನ್ನು ಸಶಸ್ತ್ರ ಪಡೆಗಳಿಗೆ ಅರ್ಪಿಸಲು ಮತ್ತು ನಮ್ಮ ವೀರ ಸೈನಿಕರನ್ನು ಗೌರವಿಸಲು ನಾವು ನಿರ್ಧರಿಸಿದ್ದೇವೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ತಿಳಿಸಿದ್ದಾರೆ.

ಈ ಸಮಾರೋಪ ಸಮಾರಂಭಕ್ಕೆ ಭಾರತೀಯ ಕ್ರಿಕೆಟ್ ಆಡಳಿತ ಮಂಡಳಿಯು ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನು ಹಾಗೂ ಭೂಸೇನೆ, ನೌಕಾಪಡೆ ಮತ್ತು ವಾಯುಪಡೆಯ ಮುಖ್ಯಸ್ಥರನ್ನು ಆಹ್ವಾನಿಸಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವಜಿತ್ ಸೈಕಿಯಾ ಬಹಿರಂಗಪಡಿಸಿದ್ದಾರೆ. ಅಲ್ಲದೆ ಐಪಿಎಲ್ ಫೈನಲ್ ಪಂದ್ಯದ ಆರಂಭಕ್ಕೂ ಮುನ್ನ ಮಿಲಿಟರಿ ಬ್ಯಾಂಡ್‌ನ ಪ್ರದರ್ಶನವೂ ನಡೆಯಲಿದೆ ತಿಳಿದು ಬಂದಿದೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!