ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಮಂಗಳೂರಿನ ಖಾಸಗಿ ಆಸ್ಪತ್ರೆ ಮುಂಭಾಗ ಜಮಾಯಿಸಿರುವ ಮುಸ್ಲಿಮರು

ಮಂಗಳವಾರ ಮಧ್ಯಾಹ್ನ ಬಂಟ್ವಾಳದ ಇರಾಕೋಡಿಯಲ್ಲಿ ಹತ್ಯೆಗೀಡಾದ ಕೊಳತ್ತಮಜಲಿನ ಬೆಳೂರು ನಿವಾಸಿ ಪಿಕಪ್ ವಾಹನ ಚಾಲಕ ಅಬ್ದುಲ್ ರಹಮಾನ್ ಅವರ ಮೃತದೇಹ ಇರಿಸಿದ್ದ ಯೆನಪೊಯಾ ಆಸ್ಪತ್ರೆ ಎದುರು ಜಮಾಯಿಸಿದ್ದ ಗುಂಪು ಕೃತ್ಯಕ್ಕೆ ಕಾರಣರಾದವರನ್ನು ತಕ್ಷಣವೇ ಬಂಧಿಸಬೇಕು ಎಂದು ಆಗ್ರಹಿಸಿತು.

ಒಂದು ಹಂತದಲ್ಲಿ ಪೊಲೀಸರ ಜೊತೆ ತೀವ್ರ ವಾಗ್ವಾದಕ್ಕೆ ಇಳಿದ ಯುವಕರ ಗುಂಪು ಬುಧವಾರ ದಕ್ಷಿಣ ಕನ್ನಡ ಬಂದ್‌ಗೆ ಕರೆಕೊಡುವುದಾಗಿ ಹೇಳಿತು. ಈ ಹಂತದಲ್ಲಿ ಅಲ್ಲಿದ್ದ ಹಿರಿಯರು ಅವರನ್ನು ಸಮಾಧಾನ ಮಾಡಿದ್ರು. ಗಾಯಾಳು ಖಲಂದರ್ ಶಾಫಿಯನ್ನು ದಾಖಲಿಸಿದ್ದ ಹೈಲ್ಯಾಂಡ್ ಆಸ್ಪತ್ರೆ ಎದುರು ಕೂಡಾ ಯುವಕರ ಗುಂಪು ಹತ್ಯೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದುಡಿದು ತಿನ್ನುವವರ ಜೀವಕ್ಕೆ ಬೆಲೆ ಇಲ್ಲವೇ, ಯಾವ ಪ್ರಕರಣಗಳಲ್ಲೂ ಇಲ್ಲದ ಮುಗ್ಧರು ಜೀವ ಕಳೆದುಕೊಳ್ಳುತ್ತಿದ್ದಾರೆ, ಇದಕ್ಕೆ ಕೊನೆ ಯಾವಾಗ ಎಂದು ಪ್ರಶ್ನಿಸಿತು. ಬಜ್ಪೆ ಚಲೋ ಸಂದರ್ಭದಲ್ಲಿ ಮಾಡಿದ ಉದ್ರಿಕ್ತ ಭಾಷಣಗಳು ಇದಕ್ಕೆ ಕಾರಣ, ಸಮುದಾಯಗಳ ನಡುವೆ ದ್ವೇಷ ಹರಡುವವರ ವಿರುದ್ದ ಪೊಲೀಸರು ಕ್ರಮ ಕೈಗೊಳ್ಳುತ್ತಿಲ್ಲ ಎಂದೂ ಗುಂಪು ಆಕ್ರೋಶ ವ್ಯಕ್ತಪಡಿಸಿತು.

Leave a Reply

Your email address will not be published. Required fields are marked *

ಮಂಗಳೂರು: ಆಟವಾಡುತ್ತಾ 15 ಅಡಿ ಆಳದ ನೀರಿದ್ದ ಬಾವಿಗೆ ಬಿದ್ದ ಹೆಣ್ಣು ಮಗು….!

ಮಂಗಳೂರು: ಕಲ್ಲಡ್ಕ ಪ್ರಭಾಕರ್ ಭಟ್ ಅವರ ಭಾಷಣದ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ..!

ಬಂಟ್ವಾಳ: ಶ್ರೀರಾಮ ಜನ್ಮ ಭೂಮಿ ಅಯೋಧ್ಯೆಯಲ್ಲಿ “ಶ್ರೀರಾಮನ ಚರಿತ್ರೆಯ” ಯಕ್ಷಗಾನ….!

ಮಂಗಳೂರು: ಮಂಗಳೂರಿನ ಪತ್ರಿಕಾಭವನದಲ್ಲಿ `ಕೊಡಗಿನ ಕುಲದೇವತೆ ಕಾವೇರಿ’ ಕೃತಿ ಬಿಡುಗಡೆ..!

ಬಂಟ್ವಾಳ: ಜೋರಾದ ಮಳೆಗೆ ಬಂಟ್ವಾಳ ತಾಲೂಕಿನ ಇಡ್ಕಿದು ಗ್ರಾಮದಲ್ಲಿ ಮನೆಯೊಂದಕ್ಕೆ ಹಾನಿ..!

ಉಡುಪಿ: ಸಬ್ಸಿಡಿ ಲೋನ್ ಮಾಡಿಸಿಕೊಡುವುದಾಗಿ ನಂಬಿಸಿ ಮೋಸ ಮಾಡಿದ ಮಹಿಳೆ..!

ದುಬೈ: ಅಕ್ಟೋಬರ್ 25 ರಂದು ದುಬೈನಲ್ಲಿ ದುಬೈ ಗಡಿನಾಡ ಉತ್ಸವ

ಮಂಗಳೂರು: ಅಶೋಕ ಜನಮನ ಕಾರ್ಯಕ್ರಮ ಆಯೋಜನೆ; ನೂಕು ನುಗ್ಗಲು ಉಂಟಾಗಿ ಅಸ್ವಸ್ಥರಾದ 11ಕ್ಕೂ ಹೆಚ್ಚು ಜನ…!

ಬಂಟ್ವಾಳ: ದ.ಕ.ಜಿಲ್ಲಾ ತುಳು ನಾಟಕ ಕಲಾವಿದರ ಒಕ್ಕೂಟ ವಾರ್ಷಿಕ ಮಹಾಸಭೆ; ನೂತನ ಅಧ್ಯಕ್ಷರಾಗಿ ಕಿಶೋರ್ ಡಿ.ಶೆಟ್ಟಿ ಪುನರಾಯ್ಕೆ….!

error: Content is protected !!