ಜನ ಮನದ ನಾಡಿ ಮಿಡಿತ

Advertisement

ಬೆಂಗಳೂರು : ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು – ಸಿಎಂ ಸಿದ್ದು

ಸೈನಿಕರು, ರೈತರು, ವೈದ್ಯರು, ಶಿಕ್ಷಕರು ನಮ್ಮ ತಂದೆ-ತಾಯಿಯಷ್ಟೇ ಸ್ಮರಣೀಯರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ನಗರದ ಟೌನ್‌ಹಾಲ್‌ನಲ್ಲಿ ಆಯೋಜಿಸಿದ್ದ ಬೃಹತ್ ʼಜೈ ಹಿಂದ್ ಸಭಾʼ ಕಾರ್ಯಕ್ರಮದಲ್ಲಿ ಭಾರತೀಯ ಯೋಧರ ಪರಂಪರೆಯನ್ನು ಶ್ಲಾಘಿಸಿ, ನಿವೃತ್ತ ಯೋಧ ಸಮೂಹವನ್ನು ಸನ್ಮಾನಿಸಿ, ಹುತಾತ್ಮ ಯೋಧರ ಕುಟುಂಬದ ಸದಸ್ಯರನ್ನು ಸನ್ಮಾನಿಸಿ, ಪುರಸ್ಕರಿಸಿ ಮಾತನಾಡಿದ ಅವರು, ತ್ಯಾಗ ಮನೋಭಾವದಿಂದ ಯೋಧರು ದೇಶ ರಕ್ಷಣೆಯಲ್ಲಿ ತೊಡಗಿದ್ದಾರೆ. ದೇಶದ ರಕ್ಷಣೆ ಕೇವಲ ಯೋಧರ ಜವಾಬ್ದಾರಿಯಲ್ಲ. 140 ಕೋಟಿ ಭಾರತೀಯರ ಜವಾಬ್ದಾರಿ ಎಂದು ಹೇಳಿದರು.

ಶಿಷ್ಟ ರಕ್ಷಣೆ-ದುಷ್ಟರ ಸಂಹಾರದ ವಿಚಾರದಲ್ಲಿ ಭಾರತ ತನ್ನ ಇತಿಹಾಸದಲ್ಲೇ ಯಾವತ್ತೂ ರಾಜಿ ಆಗಿಲ್ಲ. ಮುಂದೆಯೂ ಆಗುವುದಿಲ್ಲ. ಇದು ಪ್ರತಿಯೊಬ್ಬ ಭಾರತೀಯರ ಬದ್ಧತೆ ಎಂದು ಶ್ಲಾಘಿಸಿದರು.

ಯೋಧರ ಕ್ಯಾಂಟೀನ್‌ಗೆ ಅಬಕಾರಿ ಸುಂಕ ಹಾಕುವುದಿಲ್ಲ ಎಂದು ಇದೇ ಸಂದರ್ಭದಲ್ಲಿ ಸಿಎಂ ಘೋಷಣೆ ಮಾಡಿದರು. ಹಾಗೆಯೇ ನಿವೃತ್ತ ಯೋಧರ ಕಲ್ಯಾಣಕ್ಕೆ ಅಗತ್ಯ ಕ್ರಮಗಳನ್ನೆಲ್ಲಾ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.‌

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!