ಜನ ಮನದ ನಾಡಿ ಮಿಡಿತ

Advertisement

ಹಾಸನ: ಪಾಪಣ್ಣ ಹಾಗೂ ಗಾಯತ್ರಿ ದಂಪತಿಯ ಪುತ್ರಿ ಹೃದಯಾಘಾತದಿಂದ ನಿಧನ

ಅಂತಿಮ ವರ್ಷದ ಪದವಿ ವಿದ್ಯಾರ್ಥಿನಿ ಹೃದಯಾಘಾತದಿಂದ ಜೀವಬಿಟ್ಟಿರೋ ಘಟನೆ ಕೆಲವತ್ತಿ ಗ್ರಾಮದಲ್ಲಿ ನಡೆದಿದೆ. ಕವನ.ಕೆ.ವಿ. ಮೃತ ವಿದ್ಯಾರ್ಥಿನಿಯಾಗಿದ್ದಾಳೆ.

ಮೃತ ಕವನ.ಕೆ.ವಿ. ಕೆಲವತ್ತಿ ಗ್ರಾಮದ ಪಾಪಣ್ಣ-ಗಾಯತ್ರಿ ದಂಪತಿ ಪುತ್ರಿಯಾಗಿದ್ದಾರೆ. ಕವನ ಹಾಸನ ನಗರದ ಎಂ.ಜಿ.ರಸ್ತೆಯಲ್ಲಿರುವ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿ.ಕಾಂ. ವಿದ್ಯಾರ್ಥಿನಿಯಾಗಿದ್ಲು. ಈಗಾಗಲೇ ಕವನ.ಕೆ.ವಿ. ಮೂರು ವಿಷಯಗಳ ಪರೀಕ್ಷೆ ಬರೆದಿದ್ರು. ಇನ್ನೂ ಮೂರು ಎಕ್ಸಾಂಗಳನ್ನು ಬರೆಯಬೇಕಿತ್ತು. ನಾಳೆ ನಾಲ್ಕನೇ ವಿಷಯದ ಪರೀಕ್ಷೆ ಬರೆಯಬೇಕಿದ್ದು, ಸಂಜೆ ಮನೆಗೆ ನೀರು ತರುತ್ತಿದ್ದಾಗ ದಿಢೀರ್ ಎದೆನೋವು ಕಾಣಿಸಿಕೊಂಡಿದೆ.ಹೀಗಾಗಿ ತಾಯಿ ಬಳಿ ಕುಡಿಯಲು ನೀರು ಕೇಳಿದ್ದರಂತೆ. ತಾಯಿ ನೀರು ತಂದು ಕೊಡುವಷ್ಟರಲ್ಲಿ ಮನೆಯಲ್ಲಿಯೇ ಕುಸಿದು ಬಿದ್ದಿದ್ದರಂತೆ. ಆ ಕೂಡಲೇ ಪೋಷಕರು ಕವನಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದಾರೆ. ಆದರೆ ಅಷ್ಟೋತ್ತಿಗಾಗಲೇ ಕವನ ಹೃದಯಾಘಾತದಿಂದ ಮೃತಪಟ್ಟಿದ್ದಾಳೆ. ಮುದ್ದಾದ ಮಗಳನ್ನು ಕಳೆದುಕೊಂಡ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಅಷ್ಟೇ ಅಲ್ಲದೇ ಸಹಪಾಠಿಗಳು ಹಾಗೂ ಕಾಲೇಜು ಉಪನ್ಯಾಸಕ ವರ್ಗದಲ್ಲಿ ಶೋಕ ಮಡುಗಟ್ಟಿದೆ.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!