ಯಸ್ ಬಿ ಗ್ರೂಪ್ಸ್ ಅರ್ಪಿಸುವ, ಶಿಯಾನ ಪ್ರೊಡಕ್ಷನ್ ಹೌಸ್ ಬ್ಯಾನರ್‌ನಡಿ ತಯಾರಾದ ಬಹು ನಿರೀಕ್ಷಿತ “ಪಿಲಿಪಂಜ” ತುಳು ಸಿನಿಮಾದ ಬಿಡುಗಡೆ ದಿನಾಂಕವನ್ನು ನಾಟಕಕಾರ, ಸಿನಿಮಾ ನಿರ್ದೇಶಕ, ನಿರ್ಮಾಪಕ ಡಾ.ದೇವದಾಸ್ ಕಾಪಿಕಾಡ್ ಅವರು ಬಿಡುಗಡೆಗೊಳಿಸಿದ್ದಾರೆ.
ತುಳು ಸಿನಿಮಾರಂಗದಲ್ಲಿ ವಿಭಿನ್ನ ತಂತ್ರಜ್ನಾನದಿ0ದ ತಯಾರಾದ “ಪಿಲಿಪಂಜ” ಸಿನಿಮಾ ನವೆಂಬರ್ 7ರಂದು ತುಳುನಾಡಿನಾದ್ಯಂತ ಬಿಡುಗಡೆಯಾಗಲಿದೆ, ಸಿನಿಮಾದ ಟೀಸರ್ ಈಗಾಗಲೇ ಬಿಡುಗಡೆಯಾಗಿ ಭಾರೀ ಸದ್ದು ಮಾಡಿದೆ, ಟೀಸರ್ ನಮ್ಮನ್ನು ಇನ್ನಷ್ಟು ಕುತೂಹಲ ಮೂಡಿಸವಂತೆ ಮಾಡಿದೆ, ಸಿನಿಮಾ ಯಶಸ್ವಿಯಾಗುವುದರಲ್ಲಿ ಎರಡು ಮಾತಿಲ್ಲ. ತುಳು ಕಲಾಭಿಮಾನಿಗಳು ನವೆಂಬರ್ 7ರಂದು ಬಿಡುಗಡೆಯಾಗುವ ಈ ಸಿನಿಮಾವನ್ನು ನೋಡಿ ಚಿತ್ರತಂಡವನ್ನು ಬೆಂಬಲಿಸಬೇಕೆAದು ವಿನಂತಿಸಿದ್ರು. ಇನ್ನು ಈ ಸಂದರ್ಭದಲ್ಲಿ ನಿರ್ಮಾಪಕ ಪ್ರತೀಕ್ ಯು ಪೂಜಾರಿ ಕಾವೂರು, ನಿರ್ದೇಶಕ ಭರತ್ ಶೆಟ್ಟಿ, ಎಕ್ಸಿಕ್ಯೂಟಿವ್ ಪ್ರೊಡ್ಯೂಸರ್ ಹಾಗೂ ಕಲಾವಿದ ರಮೇಶ್ ರೈ ಕುಕ್ಕುವಳ್ಳಿ ಉಪಸ್ಥಿತರಿದ್ರು.



