ಜನ ಮನದ ನಾಡಿ ಮಿಡಿತ

Advertisement

ಉಡುಪಿ: ಉಡುಪಿ ಜಿಲ್ಲಾ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅಧಿಕಾರ ಸ್ವೀಕಾರ

ಉಡುಪಿ ಜಿಲ್ಲೆಯ ನೂತನ ಎಸ್ಪಿ ಆಗಿ ಹರಿರಾಮ್ ಶಂಕರ್ ಅವರು ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬನ್ನಂಜೆ ಎಸ್ಪಿ ಕಚೇರಿಯಲ್ಲಿ ನಿರ್ಗಮಿತ ಎಸ್ಪಿ ಡಾ. ಅರುಣ್ ಕುಮಾರ್ ಅವರು ನೂತನ ಎಸ್ಪಿಗೆ ಅಧಿಕಾರ ಹಸ್ತಾಂತರಿಸಿದ್ರು. ಈ ಮೊದಲು ಹರಿರಾಮ್ ಶಂಕರ್ ಅವರು ರಾಜ್ಯ ಇಂಟಲಿಜೆನ್ಸ್ ಎಸ್ಪಿಯಾಗಿದ್ದರು. ಡಾ. ಅರುಣ್ ಕುಮಾರ್ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆ ಮಾಡಲಾಗಿದೆ.

ಅಧಿಕಾರ ಸ್ವೀಕರಿಸಿ ಮಾತನಾಡಿದ ನೂತನ ಎಸ್ಪಿ ಹರಿರಾಮ್ ಶಂಕರ್ ಅವರು, ಉಡುಪಿ ಜಿಲ್ಲೆಯ ಜನತೆ ಕೋಮು ಪ್ರಚೋದನೆಗೆ ಅವಕಾಶ ನೀಡಬಾರದು. ಕೋಮು ಪ್ರಚೋದನೆ ನೀಡುವ ಮಾಹಿತಿಗಳಿದ್ದರೆ ತಕ್ಷಣವೇ ಪೊಲೀಸರಿಗೆ ತಿಳಿಸಬೇಕು. ಸಾರ್ವಜನಿಕರು ಯಾವುದೇ ಪ್ರಚೋದನೆ, ಅಹಿತಕರ ಘಟನೆಗಳಿಗೆ ಅವಕಾಶ ನೀಡದೆ ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು. ಕೋಮು ಪ್ರಚೋದನೆ, ಅಕ್ರಮ ಚಟುವಟಿಕೆಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು. ಹಿಂದಿನ ಎಸ್ಪಿ ಅರುಣ್ ಕುಮಾರ್ ಅವರು, ಅಕ್ರಮ ಚಟುವಟಿಕೆ ವಿರುದ್ಧ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡಲು ಯಾವುದೆಲ್ಲ ಕ್ರಮಗಳನ್ನು ತೆಗೆದುಕೊಂಡಿದ್ದರೋ ಅವುಗಳನ್ನು ಮುಂದುವರಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!