ಜನ ಮನದ ನಾಡಿ ಮಿಡಿತ

Advertisement

ಮೊಂಟೆಪದವು: ತಾಯಿಯ ಪಕ್ಕದಲ್ಲೇ ಕೈಯಾಡಿಸಿ, ಕಿರುಚುತ್ತಿದ್ದ ಮಗುಮ ಇನ್ನಿಲ್ಲ..!

ಮಂಜನಾಡಿ ಗ್ರಾಮದ ಮೊಂಟೆಪದವು ಹಿತ್ತಿಲುಕೋಡಿ ಕೊಪ್ಪಲದಲ್ಲಿ ಮನೆ ಮೇಲೆ ಗುಡ್ಡ ಕುಸಿದು ಸಂಭವಿಸಿದ ದುರಂತದಲ್ಲಿ ಮೃತರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಅವಶೇಷಗಳಡಿಯಲ್ಲಿ ಸಿಲುಕಿದ್ದ ಅಶ್ವಿನಿಯವರ ಇನ್ನೊಂದು ಮಗು ಕೂಡಾ ಮೃತಪಟ್ಟಿದೆ. ಈ ನಡುವೆ ಅಶ್ವಿನಿಯವರನ್ನು ರಕ್ಷಿಸಲಾಗಿದೆ. ಒಂದೂವರೆ ವರ್ಷ ಪ್ರಾಯದ ಮಗು ಆಯುಷ್ ಮೃತಪಟ್ಟಿದೆ.

ಕೆಲಹೊತ್ತಿನ ಮೊದಲು ಮೂರು ವರ್ಷದ ಮಗು ಆರ್ಯನ್ ಕೂಡಾ ಮೃತಪಟ್ಟಿತ್ತು. ಶುಕ್ರವಾರ ಮುಂಜಾನೆ ನಾಲ್ಕು ಗಂಟೆ ಸುಮಾರಿಗೆ ಸಂಭವಿಸಿದ ಈ ದುರಂತದಲ್ಲಿ ಮನೆ ಮಾಲಕ ಕಾಂತಪ್ಪ ಪೂಜಾರಿಯವರ ಪತ್ನಿ ಪ್ರೇಮಾ ಸ್ಥಳದಲ್ಲೇ ಮೃತಪಟ್ಟಿದ್ದರು. ಕಾಂತಪ್ಪರ ಮಗ ಸೀತಾರಾಮ ಅವರ ಪತ್ನಿ ಅಶ್ವಿನಿ ಹಾಗೂ ಅವರ ಇಬ್ಬರು ಸಣ್ಣ ಮಕ್ಕಳು ಕುಸಿದ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದರು. ಈ ಪೈಕಿ ಒಂದೂವರೆ ವರ್ಷ ಪ್ರಾಯದ ಮಗು ಆಯುಷ್‌ನನ್ನು ಮಧ್ಯಾಹ್ನದ ವೇಳೆ ರಕ್ಷಣಾ ತಂಡ ಅವೇಷಗಳಡಿಯಿಂದ ಹೊರ ತೆಗೆದಿತ್ತು. ಆದರೆ ಅಷ್ಟರಲ್ಲಿ ಮಗು ಕೊನೆಯುಸಿರೆಳೆದಿತ್ತು. ಬಳಿಕ ತಾಯಿ ಹಾಗೂ ಇನ್ನೊಂದು ಮಗು ಆಯುಷ್ ನನ್ನು ಹೊರತೆಗೆಯಲಾಗಿದೆ. ಆದರೆ ಮಗು ಮೃತಪಟ್ಟಿತ್ತು. ಅಶ್ವಿನಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಸಿದ ಮನೆಯೊಳಗೆ ಸಿಲುಕಿದ್ದ ಕಾಂತಪ್ಪ ಪೂಜಾರಿ ಹಾಗೂ ಅವರ ಪುತ್ರ ಸೀತಾರಾಮರನ್ನು ಬೆಳಗ್ಗೆ ರಕ್ಷಿಸಲಾಗಿದೆ. ಕಾಂತಪ್ಪರ ಕಾಲಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

Leave a Reply

Your email address will not be published. Required fields are marked *

ಬೆಂಗಳೂರು: ಗ್ರಾಮ ಪಂಚಾಯತ್‌ನಿಂದ ವಿಧಾನಸಭೆಯವರೆಗೆ AI ಕಡ್ಡಾಯ- ಯು.ಟಿ. ಖಾದರ್

ಬೆಂಗಳೂರು: ಸೇಫ್ ಫುಟ್‌ಪಾತ್ ಅಭಿಯಾನ ಯಶಸ್ಸು; ಪೀಣ್ಯದಲ್ಲಿ ರಾತ್ರಿ ಟ್ರಾಫಿಕ್ ಡೈವರ್ಷನ್…!

18 ಸೈನಿಕರ ಸಾವಿನ ಬಳಿಕ ಇರಾನ್ ವಿರುದ್ಧ ಹೊಸ ಯುದ್ಧ ತಂತ್ರಕ್ಕೆ ಮೊರೆ ಹೋದ ಟ್ರಂಪ್ ಆಡಳಿತ

ಜಾಗತಿಕ ಬಂಟರ ಸಂಘಗಳ ಒಕ್ಕೂಟದ ವತಿಯಿಂದ ಮಂಜುನಾಥ್ ಶೆಟ್ಟಿ ದಂಪತಿಗೆ ಸನ್ಮಾನ

ಉಡುಪಿ: ಕರಾವಳಿ ನಿವಾಸಿಗಳ ಸಂಕಷ್ಟಕ್ಕೆ ಸ್ಪಂದಿಸಿದ ಜಿಲ್ಲಾಡಳಿತ…!

ಬಂಟ್ವಾಳ: ಮಾಣಿ ಸಮೀಪ ಜೋಗಿಬೆಟ್ಟು ರಸ್ತೆ ಕೆರೆಯಂತಾದ ದೃಶ್ಯ….!

ವಾಷಿಂಗ್ಟನ್: ಉತ್ತರ ಅಮೆರಿಕಾ ಬಂಟರ ಸಂಘದ `ದಿಬ್ಬಣ’ ಮಹಾ ಅಧಿವೇಶನ..!

ಮಂಗಳೂರು: ಮಂಗಳೂರಿನಲ್ಲಿ ಎಐ ಸಿ.ಸಿ ಕ್ಯಾಮರಾಗಳ ಅಳವಡಿಕೆ….!

ಬಂಟ್ವಾಳ: ಮಳೆ ಅನಾಹುತ: ರಾಯಿಯ ಜೀವನ್ ಪಿಂಟೋ ಮೃತದೇಹ ಪ*ತ್ತೆ…..!

error: Content is protected !!