ಅಪಾರ್ಟ್ ಮೆಂಟ್‌ವೊ0ದರಲ್ಲಿ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ನಡೆದ ಘಟನೆ ಮಂಗಳೂರು ನಗರದ ಸ್ಟೇಟ್ ಬ್ಯಾಂಕ್‌ನ ರಾವ್ ಆ್ಯಂಡ್ ರಾವ್ ವೃತ್ತದ ಬಳಿ ನಡೆದಿದೆ.

ಅಪಾರ್ಟ್ ಮೆಂಟ್‌ನ ಎರಡನೇ ಮಹಡಿಯ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿದ್ದು ಮಾಹಿತಿ ತಿಳಿದ ತಕ್ಷಣ ಪಾಂಡೇಶ್ವರ ಅಗ್ನಿಶಾಮಕ ಠಾಣೆಯ ಅಧಿಕಾರಿ ಮತ್ತು ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಂದಿಸಿದ್ದಾರೆ. ಬೆಂಕಿಯಿ0ದ ಮನೆಯಲ್ಲಿದ್ದ ಸೋಫಾ, ಇಲೆಕ್ಟ್ರಾನಿಕ್ ಉಪಕರಣಗಳು ಬೆಂಕಿಗೆ ಆಹುತಿಯಾಗಿವೆ ಎಂದು ತಿಳಿದುಬಂದಿದೆ. ಈ ಮನೆಯಲ್ಲಿ ವಿದ್ಯಾರ್ಥಿಗಳು ಬಾಡಿಗೆಯಲ್ಲಿ ವಾಸವಿದ್ದು, ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯ ಉಂಟಾಗಿಲ್ಲ.

ಹೀಟರ್ ಬಳಕೆ ವೇಳೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ ಕಾಣಿಸಿಕೊಂಡಿರುವ ಸಾಧ್ಯತೆ ಇದೆ ಎಂದು ಅಂದಾಜಿಸಲಾಗಿದೆ. ಮನೆ ಹಾಗೂ ಎರಡನೇ ಮಹಡಿಯಲ್ಲಿ ದಟ್ಟ ಹೊಗೆ ಆವರಿಸಿದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಆಕ್ಸಿಜನ್ ಮಾಸ್ಕ್ ಸಿಲಿಂಡರ್ ಗಳನ್ನು ಬಳಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಿದ್ರು. ಫ್ಯಾನ್‌ಗಳನ್ನು ಬಳಸಿ ಹೊಗೆಯನ್ನು ಹೊರಬಿಡಲಾಯಿತು. ಬೆಂಕಿಯಿ0ದ ಸುಮಾರು 75 ಸಾವಿರ ರೂ. ನಷ್ಟ ಉಂಟಾಗಿದೆ ಎಂದು ಅಂದಾಜಿಸಲಾಗಿದೆ.



