ಜನ ಮನದ ನಾಡಿ ಮಿಡಿತ

ಇತ್ತೀಚಿನ ಸುದ್ದಿ
ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ
Advertisement

ದ.ಕ.ಜಿಲ್ಲೆ: ಸೌಜನ್ಯ ಹೋರಾಟಗಾರರಿಗೂ ಗಡಿಪಾರು ನೋಟೀಸ್..? ಅಸಲಿ ಉದ್ದೇಶವೇನು…??

ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ ಮುಟ್ಟಿಸತೊಡಗಿದೆ. ಮಹೇಶ್ ಶೆಟ್ಟಿ ತಿಮರೋಡಿ, ಅರುಣ್ ಪುತ್ತಿಲ, ಭರತ್ ಕುಮ್ಡೇಲು ಸೇರಿ 36 ಮಂದಿ ಗಡಿಪಾರಿಗೆ ಸಿದ್ದತೆ ಮಾಡಿದೆ. ಹೊಸ ಎಸ್ಪಿ ಡಾ.ಅರುಣ್ ನೇರ ಕರ‍್ಯಾಚರಣೆಗೆ ಇಳಿದಿದ್ದಾರೆ.


ಕೋಮು ದ್ವೇಷದ ಕೊಲೆ ಸರಣಿ ಮತ್ತು ಈ ರೀತಿಯ ಉದ್ವಿಗ್ನ ವಾತಾವರಣ ಮುಂದೆಂದೂ ಆಗಕೂಡದು ಎಂದು ನರ‍್ಧಾರಮಾಡಿರುವ ಮಾತು ಕಡಿಮೆ ಕೆಲಸ ಹೆಚ್ಚು ಎಂಬ ನಿಲುವಿನ ಎಸ್ಪಿ ಡಾ.ಅರುಣ್ ಮತ್ತು ನನಗೆ ಗೊತ್ತಿರುವುದು ಕಾನೂನು ಮಾತ್ರ ಎಂದಿರುವ ಮಂಗಳೂರು ಪೊಲೀಸ್ ಕಮಿಷನರ್ ಸುಧೀರ್ ಕುಮಾರ್ ರೆಡ್ಡಿ ಜಿಲ್ಲೆಯಲ್ಲಿ ಸರಣಿ ಹತ್ಯೆಗೆ ಪರ‍್ಣ ವಿರಾಮ ಹಾಕಲು ವ್ಯೂಹಾತ್ಮಕ ಕರ‍್ಯಯೋಜನೆ ಜಾರಿಗೆ ತರಲು ಶುರು ಮಾಡಿದ್ದಾರೆ.

ರೌಡಿ ಹಿನ್ನೆಲೆಯಿರುವ ವ್ಯಕ್ತಿಗಳು, ಸೌಜನ್ಯಾ ಪರ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿ, ಪ್ರಬಲ ಹಿಂದುತ್ವ ಹೋರಾಟಗಾರ ಅರುಣ್ ಪುತ್ತಿಲ ಸೇರಿದಂತೆ ಬಂಟ್ವಾಳ, ಪುತ್ತೂರು ವ್ಯಾಪ್ತಿಯ 36 ಮಂದಿಯನ್ನು ಜಿಲ್ಲೆಯಿಂದ ಗಡೀಪಾರು ಮಾಡಲು ಕ್ರಮ ಕೈಗೊಂಡಿದ್ದಾರೆ. ಹಾಲಿ ಬಿಜೆಪಿ ಮುಖಂಡರೂ, ಕಳೆದ ಬಾರಿ ಪುತ್ತೂರು ವಿಧಾನಸಭೆ ಕ್ಷೇತ್ರದಲ್ಲಿ ಬಿಜೆಪಿ ವಿರುದ್ಧ ಬಂಡೆದ್ದು ಗೆಲುವಿನ ಸನಿಹ ಬಂದು ಚಿಲ್ಲರೆ ಮತಗಳಿಂದ ಸೋಲು ಕಂಡಿದ್ದ ಅರುಣ್ ಪುತ್ತಿಲ ಅವರಿಗೆ ಗಡೀಪಾರು ಬಗ್ಗೆ ನೋಟಿಸ್ ನೀಡಲಾಗಿದ್ದು ಜೂನ್ 6ರಂದು ವಿಚಾರಣೆ ಹಾಜರಾಗಲು ಸೂಚಿಸಲಾಗಿದೆ. ಇದರ ಬೆನ್ನಲ್ಲೇ ಪೊಲೀಸ್ ಇಲಾಖೆ, ಬಂಟ್ವಾಳ ನಗರ, ಬಂಟ್ವಾಳ ಗ್ರಾಮಾಂತರ, ಬೆಳ್ತಂಗಡಿ, ಪುತ್ತೂರು ನಗರ, ಪುತ್ತೂರು ಗ್ರಾಮಾಂತರ, ಸುಳ್ಯ ಬೆಳ್ಳಾರೆ ವಿಟ್ಲ ಠಾಣೆ ವ್ಯಾಪ್ತಿಯ ರೌಡಿ ಲಿಸ್ಟ್ ಹೊಂದಿರುವ ಹಿಂದು ಮತ್ತು ಮುಸ್ಲಿಂ ಸಂಘಟನೆ ಕರ‍್ಯರ‍್ತರು, ಬಿಜೆಪಿಯಲ್ಲಿ ಗುರುತಿಸಿಕೊಂಡವರ ಪಟ್ಟಿ ರೆಡಿ ಮಾಡಿದ್ದು ಗಡೀಪಾರು ಮಾಡಲು ಕಾನೂನು ಪ್ರಕ್ರಿಯೆ ಆರಂಭಿಸಿದೆ. ಈ ಪಟ್ಟಿಯಲ್ಲಿ ಒಟ್ಟು 36 ಮಂದಿ ಇದ್ದರೆ, ಈ ಪೈಕಿ 13 ಮುಸ್ಲಿಮರಿದ್ದಾರೆ.

ಪಟ್ಟಿಯಲ್ಲಿ ಬೆಳ್ತಂಗಡಿ ಠಾಣೆ ವ್ಯಾಪ್ತಿಯ ಮಹೇಶ್ ಶೆಟ್ಟಿ ತಿಮರೋಡಿ ಮತ್ತು ಮನೋಜ್ ಕುಮಾರ್ ಹೆಸರು ಮಾತ್ರ ಇದೆ. ಉಳಿದಂತೆ, ಬಂಟ್ವಾಳ ಗ್ರಾಮಾಂತರ ಠಾಣೆಯ ಭರತ್ ಕುಮ್ಡೇಲು, ಭುವಿತ್ ಶೆಟ್ಟಿ ಸೇರಿ ಹಲವರ ಹೆಸರಿದೆ. ಎಲ್ಲರಿಗೂ ಆರಂಭದಲ್ಲಿ ನೋಟಿಸ್ ನೀಡಲಾಗುತ್ತಿದ್ದು ಅಭಿಪ್ರಾಯ ಪಡೆದು ಸೂಕ್ತ ಸ್ಪಂದನೆ ಸಿಗದಿದ್ದಲ್ಲಿ ಗಡಿಪಾರು ಮಾಡಲಿದ್ದಾರೆ. ಸದ್ಯಕ್ಕೆ ದಕ್ಷಿಣ ಕನ್ನಡ ಜಿಲ್ಲೆಯ ಗ್ರಾಮಾಂತರ ಅಂದರೆ, ಎಸ್ಪಿ ನಿಯಂತ್ರಣಕ್ಕೆ ಬರುವ ಠಾಣೆಗಳ ವ್ಯಾಪ್ತಿಯ 36 ಮಂದಿಯನ್ನು ಗಡೀಪಾರು ಮಾಡಲು ಇಲಾಖೆ ಮುಂದಾಗಿದೆ. ಇತ್ತೀಚಿನ ದಿನಗಳಲ್ಲಿ ಸೌಜನ್ಯಾ ಹೋರಾಟ ಮಾತ್ರ ಗುರಿ ಇರಿಸಿಕೊಂಡ ಮಹೇಶ್ ಶೆಟ್ಟಿ ತಿಮರೋಡಿ, ಅರುಣ್ ಪುತ್ತಿಲ ಅವರನ್ನು ಗಡೀಪಾರು ಮಾಡಲು ಮುಂದಾಗಿದ್ದು ವಿಶೇಷ. ಪೊಲೀಸ್ ಪಡೆಯ ನಗರ ಮುಖ್ಯಸ್ಥರು ಮತ್ತು ಜಿಲ್ಲಾ ಮುಖ್ಯಸ್ಥರು ಕೈಗೊಂಡಿರುವ ಕ್ರಮಗಳು ಹಿಂದೂ ನಾಯಕರ ಆಕ್ರೋಶವನ್ನು ಎದುರಿಸುತ್ತಿವೆ. ಮುಖ್ಯವಾಗಿ ಇತ್ತೀಚೆಗೆ ನಡೆದ ರಹೀಂ ಹತ್ಯೆಯ ಹಿಂದಿನ ನೈಜ ಕಾರಣ ಇನ್ನೂ ಗೊತ್ತಾಗಿಲ್ಲ.ಬರೇ ಊಹಾ ಪೋಹಗಳಷ್ಟೇ ಹರಡಿ ಅಲ್ಪಕಾಲೀನ ವಿಶ್ರಾಂತಿ ಪಡೆದಿವೆ. ಪೊಲೀಸ್ ಇಲಾಖೆ ಇದರ ಬಗ್ಗೆ ಸ್ಪಷ್ಟ ಮಾಹಿತಿಯನ್ನು ಅಧಿಕೃತವಾಗಿ ಹಂಚಿಕೊಳ್ಳಬೇಕಾಗಿದೆ.

Leave a Reply

Your email address will not be published. Required fields are marked *

ಮಂಗಳೂರು: ಪಡಿತರ ವಿತರಣೆಯ ತಾಂತ್ರಿಕ ಸಮಸ್ಯೆ ಪರಿಹರಿಸಿ; ಮನೆ ಬಾಗಿಲಿಗೆ ಪಡಿತರ ತಲುಪಿಸಲು ಆಗ್ರಹ

ಮಂಗಳೂರು: ಎಚ್‌ಪಿಸಿಎಲ್‌ನಿಂದ ಮಹಿಳಾ ಗುತ್ತಿಗೆ ಕಾರ್ಮಿಕರ ವಜಾ ಆರೋಪ; ವಾರದೊಳಗೆ ಸಮಸ್ಯೆ ಪರಿಹರಿಸಲು ಆಗ್ರಹ

ಬಂಟ್ವಾಳ: ಟಿಟಿಇ ಸಮಯಪ್ರಜ್ಞೆಯಿಂದ ರೈಲಿನಲ್ಲಿ ಕಾಣೆಯಾಗಿದ್ದ ₹80 ಸಾವಿರ ಮೌಲ್ಯದ ಲ್ಯಾಪ್‌ಟಾಪ್ ಬ್ಯಾಗ್ ಪತ್ತೆ

ಬಂಟ್ವಾಳ: ದಕ್ಷಿಣ ಕನ್ನಡ ಹೆದ್ದಾರಿ ಅಭಿವೃದ್ಧಿಗೆ ವೇಗ; ₹22.59 ಕೋಟಿ ವೆಚ್ಚದಲ್ಲಿ ಚತುಷ್ಪಥ ರಸ್ತೆ ಕಾಮಗಾರಿಗೆ ಚಾಲನೆ

ಬಂಟ್ವಾಳ: ಬಡವರ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಆರೋಪ; ಗ್ರಾಮ ಮಟ್ಟದಲ್ಲಿ ಬೃಹತ್ ಆಂದೋಲನಕ್ಕೆ ನಾಗರಿಕ ಹಿತರಕ್ಷಣಾ ಸಮಿತಿ ಕರೆ

ಮಂಗಳೂರು: ಬೆಳೆ ವಿಮೆ ಪರಿಹಾರದಲ್ಲಿ ಕಡಿತ: ರೈತರ ಅನುಮಾನಗಳಿಗೆ ಸರ್ಕಾರ ಸ್ಪಷ್ಟನೆ ನೀಡಲಿ–ಅರುಣ್ ಕುಮಾರ್ ಪುತ್ತಿಲ

ಪುತ್ತೂರು: ‘ಸೇವಾ ಮೇರಾ ಯೋಗದಾನ್’: ಪ್ರಜ್ಞಾ ಆಶ್ರಮದ ದಿವ್ಯಾಂಗ ಮಕ್ಕಳಿಗೆ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದಿಂದ ಅನ್ನದಾನ..!

ಉಡುಪಿ: ಉಡುಪಿಯಲ್ಲಿ ಅ.11ರಂದು ‘ಮಹಿಷ ಮಹೋತ್ಸವ’; ಮೂಲ ನಿವಾಸಿಗಳ ಸಾಂಸ್ಕೃತಿಕ ಹಬ್ಬ

ಉಡುಪಿ: ಉಡುಪಿಯಲ್ಲಿ ಅ.10ರಂದು ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆ; ಒಂಟಿತನ, ಸಾಮಾಜಿಕ ಪ್ರತ್ಯೇಕತೆ ಅಪಾಯಕಾರಿ

error: Content is protected !!