ಅಂತರಾಷ್ಟ್ರೀಯ ಯುವ ಶೃಂಗ ಸಭೆ 2025 ಅಂತರಾಷ್ಟ್ರೀಯ ಸಮ್ಮೇಳನವು ಜೂನ್ 5 ಮತ್ತು 6ರಂದು ಯೆಂಡುರೆನ್ಸ್ ಜೋನ್, ಯೇನೆಪೋಯ ಕಾಲೇಜಿನಲ್ಲಿ ನಡೆಯಲಿದೆ ಎಂದು ಡಾ.ನಾಗರಾಜ್ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಕರ್ನಾಟಕ ಸರಕಾರ, ರಾಜ್ಯ ಎನ್.ಎಸ್.ಎಸ್.ಕೋಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ರಾಷ್ಟ್ರೀಯ ಸೇವಾ ಯೋಜನೆ, ದಕ್ಷಿಣ ಕನ್ನಡ ಜಿಲ್ಲಾಡಳಿತ, ಮತ್ತು ಯೇನೆಪೋಯ ಇದರ ಸಂಯುಕ್ತ ಆಶ್ರಯದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮವನ್ನು ದಕ್ಷಿಣ ಕನ್ನಡ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಅವರು ಜೂನ್ 4ರ ಸಂಜೆ ಉದ್ಘಾಟಿಸಲಿದ್ದಾರೆ. ಭಾರತದಾದ್ಯಂತ 650 ಯುವ ಪ್ರತಿನಿಧಿಗಳು ವಿವಿಧ ರಾಜ್ಯಗಳಿಂದ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ. ಕರ್ನಾಟಕ ಸರಕಾರದಿಂದ ಅಂತಾರಾಷ್ಟ್ರೀಯ ಶೃಂಗ ಸಭೆಯು ಜಂಟಿಯಾಗಿ ಇದೇ ಮೊದಲ ಬಾರಿಗೆ ನಡೆಯುತ್ತಿದೆ ಎಂದಿದ್ದಾರೆ. ಇನ್ನು ಈ ಸುದ್ದಿಗೋಷ್ಠಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಇದರ ಸಹಾಯಕ ನಿರ್ದೇಶಕರಾದ ಪ್ರದೀಪ್ ಡಿ’ಸೋಜ, ಮಹಮ್ಮದ್ ಗುತ್ತಿದಾರ್ ಉಪಸ್ಥಿತರಿದ್ರು.



