ನವತೇಜಸ್ ಪುತ್ತೂರು ಸಂಘಟಿಸುವ 7ನೇ ವರ್ಷದ ಹಲಸು-ಹಣ್ಣು ಮೇಳ ಜೂ.6ರಿಂದ 8ರ ತನಕ ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ನಡೆಯಲಿದೆ ಎಂದು ಪುತ್ತೂರು ನವತೇಜ ಟ್ರಸ್ಟ್ ಅಧ್ಯಕ್ಷ ಅನಂತ ಪ್ರಸಾದ್ ನೈತಡ್ಕ ಟ್ರಸ್ಟ್ನ ಸುಹಾಸ್ ಮರಿಕೆ, ವೇಣುಗೋಪಾಲ್ ಎಸ್.ಜೆ. ಹೇಳಿದ್ದಾರೆ. 
ಇವರು ಪುತ್ತೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಈಗಾಗಲೇ ಸುಮಾರು 70 ಮಳಿಗೆಗಳಿಗೆ ಮೇಳದಲ್ಲಿ ಅವಕಾಶ ನೀಡಲಾಗಿದೆ. ಈ ಬಾರಿ ವಿಶೇಷವಾಗಿ ಕೊನೆಯ ದಿನದಂದು ಸುಮಾರು 25 ಬಗೆಯ ಹಲಸಿನ ಹಣ್ಣು ಹಾಗೂ ಮಾವಿನ ಹಣ್ಣಿನ ಖಾದ್ಯಗಳನ್ನೊಳಗೊಂಡ ವಿಶೇಷ ಭೋಜನೆ ವ್ಯವಸ್ಥೆ ಮಾಡಲಾಗಿದ್ದು, 250 ಮಂದಿಗೆ ಸವಿಯುವ ಅವಕಾಶ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈಗಾಗಲೇ ಮರೆತ ಹಾಗೂ ಮರೆವಿನಂಚಿಲ್ಲಿರುವ ಪಾರಂಪರಿಕ ತಿಂಡಿಗಳನ್ನು ಸ್ಥಳದಲ್ಲೇ ತಯಾರಿಸುವ ಯೋಜನೆ ರೂಪಿಸಲಾಗಿದೆ. ಹಲಸಿನ ತಳಿಗಳನ್ನು ಅಭಿವೃದ್ಧಿಪಡಿಸಿದ ಪ್ರಸಿದ್ಧ ನರ್ಸರಿಗಳಿಂದ ಗಿಡಗಳ ಪ್ರದರ್ಶನ ಮತ್ತು ಮಾರಾಟವಿದೆ ಎಂದು ಹೇಳಿದ್ದಾರೆ.
 
								
 
															


