ಉಡುಪಿ ವಿಧಾನಸಭಾ ವ್ಯಾಪ್ತಿಯ ವಿದ್ಯುತ್ ಸಮಸ್ಯೆಗೆ ಸಂಬ0ಧಿಸಿದ0ತೆ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ಉಡುಪಿ ನಗರಸಭೆ ಕಚೇರಿಯಲ್ಲಿ ಮೆಸ್ಕಾಂ ಅಧಿಕಾರಿಗಳ ಸಭೆ ನಡೆದಿದೆ.

ಸಭೆಯಲ್ಲಿ ಮೆಸ್ಕಾಂ ಅಧಿಕ್ಷಕ ದಿನೇಶ್ ಉಪಾಧ್ಯ ಮಾತನಾಡಿ, ಮೆಸ್ಕಾಂನಲ್ಲಿ ಸದ್ಯ ಜೂನಿಯರ್ ಪವರ್ ಮ್ಯಾನ್‌ಗಳ ನೇಮಕಾತಿ ಚಾಲ್ತಿಯಲ್ಲಿದ್ದು ಎರಡು ತಿಂಗಳೊಳಗೆ ಉಡುಪಿ ಜಿಲ್ಲೆಗೆ 100 ಪವರ್‌ಮ್ಯಾನ್‌ಗಳು ನೇಮಕಾತಿಗೊಳ್ಳುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದ್ದಾರೆ. ಬಳಿಕ ಸಭೆಯ ಅಧ್ಯಕ್ಷತೆ ವಹಿಸಿದ್ದ ಶಾಸಕ ಯಶ್ ಪಾಲ್ ಸುವರ್ಣ ಅವರು ಮಾತನಾಡಿ, ಉಡುಪಿ ವಿಧಾನಸಭಾ ಕ್ಷೇತ್ರದಲ್ಲಿ ಹಲವಾರು ವಿದ್ಯುತ್ ಸಮಸ್ಯೆಗಳಾಗುತ್ತಿದ್ದು ಅದಕ್ಕೆ ಮೆಸ್ಕಾಂ ಇಲಾಖೆ ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ದೂರಿದ್ದಾರೆ. ಇನ್ನು ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್ ಪ್ರಸನ್ನ ಅವರು ಕೂಡ ಒಂದಿಷ್ಟು ವಿಚಾರಗಳನ್ನ ಪ್ರಸ್ತಾಪಿಸಿದ್ರು. ಸಭೆಯಲ್ಲಿ ಮೆಸ್ಕಾಂ ಎಕ್ಸಿಕ್ಯೂಟಿವ್ ಇಂಜಿನಿಯರ್‌ಗಳಾದ ಗಣರಾಜ್ ಭಟ್, ಪ್ರಶಾಂತ್, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ಉಪಾಧ್ಯಕ್ಷೆ ರಜನಿ ಹೆಬ್ಬಾರ್ ಸೇರಿದಂತೆ ಹಲವರು ಉಪಸ್ಥಿತರಿದ್ರು.
 
								
 
															


