ಜನ ಮನದ ನಾಡಿ ಮಿಡಿತ

Advertisement

ಉಡುಪಿ: 3 ತಿಂಗಳೊಳಗೆ ವಾರಾಹಿಯಿಂದ ನಗರಕ್ಕೆ ನೀರು ಪೂರೈಸಬೇಕು; ಶಾಸಕ ಯಶ್ಪಾಲ್

ಬಜೆ ಡ್ಯಾಂನಿ0ದ ಉಡುಪಿ ನಗರಕ್ಕೆ ನೀರು ಪೂರೈಸುವ ಜವಾಬ್ದಾರಿ ಹಾಗೂ ನಿರ್ವಹಣೆಯನ್ನು ವಾರಾಹಿ ನೀರು ಸರಬರಾಜು ಗುತ್ತಿಗೆ ಸಂಸ್ಥೆಯಾದ ಸುಯೆಝ್ ಪ್ರೊಜೆಕ್ಟ್ ಅವರಿಗೆ ಹಸ್ತಾಂತರಿಸಲು ಉಡುಪಿ ನಗರಸಭೆಯಿಂದ ನಿರ್ಧರಿಸಲಾಗಿದೆ. ಉಡುಪಿ ನಗರಕ್ಕೆ ವಾರಾಹಿ ನೀರು ಸರಬರಾಜು ಸಂಬ0ಧ ನಗರಸಭೆಯ ಸತ್ಯಮೂರ್ತಿ ಸಭಾಂಗಣದಲ್ಲಿ ಉಡುಪಿ ಶಾಸಕ ಯಶ್‌ಪಾಲ್ ಸುವರ್ಣ ಅಧ್ಯಕ್ಷತೆಯಲ್ಲಿ ನಡೆದ ವಾರಾಹಿ ಅಧಿಕಾರಿಗಳ ಸಭೆಯಲ್ಲಿ ಈ ತೀರ್ಮಾನ ಮಾಡಲಾಯಿತು.

ಅದರಂತೆ ಮೂರು ತಿಂಗಳುಗಳ ಕಾಲ ಪ್ರಾಯೋಗಿಕವಾಗಿ ನೀರು ಪೂರೈಸಲು ಜವಾಬ್ದಾರಿಯನ್ನು ಸುಯೆಝ್ ಪ್ರೋಜೆಕ್ಟ್ನವರಿಗೆ ವಹಿಸಿಕೊಡಲಾಯಿತು. ಈ ಬಗ್ಗೆ ಶಾಸಕ ಯಶ್‌ಪಾಲ್ ಸುವರ್ಣ ಮಾತನಾಡಿದ್ದಾರೆ. ಬಳಿಕ ವಾರಾಹಿ ನೀರು ಪೂರೈಕೆಯ ಗುತ್ತಿಗೆ ಸಂಸ್ಥೆಯ ಪ್ರಾಜೆಕ್ಟ್ ಮ್ಯಾನೇಜರ್ ಸುದೀಪ್ ಮಾತನಾಡಿ, ವಾರಾಹಿ ನೀರು ಸರಬರಾಜು ಮತ್ತು ನಿರ್ವಹಣೆ ಯನ್ನು ನಮಗೆ ಎಂಟು ವರ್ಷಗಳಿಗೆ ನೀಡಿದ್ದು, ಇದೀಗ ಬಜೆಯಿಂದ ನೀರು ಪೂರೈಕೆ ಮಾಡುವ ಜವಾಬ್ದಾರಿಯನ್ನು ಕೂಡ ಕೂಡಲೇ ನೀಡಬೇಕು. ಇಲ್ಲಿರುವ ಎಲ್ಲ ಸಮಸ್ಯೆಗಳನ್ನು ಸರಿಪಡಿಸಿ ದಿನ 24ಗಂಟೆ ನೀರು ಪೂರೈಸಲು ಕ್ರಮ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.

Leave a Reply

Your email address will not be published. Required fields are marked *

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

ಬೆಂಗಳೂರು: ಕಾರ್ಕಳದಲ್ಲಿ ತುಳು ಭವನ ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸುವಂತೆ ಮನವಿ..!

ಬೆಂಗಳೂರು: ಭೀಕರ ರಸ್ತೆ ಅಪಘಾತದಲ್ಲಿ ಕೇರಳ ಮೂಲದ ಇಬ್ಬರು ನರ್ಸಿಂಗ್ ವಿದ್ಯಾರ್ಥಿಗಳು ಮೃತ್ಯು…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ತಮಿಳುನಾಡು ಮುಖ್ಯಮಂತ್ರಿ ವಿಜಯ್ ಭೇಟಿ…!

error: Content is protected !!