ಜನ ಮನದ ನಾಡಿ ಮಿಡಿತ

Advertisement

ಹಿಂದೂ ಸಂಘಟನೆಯ ಮೂವರು ಕಾರ್ಯಕರ್ತರ ಗಡಿಪಾರಿಗೆ ಸಿದ್ದತೆ

ದಕ್ಷಿಣ ಕನ್ನಡ :  ನೈತಿಕ ಪೊಲೀಸ್ ಗಿರಿ ಪ್ರಕರಣಗಳಿಗೆ ಸಂಬಂಧಿಸಿ ಮೂವರು ಬಜರಂಗದಳ ಕಾರ್ಯಕರ್ತರಿಗೆ ಮಂಗಳೂರು ನಗರ ಪೊಲೀಸರು ಗಡಿಪಾರು ಕಾರಣ ಕೇಳಿ  ನೋಟಿಸ್ ನೀಡಿದ್ದಾರೆ ಎಂದು ಮಾಹಿತಿ ಲಭ್ಯವಾಗಿದೆ.
 ಅಪರಾಧ ಹಿನ್ನೆಲೆ ಉಳ್ಳ ಮೂರು ವ್ಯಕ್ತಿಗಳನ್ನು  ಯಾಕೆ ಗಡೀಪಾರು ಮಾಡಬಾರದು ಎಂದು ಕಾರಣ ಕೇಳಿ ನೋಟಿಸ್ ನೀಡಲಾಗಿದ್ದು, ಮಂಗಳೂರು ನಗರ ಕಾ‌ನೂನು ಸುವ್ಯವಸ್ಥೆ ಡಿಸಿಪಿ ಎದುರು ಹಾಜರಾಗಲು ಸೂಚನೆ ನೀಡಲಾಗಿದೆ.
ನೋಟಿಸ್‌ಗೆ ಎದ್ರಿದಾರರಿಂದ  ಉತ್ತರ ಬಂದ ಬಳಿಕ ಮೂವರನ್ನು ಅಧಿಕೃತವಾಗಿ ಒಂದು ವರ್ಷಗಳ ಕಾಲ ಗಡೀಪಾರು ಆದೇಶ ಮಾಡುವ ಸಾಧ್ಯತೆ ಇದೆ ಎಂದು ನಂಬಲರ್ಹ  ಮೂಲಗಳು ತಿಳಿಸಿವೆ 
 ನೈತಿಕ ಪೊಲೀಸ್ ಗಿರಿ ಕೇಸ್ ನಲ್ಲಿ ಈ  ಮೂವರು ಭಾಗಿಯಾಗಿದ್ದರು. ಸುಲ್ತಾನ್ ಜ್ಯುವೆಲ್ಲರಿ ಹಾಗೂ ಮರೋಳಿ ಹೋಳಿ ಆಚರಣೆ ವೇಳೆ ನೈತಿಕ ಪೊಲೀಸ್ ಗಿರಿ ನಡೆಸಿದ್ದಾಗಿ ಇವರ ಮೇಲೆ ಆರೋಪವಿತ್ತು . ಸ್ಥಳೀಯ ಠಾಣೆಗಳ ಇನ್ಸ್‌ಪೆಕ್ಟರ್ ಗಳೂ ಗಡೀಪಾರಿಗೆ ವರದಿ ನೀಡಿದ್ದರು. ಹೀಗಾಗಿ ಕಾನೂನು ಪ್ರಕಾರ ಗಡೀಪಾರು ಅಸ್ತ್ರ ಪ್ರಯೋಗ ಮಾಡಲು ಯೋಚಿಸಿದ್ದು  ,ಇದೀಗ ನೋಟಿಸ್ ನೀಡಿ ಗಡೀಪಾರು ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ.
ಸಮಾಜದಲ್ಲಿ ಸಾರ್ವಜನಿಕ ಶಾಂತಿ, ಕಾನೂನು ಸುವ್ಯವಸ್ಥೆ ಕಾಪಾಡುವ ಹಿತದೃಷ್ಟಿಯಿಂದ ಈ ಕ್ರಮ ಕೈಗೊಳ್ಳಲಾಗಿದ್ದು ಇವರುಗಳನ್ನು ಚಟುವಟಿಕೆಗಳ ತಾಣದಿಂದ ಮತ್ತು ಅಪರಾಧ ಸಂಬಂಧದಿಂದ  ದೂರ ಇಟ್ಟು ಅಪರಾಧ ಚಟುವಟಕೆಗಳಗೆ ಕಡಿವಾಣ ಹಾಕಲು ಆರೋಪಿತರನ್ನು ಮಂಗಳೂರು ನಗರ ಕಮೀಷನರೇಟ್ ವ್ಯಾಪ್ತಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಿಂದ ಹೊರ ಜಿಲ್ಲೆಗೆ ಗಡಿಪಾರು ಮಾಡುವುದು ಸೂಕ್ತ ಹಾಗೂ ಅನಿವಾರ್ಯ ಎಂದು ಸ್ಥಳೀಯ  ನಗರ ಪೊಲೀಸ್ ಠಾಣೆಯ ಪೊಲೀಸ್ ನಿರೀಕ್ಷಕರು ವರದಿ ಸಲ್ಲಿಸಿದ್ದಾರೆ.
ಇಂತಹ ಅಪರಾಧ ಹಿನ್ನೆಲೆಯುಳ್ಳ ಎದುರುದಾರನು ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಯಾವುದೇ ಕ್ಷಣದಲ್ಲಾದರೂ   ಅಪರಾಧಗಳನ್ನು ಎಸಗುವುದು, ಅಂಥ ಅಪರಾಧಗಳಿಗೆ ಪರೋಕ್ಷವಾಗಿ ಸಹಾಯ ಮಾಡಿ ದುಷ್ಪ್ರೇರಣಿ ನೀಡುವುದರಿಂದ ಸಾರ್ವಜನಿಕರಲ್ಲಿ ಭಯ ಭೀತಿಯನ್ನುಂಟು ಮಾಡುವ ಸಾಧ್ಯತೆಯು ಇರುತ್ತದೆ. ಇಂತಹ ಅಪರಾಧ ಹಿನ್ನಲೆ ಇರುವವರನ್ನು ಕಾನೂನು ಮೂಲಕ ಸೂಕ್ತ ರೀತಿಯಲ್ಲಿ ಹದ್ದುಬಸ್ತಿನಲ್ಲಿಡದೇ ಹಾಗೇ ಬಿಟ್ಟಲ್ಲಿ ಅಪರಾಧ ಚಟುವಟಿಕೆಗಳನ್ನು ಮುಂದುವರಿಸಿಕೊಂಡು ಯಾವುದೇ ಸಾಕ್ಷಿದಾರರು ಮತ್ತು ದೂರುದಾರರಲ್ಲಿ ತನ್ನ ಮೇಲೆ ದಾಖಲಾದ ಕ್ರಿಮಿನಲ್ ಪ್ರಕರಣಗಳಿಂದ ಬಿಡುಗಡೆಯಾಗಲು ಪ್ರಯತ್ನಿಸಿರುವ ಸಾಧ್ಯತೆಯೂ ಇದೆ ಎಂದು ನೊಟೀಸ್‌ ನಲ್ಲಿ ತಿಳಿಸಲಾಗಿದೆ, ಮತ್ತು ಈ ಎಲ್ಲಾ ವಿಚಾರಗಳನ್ನು ನ್ಯಾಯಾಲಯದ ಮುಂದೆ ತರುವ ಸಾಧ್ಯತೆ ಇದೆ.
ನಿರಂತರವಾಗಿ ಕ್ರೈಂ ಮಾಡುತ್ತಿರುವ ಅಪರಾಧಿಗಳಿಗೆ ಗಡಿಪಾರು ಮಾಡುವ ಪ್ರಕ್ರಿಯೆ ಮಾಡಲಾಗುತ್ತಿದೆ. ಈಗಾಗಲೇ 60 ಮಂದಿಯನ್ನು ಗಡಿಪಾರು ಮಾಡಲಾಗಿದೆ. ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಮೂವರಿಗೆ ನೋಟಿಸ್ ನೀಡಲಾಗಿದ್ದು, ಗಡಿಪಾರು ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು  ಮಾಧ್ಯಮಗಳಲ್ಲಿ ವರದಿಯಾಗಿದೆ.

Leave a Reply

Your email address will not be published. Required fields are marked *

ಪಟ್ಲ ಸತೀಶ್ ಶೆಟ್ಟಿ ಅವರಿಗೆ ಡಾ. ಶಿವರಾಮ ಕಾರಂತ ಪ್ರಶಸ್ತಿ..!

ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ…!

ವಿ ಡಿ ಸತೀಶನ್ ಅವರನ್ನು ಕಾಸರಗೋಡಿನಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು…!

ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ…!

ಬಂಟ್ವಾಳ: ನಿವೃತ್ತ ಕೃಷಿ ಅಧಿಕಾರಿ ನಾರಾಯಣ ನಾಯ್ಕ್ (65) ಹೃದಯಾಘಾತದಿಂದ ನಿಧನ!

ಮಂಗಳೂರು: ಪಟ್ಲ ಸತೀಶ್ ಶೆಟ್ಟಿಯವರಿಗೆ ಅತ್ಯುನ್ನತ ಡಾ. ಶಿವರಾಮ ಕಾರಂತ ಪ್ರಶಸ್ತಿ ಘೋಷಣೆ!

ಮಂಗಳೂರು: ಪಚ್ಚನಾಡಿ ರೈಲ್ವೇ ಹಳಿಯಲ್ಲಿ ಯುವಕನ ಮೃ*ತದೇಹ ಪತ್ತೆ; ಸಂಶಯಾಸ್ಪದ ಸಾ*ವು..!

ಬಂಟ್ವಾಳ: ಪಾಣೆಮಂಗಳೂರು ಸಮೀಪ ನೇತ್ರಾವತಿ ನದಿಯಲ್ಲಿ ಮೃ*ತದೇಹ ಪ*ತ್ತೆ….!

ಮಂಗಳೂರು: ಸಂಹಿತೆಗಳ ಜಾರಿಯಿಂದ ಯೂನಿಯನ್ ಮುಕ್ತ ಭಾರತವಾಗುವ ಅಪಾಯವಿದೆ- ಫಣೀಂದ್ರ ಕೆ ಎಚ್ಚರ!

error: Content is protected !!