ಜನ ಮನದ ನಾಡಿ ಮಿಡಿತ

Advertisement

ಉಪ್ಪಿನಂಗಡಿ: ಕುಡಿಯುವ ನೀರಿನ ಟ್ಯಾಂಕ್‌ನ ತಳಭಾಗದಲ್ಲಿ ಕಸದ ರಾಶಿ..!

ಉಪ್ಪಿನಂಗಡಿಯ ನಟ್ಟಿಬೈಲ್ ನಲ್ಲಿರುವ ಗ್ರಾ.ಪಂ.ನ ಕುಡಿಯುವ ನೀರಿನ ಟ್ಯಾಂಕ್‌ನ ತಳಭಾಗದಲ್ಲಿ ರಟ್ಟಿನ ಬಾಕ್ಸ್, ಕಬ್ಬಿಣದ ರಾಡ್, ಗುಟ್ಕಾ ಪ್ಯಾಕೇಟ್‌ಗಳು ಸೇರಿದಂತೆ ರಾಶಿಗಟ್ಟಲೆ ಕಸವಿರುವುದು ಪತ್ತೆಯಾಗಿದೆ.

ಕಳೆದ ಒಂದು ವರ್ಷದಿಂದ ಇದೇ ಟ್ಯಾಂಕ್‌ನ ನೀರು ಕುಡಿಯುತ್ತಿರುವ ನಟ್ಟಿಬೈಲ್ ಪರಿಸರದ ನಿವಾಸಿಗಳು ಅಧಿಕಾರಿಗಳ ಬೇಜವಾಬ್ದಾರಿಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ತಪ್ಪಿತಸ್ಥ ಅಧಿಕಾರಿಗಳ ಮೇಲೆ ಕಾನೂನು ಕ್ರಮಕ್ಕೆ ಆಗ್ರಹಿಸಿದ್ದಾರೆ. ಜೀವನ್ ಮೆಷಿನ್ ಯೋಜನೆಯಡಿಯಲ್ಲಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ನಟ್ಟಿಬೈಲ್‌ನಲ್ಲಿ ಕುಡಿಯುವ ನೀರಿನ ಟ್ಯಾಂಕ್‌ವೊ0ದನ್ನು ನಿರ್ಮಿಸಿತ್ತು.

ಇದರ ಕಾಮಗಾರಿ ಮುಗಿದ ಬಳಿಕ ಅಂದರೆ ಸುಮಾರು ಒಂದು ವರ್ಷಗಳ ಹಿಂದೆ ಇದನ್ನು ಗ್ರಾ.ಪಂ.ಗೆ ಹಸ್ತಾಂತರ ಮಾಡಿತ್ತು. ಈ ಕಾಮಗಾರಿಯ ಸಂದರ್ಭ ರಟ್ಟಿನ ಬಾಕ್‌ಗಳು, ಕಬ್ಬಿಣದ ರಾಡ್‌ಗಳು, ಗುಟ್ಕಾ ಪ್ಯಾಕೇಟ್‌ಗಳು, ಕಾರ್ಡ್ ಬೋರ್ಡ್ಗಳು, ಪ್ಲಾಸ್ಟಿಕ್‌ಗಳು ಸೇರಿದಂತೆ ಇನ್ನಿತರ ಕಸಕಡ್ಡಿ ಗಳು ಟ್ಯಾಂಕ್‌ನೊಳಗಡೆನೇ ಬಾಕಿಯಾಗಿದ್ದು, ಇದನ್ನು ಯಾರೂ ಗಮನಿಸಿರಲಿಲ್ಲ. ಗ್ರಾ.ಪಂ.ನವರು ಇದಕ್ಕೆ ನೀರು ತುಂಬಿಸಿ ನಟ್ಟಿಬೈಲ್ ಪರಿಸರದ ನಿವಾಸಿಗಳ ಮನೆಗಳಿಗೆ ಸರಬರಾಜು ಮಾಡಲು ಆರಂಭಿಸಿತು. ಟ್ಯಾಂಕ್‌ನೊಳಗಿನ ಅಸಲಿಯತ್ತು ತಿಳಿದು ವಾಂತಿ ಮಾಡಿಕೊಳ್ಳುತ್ತಿದ್ದಾರೆ ಗ್ರಾಮಸ್ಥರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!