ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ತೆಗೆಸುವಂತೆ ಎಚ್ಚರಿಕೆ..!

ಮೋಟಾರು ವಾಹನ ಕಾಯ್ದೆಯಡಿ ಸಂಚಾರ ನಿಯಮ ಉಲ್ಲಂಘನೆ ಮಾಡುತ್ತಿರುವ ಹಿನ್ನೆಲೆಯಲ್ಲಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ಜೂ.2 ಮತ್ತು 3ರಂದು ವಿಶೇಷ ಕಾರ್ಯಾಚರಣೆ ನಡೆಸಿದ ಪೊಲೀಸರು 223 ಪ್ರಕರಣ ದಾಖಲಿಸಿ, 1,11,500 ರೂ. ದಂಡ ವಿಧಿಸಿದ್ದಾರೆ.

ಕಾರುಗಳಿಗೆ ಅಳವಡಿಸಿರುವ ಟಿಂಟೆಡ್ ಗ್ಲಾಸ್ ಹಾಗೂ ಬ್ಲಾಕ್ ಫಿಲ್ಮಂ ಸ್ಟಿಕರ್‌ಗಳನ್ನು ವಾಹನ ಚಾಲಕರಿಂದ ತೆಗೆಸಿ ಅವರುಗಳಿಗೆ ಎಚ್ಚರಿಕೆ ನೀಡಲಾಗಿದೆ. ಪೊಲೀಸ್ ಆಯುಕ್ತರ ಕಚೇರಿಯ ಸಭಾಂಗಣ ಹಾಗೂ ಪೊಲೀಸ್ ಠಾಣೆಗಳು ಮತ್ತು ಮಂಗಳೂರು ನಗರ ಕಮಿಷನರೇಟ್ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕಾರು ಶೋ ರೂಮ್, ಅಕ್ಸೆಸರಿಸ್ ಶಾಪ್, ಗ್ಯಾರೇಜ್, ಸ್ಟಿಕರ್ ಅಂಗಡಿಗಳ ಮಾಲಕರ ಸಭೆಯನ್ನು ಆಯೋಜಿಸಿ ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಅಪರಾಧ ಎಸಗಲು ಆರೋಪಿತರು ಟಿಂಟ್ ಅಳವಡಿಸಿರುವ ವಾಹನಗಳನ್ನು ಉಪಯೋಗಿಸುವ ಸಾಧ್ಯತೆ ಇರುವುದರಿಂದ ತಮ್ಮ ಬಳಿ ಬರುವ ಗಿರಾಕಿಗಳ ವಾಹನಗಳ ಗಾಜುಗಳಿಗೆ ಹೆಚ್ಚುವರಿಯಾಗಿ ಟಿಂಟ್‌ಗಳನ್ನು ಅಳವಡಿಸದಂತೆ ಸೂಕ್ತ ಸೂಚನೆಗಳನ್ನು ಕೂಡ ನೀಡಲಾಗಿದೆ. ವಿಶೇಷ ಕಾರ್ಯಚಾರಣೆಯು ಮುಂದಿನ ದಿನಗಳಲ್ಲಿ ಮುಂದುವರಿಯಲಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಜಿರಳೆ ಹೋರಾಟಕ್ಕೆ ಕೊನೆಗೂ ಮಣಿದ ಕೇಂದ್ರ ಸರಕಾರ; ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜಿನಾಮೆ…!

ಮಂಗಳೂರು: ರೌಡಿಶೀಟರ್ ಮೇಲೆ ಮಾರಕಾಸ್ತ್ರದಿಂದ ಭೀಕರ ದಾಳಿ…!

ಬಂಟ್ವಾಳ: ಲಾವಣ್ಯ ಹತ್ಯೆ ಪ್ರಕರಣದ ಆರೋಪಿ ಚೇತನ್ ಆರೋಗ್ಯದಲ್ಲಿ ಸುಧಾರಣೆ..!

ಬಂಟ್ವಾಳ: ತ್ಯಾಜ್ಯ ನಿರ್ವಹಣೆ ಸಂಪೂರ್ಣ ಹದಗೆಟ್ಟು ಸಾರ್ವಜನಿಕರಲ್ಲಿ ಆತಂಕ..!

ಮಂಗಳೂರು: ಮಂತ್ರಾಲಯದ ಬಳಿ ಭೀಕರ ಅಪಘಾತ; ಯಕ್ಷಧ್ರುವ ಪಟ್ಲ ಫೌಂಡೇಷನ್ ಕಾರ್ಯದರ್ಶಿ ರವಿ ಶೆಟ್ಟಿ ನಿಧನ…!

ಬಂಟ್ವಾಳ: ಬಂಟ್ವಾಳ ತಾಲೂಕಿನ ಕುರಿಯಾಳ ಗ್ರಾಮದಲ್ಲಿ ಅಗ್ನಿ ಅವಘಡ…..!

ಬಂಟ್ವಾಳ: ಸೂರಿಕುಮೇರ್ ಪೆಟ್ರೋಲ್ ಬಂಕ್ ಸಮೀಪ ಅಪ*ಘಾತ; ಮಾನವೀಯತೆ ಮೆರೆದ ಎಸ್‌ಐ ರಾಮಕೃಷ್ಣ..!

ಮಂಗಳೂರು: ವಿವಾಹಿತ ಮಹಿಳೆಯೊಬ್ಬರು ಮನೆಯಲ್ಲಿಯೇ ನೇಣು ಬಿಗಿದು ಆತ್ಮಹ*ತ್ಯೆ..!

ವಿಟ್ಲ: ರಸ್ತೆ ಬದಿಯ ಮರಕ್ಕೆ ಡಿಕ್ಕಿಹೊಡೆದ ಟಿಪ್ಪರ್ ಲಾರಿ – ಇಬ್ಬರಿಗೆ ಗಾಯ..!

error: Content is protected !!