ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿ ಮೃತ್ಯು

ಕೈ ಕಾಲು ತೊಳೆಯುವ ವೇಳೆ ಕೆರೆಗೆ ಬಿದ್ದು ಕಾಲೇಜು ವಿದ್ಯಾರ್ಥಿಯೋರ್ವ ಮೃತಪಟ್ಟ ಘಟನೆ ಕಾರಿಂಜದಲ್ಲಿ ನಡೆದಿದೆ.

 

ವಗ್ಗ ಕಾರಿಂಜ ಕ್ರಾಸ್ ನಿವಾಸಿ ಶ್ರೀಧರ್ ಮೂಲ್ಯ ಅವರ ಮಗ ಚೇತನ್ (19) ಮೃತಪಟ್ಟ ವಿದ್ಯಾರ್ಥಿ. ಕಾರಿಂಜೇಶ್ವರ ದೇವಾಲಯದ ಕೆಳಗೆ ಇರುವ ಕೆರೆಯಲ್ಲಿ ಕಾಲು ತೊಳೆಯಲು ಇಳಿದ ವೇಳೆ ಆಯತಪ್ಪಿ ಕೆರೆಗೆ ಬಿದ್ದು ಈ ದುರ್ಘಟನೆ ನಡೆದಿದೆ ಎನ್ನಲಾಗಿದೆ. ಚೇತನ್ ಪ್ರತಿ ಶನಿವಾರ ಕಾರಿಂಜ ದೇವಾಲಯಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆಯುತ್ತಿದ್ದ, ಇಂದು ಅದೇ ರೀತಿ ಸ್ನೇಹಿತ ಪ್ರಶ್ವಿತ್‌ನ ಜೊತೆಗೆ ದೇವಸ್ಥಾನಕ್ಕೆ ತೆರಳಿದ್ದ. ಈ ವೇಳೆ ದೇವಾಲಯದ ಕೆರೆಯಲ್ಲಿ ಕಾಲು ತೊಳೆಯಲು ಮೆಟ್ಟಿಲು ಇಳಿಯುತ್ತಿದ್ದಂತೆ ಕಾಲು ಜಾರಿ ಕೆರೆಯೊಳಗೆ ಚೇತನ್ ಬಿದ್ದಿದ್ದಾನೆ. ಜೊತೆಯಲ್ಲಿ ಇದ್ದ ಪ್ರಶ್ವಿತ್ ಗೆ ಈಜು ತಿಳಿಯದ ಕಾರಣ ಆತ ಸ್ಥಳೀಯರಿಗೆ ಪೋನ್ ಮಾಡಿದ್ದಾನೆ. ಕೂಡಲೇ ಸ್ಥಳೀಯರು ಸೇರಿದ್ದು, ಶ್ರವಣ್ ಜೈನ್ ಹಾಗೂ ಉದಯ ಎಂಬಿಬ್ಬರು ಕೆರೆಗೆ ಹಾರಿ ಹುಡುಕಲು ಆರಂಭಿಸಿ, ಚೇತನ್ ನನ್ನು ಕೆರೆಯಿಂದ ಮೇಲಕ್ಕೆ ಎತ್ತಿ ಹಾಕಿದ್ದಾರೆ, ಆದರೆ ಅದಾಗಲೇ ಚೇತನ್ ಅವರ ಪ್ರಾಣ ಪಕ್ಷಿ ಹಾರಿಹೋಗಿತ್ತು. ಬಂಟ್ವಾಳ ಗ್ರಾಮಾಂತರ ಪೋಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!