ಮೋದಿ ಅವರ ಸರ್ಕಾರಕ್ಕೆ ಸೊನ್ನೆ ಅಂಕ ಕೊಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇವರು ಮೈಸೂರಿನ ನಿವಾಸದಲ್ಲಿ ಮಾಧ್ಯಮದ ಜೊತೆ ಮಾತನಾಡಿ, ಮೋದಿ ಪ್ರಚಾರದಿಂದ ಬದುಕಿರುವುದು. ನೋಟು ಅಮಾನ್ಯೀಕರಣದಿಂದ ಯಾರಿಗೆ ಅನುಕೂಲವಾಗಿದೆ? ಅಚ್ಚೆ ದಿನ್ ಆಯೇಗಾ , ಪ್ರತಿ ವರ್ಷ ಎರಡು ಕೋಟಿ ಉದ್ಯೋಗ ಕೊಡುತ್ತೇನೆ ಎಂದ್ರು.

ರೈತರ ಸಮಸ್ಯೆ ಬಗೆಹರಿಸುತ್ತೇನೆ ಎಂದರು. ರೈತರು ಒಂದು ವರ್ಷ ಕಾಲ ಚಳುವಳಿಯನ್ನು ಏಕೆ ಮಾಡಿದರು ಎಂದು ಪ್ರಶ್ನಿಸಿದ್ದಾರೆ. ಮಾಧ್ಯಮಗಳು ಅವರಿಗೆ ಹೆಚ್ಚಿನ ಪ್ರಚಾರ ನೀಡುತ್ತಿವೆ. ಅವುಗಳ ಮೂಲಕ ಸುಳ್ಳು ವಿಚಾರಗಳಿಗೆ ಪ್ರಚಾರ ನೀಡುತ್ತಿದ್ದಾರೆ. ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ಘೋಷಣೆ ಮಾಡಿದಾಗ ಇದನ್ನು ಅನುಷ್ಠಾನ ಮಾಡಲಾಗುವುದಿಲ್ಲ,ರಾಜ್ಯ ಸರ್ಕಾರ ದಿವಾಳಿಯಾಗುತ್ತದೆ ಎಂದವರು ಅದನ್ನೇ ನಕಲು ಮಾಡಿದ್ದಾರೆ ಎಂದಿದ್ದಾರೆ.



