ಜನ ಮನದ ನಾಡಿ ಮಿಡಿತ

Advertisement

ಬಂಟ್ವಾಳ: ಕಬ್ಬಿಣದ ಕಮಾನ್‌ನೊಳಗೆ ಸಿಲುಕಿಕೊಂಡ ಮೀನಿನ ಪಿಕಪ್ ವಾಹನ..!

ಪಾಣೆಮಂಗಳೂರು ಹಳೆಯ ಸೇತುವೆ ಮೂಲಕ ಘನ ವಾಹನಗಳ ಸಂಚಾರ ನಿಷೇಧ ಹೇರಿ ಹಾಕಲಾಗಿದ್ದ ಕಬ್ಬಿಣದ ಕಮಾನ್‌ನೊಳಗೆ ಪಿಕಪ್ ವಾಹನವೊಂದು ಸಿಲುಕಿಕೊಂಡ ಘಟನೆ ನಡೆದಿದೆ.

ಪಾಣೆಮಂಗಳೂರು ಉಕ್ಕಿನ ಸೇತುವೆ ಉಳಿಸುವ ಮತ್ತು ದುರ್ಬಲ ಸೇತುವೆ ಅಪಾಯಕಾರಿಯಾಗಿರುವ ಹಿನ್ನೆಲೆಯಲ್ಲಿ ಘನ ವಾಹನಗಳ ಸಂಚಾರಕ್ಕೆ ನಿಷೇಧವನ್ನು ಜಿಲ್ಲಾಡಳಿತ ಅದೇಶ ಹೊರಡಿಸಿ, ಸುಮಾರು ವರ್ಷಗಳ ಬಳಿಕ ಸೇತುವೆಯ ಎರಡು ಭಾಗಗಳಲ್ಲಿ ಕಬ್ಬಿಣದ ಕಮಾನ್ ಅಳವಡಿಸಲಾಗಿತ್ತು. ಅದಾದ ಬಳಿಕ ಕಬ್ಬಿಣದ ಕಮಾನ್ ಗಳನ್ನು ಮರಳು ವಾಹನ ಸಾಗಾಟ ಮಾಡುವ ವಾಹನಗಳು ತೆಗೆದು ಸಂಚಾರ ಮಾಡುವ ಬಗ್ಗೆ ದೂರುಗಳು ಕೇಳಿ ಬಂದ ಹಿನ್ನೆಲೆ, ಅತ್ಯಂತ ಹೆಚ್ಚು ತೂಕದ ಕಬ್ಬಿಣದ ಕಂಬಗಳನ್ನು ಅಳವಡಿಸಿ ಅದರ ಮೇಲೆ ಅಷ್ಟೇ ತೂಕದ ಕಮಾನ್ ಗಳನ್ನು ಹಾಕಲಾಗಿತ್ತು. ಇದೀಗ ಮೀನು ಸಾಗಾಟದ ಪಿಕಪ್ ವಾಹನವೊಂದು ಬಂದು ಗುದ್ದಿದ ರಭಸಕ್ಕೆ ಘನಗಾತ್ರದ ಕಮಾನ್ ಉರುಳಿ ಕೆಲಗೆ ಬಿದ್ದಿದೆ.ಅದೃಷ್ಟವಶಾತ್ ಯಾವುದೇ ಅಪಾಯ ಸಂಭವಿಸಿಲ್ಲ. ಘಟನೆಯಿಂದ ಒಂದು ಭಾಗದ ಕಮಾನ್ ತೆರವಾಗಿದೆ. ಘಟನೆಯ ಬಗ್ಗೆ ವಿಡಿಯೋ ವೈರಲ್ ಆಗಿದೆ. ವಿಡಿಯೋ ತೆಗೆಯಬೇಡಿ, ವೈರಲ್ ಆಗುತ್ತದೆ ಎಂಬ ಮಾತು ಕೂಡ ಇಲ್ಲಿ ವೈರಲ್ ಆಗಿದೆ. ಈ ಬಗ್ಗೆ ಯಾವುದೇ ದೂರು ದಾಖಲಾಗಿಲ್ಲ ಎಂದು ಟ್ರಾಫಿಕ್ ಪೋಲೀಸರು ತಿಳಿಸಿದ್ದಾರೆ.

Leave a Reply

Your email address will not be published. Required fields are marked *

ನವದೆಹಲಿ: ಅರಬ್ಬಿ ಸಮುದ್ರದಲ್ಲಿ ಭರ್ಜರಿ ಡ್ರಗ್ಸ್ ಬೇಟೆ: ₹3 ಸಾವಿರ ಕೋಟಿ ಮೌಲ್ಯದ ಮಾದಕವಸ್ತು ವಶ..!

ಮಂಗಳೂರು: MRPL ಘಟನಾ ಸ್ಥಳಕ್ಕೆ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಭೇಟಿ; ಪರಿಸ್ಥಿತಿ ಪರಿಶೀಲನೆ..!

ಬಂಟ್ವಾಳ: ಮಂಗಳೂರು ರೈಲು ಪ್ರದೇಶ ಮೈಸೂರು ವಿಭಾಗಕ್ಕೆ: ಪ್ರಮುಖ ನಿಲ್ದಾಣಗಳಿಗೆ ಅಧಿಕಾರಿಗಳ ಭೇಟಿ.

ಬೆಂಗಳೂರು: ಬೆಂಗಳೂರಿನಲ್ಲಿ ಟ್ರಾಫಿಕ್ ನಿಯಂತ್ರಣಕ್ಕೆ ಶಾಲಾ ಸಮಯ ಬದಲಾವಣೆಗೆ ಚಿಂತನೆ.

ಉಡುಪಿ: ಶಂಕರಪುರ ಮಠದಲ್ಲಿ ಅ.3, 4ರಂದು ಸಾಯಿ ಈಶ್ವರ್ ಗುರೂಜಿ ಪಂಚಾಶತ್ ಜನ್ಮ ವೈಭವ…!

ಪುತ್ತೂರು: ಪುತ್ತೂರು ಸರ್ಕಾರಿ ಆಸ್ಪತ್ರೆಯಲ್ಲಿ ಅವಧಿ ಮೀರಿದ ಮಾತ್ರೆ ವಿತರಣೆ ಆರೋಪ; ಅಧಿಕಾರಿಗಳಿಂದ ವಿಚಾರಣೆ

ನವದೆಹಲಿ: ಮೋದಿ–ಟ್ರಂಪ್ ದೂರವಾಣಿ ಮಾತುಕತೆ: ವ್ಯಾಪಾರ, ರಕ್ಷಣೆ, ಇಂಧನ ಸಹಕಾರದ ಕುರಿತು ಚರ್ಚೆ

ಮಂಗಳೂರು: ಮಂಗಳೂರು ರೈಲು ಪ್ರದೇಶ ಇಂದಿನಿಂದ ಮೈಸೂರು ವಿಭಾಗದ ಅಧೀನಕ್ಕೆ…!

ದುಬೈ: ಫ್ಲೈದುಬೈ ವಿಮಾನದಲ್ಲಿ ಕಾಕ್‌ಪಿಟ್ ಘಟನೆ: ಸಹ ಪೈಲಟ್‌ನ ಯತ್ನ ತಡೆದ ಭಾರತೀಯ ಪೈಲಟ್…!

error: Content is protected !!