ಜನ ಮನದ ನಾಡಿ ಮಿಡಿತ

Advertisement

ಕಡಬ: ಅಕ್ರಮ ಕೋಳಿ ಅಂಕಕ್ಕೆ ಪೊಲೀಸರಿಂದ ದಾಳಿ

ಕಡಬ ಠಾಣಾ ವ್ಯಾಪ್ತಿಯ ರಾಮಕುಂಜ ಸಮೀಪದ ಹಳೆನೇರೆಂಕಿ ಗ್ರಾಮದ ನೇರೆಂಕಿಯ ತೋಟವೊಂದರಲ್ಲಿ ನಡೆಯುತ್ತಿದ್ದ ಅಕ್ರಮ ಕೋಳಿ ಅಂಕಕ್ಕೆ ಪೊಲೀಸರು ಜೂ.10ರಂದು ದಾಳಿ ನಡೆಸಿದ್ದಾರೆ. ಘಟನಾ ಸ್ಥಳದಿಂದ ವಾಹನ, ಕೋಳಿ ಹಾಗೂ ನಗದು ವಶಪಡಿಸಿಕೊಂಡಿದಲ್ಲದೆ, ಅಕ್ರಮ ಕೋಳಿ ಅಂಕದ ಪ್ರಮುಖ ರೂವಾರಿ ಸಹಿತ ಮೂವರನ್ನು ವಶಕ್ಕೆ ಪಡೆದು ಬಂಧಿಸಿದ್ದಾರೆ.

ನೇರೆಂಕಿ ನಿವಾಸಿ ಮೋಹನ್ ದಾಸ್ ರೈ (48),ಪೆರಾಬೆ ಗ್ರಾಮದ ಬೇಲ್ವಾಡಿ ನಿವಾಸಿ ರಾಧಕೃಷ್ಣ, (51) ಆಲಂಕಾರು ನಿವಾಸಿ ವೆಂಕಟೇಶ(30) ಬಂಧಿತರು. ಇನ್ನು ಎಂಟು ಮಂದಿ ದಿಕ್ಕು ಪಾಲಾಗಿ ಓಡಿ ಪರಾರಿಯಾಗಿದ್ದಾರೆ. ಸ್ಥಳದಲ್ಲಿದ್ದ 6 ಬೈಕ್, 2 ಕಾರು, 4 ಕೋಳಿ, ಕೋಳಿ ಅಂಕಕ್ಕೆ ಬಳಸಲಾಗುವ ಕತ್ತಿ ಹಾಗೂ 3,560 ರೂ. ವಶಕ್ಕೆ ಪಡೆದುಕೊಂಡಿದ್ದಾರೆ. ಹಳೆನೇರಂಕಿ ಗ್ರಾಮದ ನೇರಂಕಿ ಎಂಬಲ್ಲಿ ಅಕ್ರಮ ಕೋಳಿ ಅಂಕದ ರೂವಾರಿಯ ತೋಟವೊಂದರಲ್ಲಿ ಅಕ್ರಮವಾಗಿ ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಯುತ್ತಿದ್ದ ಬಗ್ಗೆ ಮಾಹಿತಿ ಬಂದ ಮೇರೆಗೆ ಕಡಬ ಪೊಲೀಸ್ ಠಾಣಾ ಪೋಲಿಸ್ ಉಪನಿರೀಕ್ಷಕರಾದ ಅಬಿನಂದನ್ ಠಾಣಾ ಸಿಬ್ಬಂದಿಗಳೊAದಿಗೆ ದಾಳಿ ನಡೆಸಿರುವುದಾಗಿದೆ. ಈ ಬಗ್ಗೆ ಕಡಬ ಪೊಲೀಸ್ ಠಾಣೆಯಲ್ಲಿ ಅ.ಕ್ರ :44/2025 ಕಲಂ: 87, 93 KP Act ಹಾಗೂ 3,11 THE PREVENTION OF CRUELTY TO ANIMALS ACT, 1960 ರಂತೆ ಪ್ರಕರಣ ದಾಖಲಾಗಿದ್ದು ತನಿಖೆ ನಡೆಯುತ್ತಿದೆ. ನೂತನ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಆಗಮನದ ಬಳಿಕ ಪೊಲೀಸರ ಅಪರೂಪದ ದಾಳಿಗೆ ಕೋಳಿ ಅಂಕ ಆಯೋಜಕರು ಬೆಚ್ಚಿಬಿದ್ದಿದ್ದಾರೆ. ಅಲ್ಲದೆ ಈ ಬಗ್ಗೆ ಚರ್ಚೆಯನ್ನೂ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಭಾರೀ ಮಳೆ ಹಾಗೂ ಬಿರುಗಾಳಿಯ ಅಬ್ಬರಕ್ಕೆ ಕುಸಿತಗೊಂಡ ಮನೆಯ ಚಾವಣಿ…!

ಬಂಟ್ವಾಳ: ಸಜೀಪಮೂಡದಲ್ಲಿ ವಿದ್ಯುತ್ ಅವಘಡ; ಪೀಠೋಪಕರಣಗಳು ಸೇರಿ ದಿನನಿತ್ಯದ ವಸ್ತುಗಳು ಸುಟ್ಟು ಭಸ್ಮ…!

ವಾಷಿಂಗ್ಟನ್: ಅಮೆರಿಕ ಕಾಂಗ್ರೆಸ್‌ನಿಂದ ಡಾ. ಯು.ಟಿ. ಖಾದರ್‌ಗೆ ಪ್ರತಿಷ್ಠಿತ ಗೌರವ…!

ವಿಶ್ವಕಪ್ ಗಲಾಟೆ: ಅರ್ಜೆಂಟೀನಾ ವಿರುದ್ಧ ಫಿಫಾ ಕಠಿಣ ಶಿಸ್ತು ಕ್ರಮ!

ನವದೆಹಲಿ: ‘ಪಾಕಿಸ್ತಾನಿ ಕಾಶ್ಮೀರ’ ಅಲ್ಲ, ಅದು PoK ಮಾತ್ರ: ನ್ಯೂಯಾರ್ಕ್ ಟೈಮ್ಸ್‌ಗೆ ಭಾರತದ ತಿರುಗೇಟು…!

ವಾಷಿಂಗ್ಟನ್: ಚೀನಾ-ಪಾಕ್ ಮೂಲಕ ಇರಾನ್‌ಗೆ 400 ರಾಕೆಟ್ ಲಾಂಚರ್? ಟ್ರಂಪ್ ಆತಂಕ…!

ಮೂಡುಬಿದಿರೆ: ಒಮಾನ್‌ನಲ್ಲಿ ಸಂಭವಿಸಿದ ವಾಹನ ಅಪ*ಘಾತದಲ್ಲಿ ಯುವಕ ಸಾ*ವು….!

ಬಂಟ್ವಾಳ: ಅಮ್ಮುಂಜೆ ವೃದ್ಧೆ ಕೊಲೆ ಪ್ರಕರಣ: ಮೂವರು ಆರೋಪಿಗಳಿಗೆ ಜೀವಾವಧಿ…!

ನವದೆಹಲಿ: ಚಿನ್ನದ ಬೆಲೆ ಇಳಿಯುತ್ತಾ? ವಿಶ್ವ ಚಿನ್ನ ಮಂಡಳಿಯ ಭವಿಷ್ಯ…!

error: Content is protected !!