ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಅಪಾಯಕ್ಕೆ ಆಹ್ವಾನಿಸುತ್ತಿದೆ ಡೇಂಜರಸ್ ಗುಂಡಿಗಳು

ಮಂಗಳೂರು ಸೆಂಟ್ರಲ್ ರೈಲ್ವೇ ನಿಲ್ದಾಣಕ್ಕೆ ಹೋಗುವ ಫೂಟ್‌ಪಾತ್ ರಸ್ತೆಯು ಜರಿದು ಗುಂಡಿಯಾಗಿದ್ದು, ಪಾದಚಾರಿಗಳ ಬಲಿಗಾಗಿ ಆಹ್ವಾನಿಸುವಂತಿದೆ.

 

ದಿನವೂ ಕಿಕ್ಕಿರಿದು ಜನರು ಸಂಚರಿಸುವ ರಸ್ತೆಯು ಮಳೆಯಿಂದ ಹಾನಿಯಾಗಿದೆ. ಮಾತ್ರವಲ್ಲದೆ ಈ ಮೊದಲೇ ಅಲ್ಲಿ ಇದ್ದ ಡ್ರೈನೇಜ್ ಗುಂಡಿಯು ಬಾಯಿ ತೆರೆದಿದ್ದು ಅಪಾಯಕ್ಕೆ ದಾರಿಮಾಡಿಕೊಡುತ್ತಿದೆ. ಕೆಲ ದಿನಗಳ ಹಿಂದೆ ಈ ಗುಂಡಿಯಲ್ಲಿ ರೈಲ್ವೆ ನಿಲ್ದಾಣಕ್ಕೆ ಸಂಚರಿಸುತ್ತಿದ್ದ ವ್ಯಕ್ತಿಯೋರ್ವ ಬಿದ್ದ ಘಟನೆ ಕೂಡ ನಡೆದಿದೆ. ಅಪಾಯ ಕಣ್ಣೆದುರಿಗೇ ಇದ್ರೂ ಅಧಿಕಾರಿಗಳು ಯಾವುದೇ ಕ್ರಮವನ್ನು ಕೈಗೊಂಡಿಲ್ಲ. ಅದಕ್ಕೆ ತೇಪೆ ಹಚ್ಚುವ ಕೆಲಸವೂ ಮಾಡದೇ, ಗುಂಡಿಯ ಬದಿಗೆ ಯಾವುದೇ ಕನಿಷ್ಠ ಅಪಾಯವನ್ನು ತಡೆಯುವ ಸೂಚನಾ ಫಲಕವನ್ನೂ ಇಟ್ಟಿಲ್ಲ. ರಸ್ತೆಯಲ್ಲಿ ವಾಹನ ಸಂಚಾರ ದಟ್ಟವಾಗಿದ್ದು ಆ ಭಾಗವಾಗಿ ನಡೆದು ಹೋಗುವುದು ಸವಾಲಾಗಿದೆ.

 

ಮುಂಗಾರು ಚುರುಕಾಗಿದ್ದು, ಹಾನಿಯಾದ ರಸ್ತೆಯು ಬಾಯ್ತೆರೆದು ನಿಂತಿದೆ. ಮುಂದಿನ ದಿನಗಳಲ್ಲಿ ಈ ಗುಂಡಿಯಲ್ಲಿ ಬಿದ್ದು ಕೈ, ಕಾಲು ಮುರಿಯುವ ಸಾಧ್ಯತೆಯ ಜೊತೆಗೆ ದೊಡ್ದ ಅಪಾಯದ ಮುನ್ಸೂಚನೆಯಂತೆ ಗೋಚರಿಸುತ್ತಿದೆ. ಅಧಿಕಾರಿಗಳು ಈ ಬಗ್ಗೆ ಕೂಡಲೇ ಗಮನಹರಿಸಬೇಕಾಗಿ ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

ಮಂಗಳೂರು: ಅಕ್ರಮ ಆನೆದಂತಗಳ ಮಾರಾಟ; ಆರೋಪಿಗಳ ಬಂಧನ..!

error: Content is protected !!