ಜನ ಮನದ ನಾಡಿ ಮಿಡಿತ

Advertisement

ಪತ್ನಿಯನ್ನು ಕರೆತರಲು ಲಂಡನ್‌ಗೆ ಹೊರಟ್ಟಿದ್ದ ಮಾಜಿ ಸಿಎಂ ವಿಜಯ್ ರೂಪಾನಿ ದುರಂತ ಅಂತ್ಯ

ಏರ್ ಇಂಡಿಯಾ ವಿಮಾನ ಪತನ ಅದೆಷ್ಟೋ ಕುಟುಂಬಗಳ ನಗುವನ್ನ ಕಸಿದುಕೊಂಡಿದೆ ಪ್ರಯಾಣಿಕರ ಮೇಲೆ ಬಿದ್ದ ಬೆಂಕಿ ತಮ್ಮವರನ್ನ ಕಳೆದುಕೊಂಡ ನೋವಿನ ಕಣ್ಣೀರಿಗೆ ಕಾರಣವಾಗಿದೆ. ಹೀಗೆ ಕಣ್ಣೀರಲ್ಲಿ ಮರುಗಿತ್ತಿರುವ ಜನರ ಪೈಕಿ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಕುಟುಂಬ ಕೂಡ ಒಂದು.

ಲಂಡನ್‌ಗೆ ತೆರಳೋದಕ್ಕೆ ಅಂತ ಏರ್ ಇಂಡಿಯಾ ಫ್ಲೈಟ್? ಏರಿದ ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ದುರಂತ ಅಂತ್ಯ ಕಂಡಿದ್ದಾರೆ. ಲಂಡನ್‌ನಲ್ಲಿರುವ ಮಗಳ ಮನೆಯಲ್ಲಿದ್ದ ತಮ್ಮ ಪತ್ನಿಯನ್ನು ಕರೆತರಲು ವಿಜಯ್ ರೂಪಾನಿ ಏರ್ ಇಂಡಿಯಾ 171 ವಿಮಾನದಲ್ಲಿ ಲಂಡನ್‌ಗೆ ಹೊರಟ್ಟಿದ್ದರು.. ವಿಮಾನದೊಳಗೆ ಮಹಿಳೆಯೊಬ್ಬರು ಮಾಜಿ ಸಿಎಂ ವಿಜಯ್ ರೂಪಾನಿಯವರನ್ನು ನೋಡಿದ ಖುಷಿಯಲ್ಲಿ ಸೆಲ್ಫಿ ತೆಗೆದುಕೊಂಡಿದ್ದಾರೆ.

ದುರಂತ ಅಂದ್ರೆ ಇದೇ ಅವರ ಕೊನೆಯ ಫೋಟೋ ಆಗಿದೆ. ವಿಜಯ್ ರೂಪಾನಿಯವರ ಸಾವು ಖಚಿತವಾಗ್ತಿದ್ದಂತೆ ಅವರ ಕುಟುಂಬದಲ್ಲಿ ಆಕ್ರಂದನ ಮುಗಿಲು ಮುಟ್ಟಿದೆ. ಇನ್ನು ಗುಜರಾತ್‌ನ ಮಾಜಿ ಸಿಎಂ ವಿಜಯ್ ರೂಪಾನಿಯವರ ದುರ್ಮರಣಕ್ಕೆ ಬಿಜೆಪಿ ನಾಯಕರು ಸಂತಾಪವನ್ನು ಸೂಚಿಸಿದ್ದಾರೆ. ರೂಪಾನಿಯವರ ಕಿರಿಯ ಮಗ. ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು. ಈಗ ವಿಜಯ್ ರೂಪಾನಿ ವಿಮಾನ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದು ಇದೀಗ ಅವರ ಕುಟುಂಬಕ್ಕೆ ತೀವ್ರ ನೋವನ್ನು ಉಂಟುಮಾಡಿದೆ.

Leave a Reply

Your email address will not be published. Required fields are marked *

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

error: Content is protected !!