ಜನ ಮನದ ನಾಡಿ ಮಿಡಿತ

Advertisement

ಉಡುಪಿ: ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ; ಕಿಶೋರ್ ಕುಮಾರ್ ಕುಂದಾಪುರ

ಬಿಜೆಪಿ ಉಡುಪಿ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನದಿಂದ ತನ್ನನ್ನು ಏಕಾಏಕಿಯಾಗಿ ಬದಲಾವಣೆ ಮಾಡಿರುವುದಕ್ಕೆ ಕಿಶೋರ್ ಕುಮಾರ್ ಕುಂದಾಪುರ ಅಸಮಾಧಾನ ಹೊರಹಾಕಿದ್ದಾರೆ.

ನೂತನ ಜಿಲ್ಲಾಧ್ಯಕ್ಷರ ಅಧಿಕಾರ ಹಸ್ತಾಂತರ ಕಾರ್ಯಕ್ರಮದಲ್ಲಿ ಪಕ್ಷದ ವರಿಷ್ಠರ ನಿರ್ಧಾರದ ವಿರುದ್ಧ ಗುಡುಗಿದ್ದಾರೆ. ಪಕ್ಷ ಏನೆಲ್ಲ ಜವಾಬ್ದಾರಿಗಳನ್ನು ನನಗೆ ಕೊಟ್ಟಿದೆಯೋ ಅದನ್ನು ನನ್ನ ಎಲ್ಲ ಪದಾಧಿಕಾರಿಗಳ ಸಹಕಾರದೊಂದಿಗೆ ಅತ್ಯಂತ ನಿಷ್ಠೆ, ಪ್ರಾಮಾಣಿಕತೆಯಿಂದ ನಿಭಾಯಿಸಿದ್ದೇನೆ. ನಾನು ಪಕ್ಷದ ಹೆಸರಲ್ಲಿ ಯಾವುದೇ ಹಣ ವಸೂಲಿ ಮಾಡಿಲ್ಲ. ರಾಜ್ಯಕ್ಕೆ ಯಾವುದೇ ಸುಳ್ಳು ವರದಿ ಕಳುಹಿಸಿಲ್ಲ. ಆದರೆ ನನ್ನಿಂದ ಏನೂ ತೊಂದರೆ ಆಯ್ತು ಅಂತಾ ಗೊತ್ತಿಲ್ಲ. ನಾನು ಕಾರ್ಯಕರ್ತರ ಮಧ್ಯೆ ಇದ್ದು ಬೆಳೆದು ಬಂದವನು. ಯಾವುದೇ ನಾಯಕರ ಹಿಂಬಾಲಕರಾಗಿ ಇದ್ದುಕೊಂಡು ಬಂದವನಲ್ಲ ಎಂದು ನಿರ್ಗಮಿತ ಬಿಜೆಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಅವರು ಬೇಸರ ವ್ಯಕ್ತಪಡಿಸಿದ್ದಾರೆ. ಬಳಿಕ ಸನ್ಮಾನ ಸ್ವೀಕರಿಸದೆ, ಪಕ್ಷದ ಶಾಲನ್ನು ವೇದಿಕೆಯಲ್ಲೇ ಬಿಟ್ಟು ಪಕ್ಷದ ನಿರ್ಧಾರದ ವಿರುದ್ಧ ಬೇಸರದಿಂದಲೇ ವೇದಿಕೆಯಿಂದ ಹೊರನಡೆದಿದ್ದಾರೆ.

Leave a Reply

Your email address will not be published. Required fields are marked *

ಬಂಟ್ವಾಳ: ಕಾರು ಮತ್ತು ಆಕ್ಟಿವಾ ಸ್ಕೂಟರ್ ನಡುವೆ ಭೀಕರ ರಸ್ತೆ ಅಪ*ಘಾತ….!

ಮಂಗಳೂರು: ಎಂ.ಆರ್.ಜಿ.ಗ್ರೂಪ್ ಗೆ ಹಾರುವ ಹಕ್ಕಿ ಸೇರ್ಪಡೆ..!

ಉಡುಪಿ : ಕಾಪುವಿನಲ್ಲಿ ಭೀಕರ ಅಪಘಾತ…!

ಬಂಟ್ವಾಳ : ಸಜಿಪದಲ್ಲಿ ಭೀಕರ ಅಪಘಾತ…!

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

error: Content is protected !!