ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ನಿಯಂತ್ರಣ ತಪ್ಪಿ ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಸಾವು..!

ಕಾರೊಂದು ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿದ್ದ ಇಬ್ಬರು ಸಾವನಪ್ಪಿದ ಘಟನೆ ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನಮೊಗರು ಬಳಿ ನಡೆದಿದೆ.

ಮೃತರನ್ನು ಕೊಂಚಾಡಿಯ ಓಂಶ್ರೀ ಮತ್ತು ಮಲ್ಲಿಕಟ್ಟೆಯ ಅಮನ್ ರಾವ್ ಎಂದು ಗುರುತಿಸಲಾಗಿದೆ. ಓಂಶ್ರೀ ಅವರು ದ.ಕ. ಜಿಲ್ಲಾ ಎನ್‌ಎಸ್‌ಯುಐ ಉಪಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು. ಅಪಘಾತವಾದ ಕಾರಿನಲ್ಲಿ ನಾಲ್ಕೈದು ಮಂದಿ ಪ್ರಯಾಣಿಸುತ್ತಿದ್ದು, ಕಾರನ್ನು ಅಮನ್ ರಾವ್ ಚಲಾಯಿಸುತ್ತಿದ್ದು, ತಲಪಾಡಿ ಕಡೆಯಿಂದ ಪಂಪ್‌ವೆಲ್ ಕಡೆಗೆ ಬರುತ್ತಿದ್ದ ಕಾರು ಜಪ್ಪಿನಮೊಗರು ಬಳಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆ ವಿಭಜಕ್ಕೆ ಢಿಕ್ಕಿ ಹೊಡೆದಿದೆ.

ಕಾರು ಸಂಪೂರ್ಣವಾಗಿ ಪುಡಿಯಾಗಿದ್ದು ಇಂಜಿನ್ ಭಾಗವೇ ಹೊರಕ್ಕೆ ಬಂದಿದ್ದು ಎರ್ ಬ್ಯಾಗ್ ಕೂಡ ಚಿಂದಿಯಾಗಿದೆ. ಕಾರಿನಲ್ಲಿದ್ದ ಇಟಲಿಯ ಪ್ರಜೆ ಸಹಿತ ಮೂವರಿಗೆ ಗಾಯಗಳಾಗಿದ್ದು ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಮಂಗಳೂರು ದಕ್ಷಿಣ ಸಂಚಾರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

Your email address will not be published. Required fields are marked *

ಮಂಗಳೂರು: ಕ್ರೀಡಾಪಟು ಎಂ.ಆರ್. ಪೂವಮ್ಮಗೆ ಮಂಗಳೂರು ವಿಮಾನ ನಿಲ್ದಾಣದಲ್ಲಿ ಆತ್ಮೀಯ ಸ್ವಾಗತ

ಮಂಗಳೂರು: 2026ನೇ ಸಾಲಿನ ಕಾರಂತ ಪ್ರಶಸ್ತಿಗೆ ಹಿರಿಯ ಸಾಹಿತಿ ವೈದೇಹಿ ಆಯ್ಕೆ..!

ಕಡಬ: ಗುಂಡ್ಯ-ಸುಬ್ರಹ್ಮಣ್ಯ ಹೆದ್ದಾರಿಯಲ್ಲಿ ಕಾರಿಗೆ ಕಡವೆ ಡಿಕ್ಕಿ: ಸ್ಥಳದಲ್ಲೇ ಸಾವು

ಮಂಗಳೂರು: ಕರ್ನಾಟಕದ ಕ್ರೀಡಾಪಟುಗಳಿಗೆ ಪ್ರೋತ್ಸಾಹಧನ ಹೆಚ್ಚಿಸಿ: ಎಂ.ಆರ್. ಪೂವಮ್ಮ ಆಗ್ರಹ

ಬಂಟ್ವಾಳ: ಬಂಟ್ವಾಳದಲ್ಲಿ ಎರಡು ಕಡೆ ಚಿರತೆ ಸೆರೆಗೆ ಬೋನು; ಆತಂಕದಲ್ಲಿ ಸ್ಥಳೀಯರು…!

ಮಂಗಳೂರು: ಮಾಡೂರು ಯೂಸುಫ್ ಹತ್ಯೆ ಪ್ರಕರಣ: ಐವರಿಗೆ ಜೀವಾವಧಿ ಶಿಕ್ಷೆ…!

ತಿರುವನಂತಪುರಂ: ಪತಿಯ ಸ್ನೇಹಿತೆಯ ಮೇಲೆ ಅತ್ಯಾಚಾರಕ್ಕೆ ಸುಪಾರಿ ಆರೋಪ: ಮಹಿಳೆ ಸೇರಿ ಐವರ ಬಂಧನ

ಉಡುಪಿ: ಕೊಲ್ಲೂರಿನಲ್ಲಿ ದನವನ್ನು ಕಾರಿನಲ್ಲಿ ಎಳೆದುಕೊಂಡು ಹೋದ ಪ್ರಕರಣ: ಪ್ರಮುಖ ಆರೋಪಿ ಬಂಧನ

ಸುಳ್ಯ: ಸುಳ್ಯದಲ್ಲಿ ಅ.5ರಂದು ಗಾಂಧಿ ಸ್ಮೃತಿ ಹಾಗೂ ಬೃಹತ್ ಜನಜಾಗೃತಿ ಸಮಾವೇಶ

error: Content is protected !!