ಪತ್ನಿಯನ್ನು ಕೊಂದು ತಾನು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಗಂಡ ಹೆಂಡತಿ ಇಬ್ಬರು ಕೂಡ ಸಾವನ್ನಪಿರುವ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಬಡಗುಂಡಿ ಎಂಬಲ್ಲಿ ನಡೆದಿದೆ.

50ರ ಹರೆಯದ ತಿಮ್ಮಪ್ಪ ಮೂಲ್ಯ ಹಾಗೂ ಆತನ ಪತ್ನಿ 40ರ ಹರೆಯದ ಜಯಂತಿ ಇಬ್ಬರು ಸಂಶಯಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಜಯಂತಿ ಅವರ ಮೃತದೇಹ ಕೋಣೆಯಲ್ಲಿ ಮಲಗಿದ ಸ್ಥಿತಿಯಲ್ಲಿ ಇದ್ರೆ ತಿಮ್ಮಪ್ಪ ಅವರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಿತಿಯಲ್ಲಿ ಕಂಡು ಬಂದಿದೆ. ಮೇಲ್ನೋಟಕ್ಕೆ ಪತ್ನಿಯನ್ನು ಕೊಂದು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆಯನ್ನು ಪೋಲೀಸರು ವ್ಯಕ್ತಪಡಿಸಿದ್ದಾರೆ. ಪತ್ನಿಯ ಕುತ್ತಿಗೆ ಹಿಸುಕಿದ ರೀತಿಯಲ್ಲಿ ಕಂಡುಬಂದಿರುವ ಬಗ್ಗೆ ಮಾಹಿತಿ ಲಭ್ಯವಾಗಿದೆ. ಜಯಂತಿ ಅವರು ಗರ್ಭಿಣಿಯಾಗಿದ್ದು, ಜುಲೈ 2ರಂದು ಸೀಮಂತ ದಿನ ನಿಗದಿಯಾಗಿತ್ತು. ಆದರೆ ಈ ನಡುವೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಟುಂಬ ವರ್ಗವನ್ನು ದುಖಃತಪ್ತಗೊಳಿಸಿದೆ. ಘಟನೆಗೆ ಸ್ಪಷ್ಟವಾದ ಕಾರಣ ಇನ್ನೂ ಕೂಡ ತಿಳಿದು ಬಂದಿಲ್ಲ.



