ಜನ ಮನದ ನಾಡಿ ಮಿಡಿತ

Advertisement

ಕಾಂಗ್ರೆಸ್ ರಾಷ್ಟ್ರೀಯ ನಾಯಕ ರಾಹುಲ್ ಗಾಂಧಿಯವರ ಹುಟ್ಟುಹಬ್ಬ; ಕಾರ್ಕಳ ಯುವ ಕಾಂಗ್ರೆಸ್ ಸಮಿತಿ ವತಿಯಿಂದ ವೃದ್ಧಾಶ್ರಮಕ್ಕೆ ಹಣ್ಣು ಹಂಪಲು ವಿತರಣೆ

ಲೋಕಸಭಾ ವಿರೋಧ ಪಕ್ಷದ ನಾಯಕರು ಕಾಂಗ್ರೆಸ್ ರಾಷ್ಟ್ರೀಯ ನಾಯಕರಾದ  ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಕಾರ್ಕಳ ಯುವ ಕಾಂಗ್ರೆಸ್ ಸಮಿತಿಯ ವತಿಯಿಂದ ಆಚರಿಸಲಾಯಿತು.

ಕಾರ್ಕಳದ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಮತ್ತು ಕಾರ್ಕಳ ಜರಿಗುಡ್ಡೆಯಲ್ಲಿ ಕಾರ್ಯಾಚರಿಸುತ್ತಿರುವ ಸುರಕ್ಷಾ ವೃದ್ಧಾಶ್ರಮಕ್ಕೆ ಯುವ ಕಾಂಗ್ರೆಸ್ ಕಾರ್ಯಕರ್ತರು ತೆರಳಿ ಹಣ್ಣು ಹಂಪಲು ವಿತರಿಸಿದರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್ ಅವರು ಮಾತನಾಡಿ ರಾಹುಲ್ ಗಾಂಧಿಯವರ ಹುಟ್ಟುಹಬ್ಬವನ್ನು ಹಣ್ಣುಹಂಪಲು ವಿತರಣೆಯ ಮೂಲಕ ಆಚರಿಸಿರುವುದು ಅರ್ಥಪೂರ್ಣವಾಗಿದೆ. ಸರ್ವರನ್ನೂ ಸಮಾನವಾಗಿ ಕಾಣುವ ಕಾಂಗ್ರೆಸ್ ಸಿದ್ದಾಂತದಂತೆ ಇಂದು ಆಸ್ಪತ್ರೆ ಹಾಗೂ ವೃದ್ದಾಶ್ರಮದಲ್ಲಿರುವವರಿಗೆ ಹಣ್ಣುಹಂಪಲು ನೀಡಿ ಕುಟುಂಬದವರ ಪ್ರೀತಿಯನ್ನು ಹಂಚಲಾಗಿದೆ ಎಂದರು.

ಈ ಸಂದರ್ಭದಲ್ಲಿ ಕಾರ್ಕಳ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷರಾದ ಸೂರಜ್ ಶೆಟ್ಟಿ ನಕ್ರೆ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಯೋಗೀಶ್ ಆಚಾರ್ಯ ಇನ್ನಾ, ಮಂಜುನಾಥ ‌ಜೋಗಿ, ಗ್ಯಾರಂಟಿ ಸಮಿತಿಯ ಸದಸ್ಯರಾದ ಸಂತೋಷ್ ದೇವಾಡಿಗ ಬೋಳ, ಡೇರಲ್, ಬಿ.ಸುದರ್ಶನ್ ಬಂಗೇರ, ಶರತ್, ದೀಪಕ್ ಶೆಟ್ಟಿ ದೊಂಡೆರಂಗಡಿ, ಶಶಿಧರ್ ಶಾಮ ಹವಾಲ್ದಾರ್ ಬೆಟ್ಟು ಹಾಗೂ ಸುರಕ್ಷಾ ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ ಪ್ರದೀಪ್ ಬೇಲಾಡಿ ಸ್ವಾಗತಿಸಿ ಬ್ಲಾಕ್ ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಶಭೀರ್ ಮಿಯ್ಯಾರು ಧನ್ಯವಾದವಿತ್ತರು.

Leave a Reply

Your email address will not be published. Required fields are marked *

ಮಂಗಳೂರು: ದಸರಾ ರಜೆ ವೇಳೆ ತರಗತಿ, ಪರೀಕ್ಷೆ ನಡೆಸಿದರೆ ಪ್ರತಿಭಟನೆ: ಪ್ರಮೋದ್ ಮುತಾಲಿಕ್

ಬೆಳ್ತಂಗಡಿ: ಬೆಳ್ತಂಗಡಿಯಲ್ಲಿ ಅಪರಿಚಿತ ಮಾನವನ ಅಸ್ಥಿಪಂಜರ ಪತ್ತೆ

ಉಡುಪಿ: ಉಡುಪಿಯಲ್ಲಿ ಸಾವಿರಾರು ರೆಕ್ಕೆ ಗೆದ್ದಲುಗಳ ಹಾರಾಟ; ಸಾರ್ವಜನಿಕರ ಗಮನ ಸೆಳೆದ ದೃಶ್ಯ

ಮುಂಬೈ: ಮುಂಬೈಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜಾ ಉದ್ಯಾಪನ…!

ಬಂಟ್ವಾಳ: ಹಿಂದೂ ಜಾಗರಣಾ ವೇದಿಕೆ ಜಿಲ್ಲಾ ಸಹಸಂಚಾಲಕರಾಗಿ ಪ್ರದೀಪ್ ಅಜ್ಜಿಬೆಟ್ಟು ನೇಮಕ

ಉಡುಪಿ: ಸರ್ಕಾರಿ ಜಾಗದಲ್ಲಿ ಅಕ್ರಮ ಕೆಂಪುಕಲ್ಲು ಗಣಿಗಾರಿಕೆ; ₹16 ಲಕ್ಷ ಮೌಲ್ಯದ ಸೊತ್ತು ವಶ

ಉಡುಪಿ: ಶ್ರೀಕೃಷ್ಣ ಮಠಕ್ಕೆ ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಭೇಟಿ; ಶ್ರೀಕೃಷ್ಣ ದೇವರ ದರ್ಶನ..!

ಮಂಗಳೂರು: ಲೋಕಾಯುಕ್ತ ಬಲೆಗೆ ಬಿದ್ದ ಬಜ್ಪೆ ಇನ್ಸ್‌ಪೆಕ್ಟರ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ಗುಜರಾತ್: 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ; ಕರಾವಳಿಯ ಮೂವರು ಪ್ರತಿಭೆಗಳಿಗೆ ರಾಷ್ಟ್ರ ಪ್ರಶಸ್ತಿ…!

error: Content is protected !!