ಕರ್ನಾಟಕ ಸರ್ಕಾರ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಆಯುಷ್ ಇಲಾಖೆ, ದಕ್ಷಿಣ ಕನ್ನಡ ನೇತೃತ್ವದಲ್ಲಿ ಆಯುಷ್ ಮಹಾವಿದ್ಯಾಲಯಗಳು ಹಾಗೂ ವಿವಿಧ ಯೋಗ ಸಂಘಟನೆಗಳು ದಕ್ಷಿಣ ಕನ್ನಡ ಇದರ ಸಹಕಾರದೊಂದಿಗೆ ಅಂತಾರಾಷ್ಟ್ರೀಯ ಯೋಗ ದಿನಾಚರಣೆ -2025 ಕಾರ್ಯಕ್ರಮವು ನಗರದ ಪುರಭವನದಲ್ಲಿ ನಡೆಯಿತು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತಾನಾಡಿದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ದರ್ಶನ್ ಹೆಚ್ ವಿ ಅವರು, ದ.ಕನ್ನಡದಲ್ಲಿ ನನ್ನ ಮೊದಲ ಸಾರ್ವಜನಿಕ ಕಾರ್ಯಕ್ರಮ ಇದಾಗಿದೆ.

ಯೋಗದಿಂದ ಹಲವು ಪ್ರಯೋಜನಗಳಿವೆ. ದೈಹಿಕ ಬೆಳವಣಿಗೆ ಮತ್ತು ಮಾನಸಿಕ ಬೆಳವಣಿಗೆ ಈ ಯೋಗ ಸಹಕಾರಿಯಾಗಿದೆ. ಯೋಗ ಇಂದು ಭಾರತಕ್ಕೆ ಮಾತ್ರ ಸೀಮಿತವಾಗದೆ ಇಡೀ ವಿಶ್ವಕ್ಕೆ ಪಸರಿಸಿದೆ. ಇದು ವಿದ್ಯಾರ್ಥಿಗಳಿಗೆ ವಿದ್ಯಾರ್ಥಿಯೇತರಿಗೆ ಸಧೃಡ ಆರೋಗ್ಯಕ್ಕೆ ಸಹಕಾರಿ ಆಗಿದೆ. ಯೋಗವನ್ನು ಎಲ್ಲರೂ ಪ್ರತಿ ದಿನ ಮಾಡುವಂತೆ ಕಿವಿ ಮಾತು ಹೇಳಿದ್ದಾರೆ.



