ಮಣಿಪಾಲದಲ್ಲಿ ಬೈಕ್ ಅಪಘಾತದಿಂದ ಗಂಭೀರ ಗಾಯಗೊಂಡಿದ್ದ ಯುವಕ ನೋರ್ವನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಇದೀಗ ಚಿಕಿತ್ಸೆ ಫಲಿಸದೆ ಇಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತ ಪಟ್ಟಿರುವ ವರದಿ ಲಭ್ಯವಾಗಿದೆ. ಮೃತಪಟ್ಟ ಯುವಕ ಸಾಲಿಗ್ರಾಮದ ನಿವಾಸಿ ಆಸ್ತಿಕ್ ಮೆಂಡನ್ ಎಂದು ತಿಳಿದು ಬಂದಿದೆ. ಇನ್ನು ಅಪಘಾತದಲ್ಲಿ ತಲೆಗೆ ಬಲವಾಗಿ ಪೆಟ್ಟು ಬಿದ್ದ ಪರಿಣಾಮ ಒಂದು ವಾರದಿಂದ ಕೋಮು ಸ್ಥಿತಿಯಲ್ಲಿದ್ದು ಶನಿವಾರ ಬೆಳಿಗ್ಗೆ ಮೃತ ಪಟ್ಟಿರುವ ಬಗ್ಗೆ ವೈದ್ಯರು ತಿಳಿಸಿದ್ದಾರೆ. ಈತ ಮಣಿಪಾಲದ ಖಾಸಗಿ ಕಂಪನಿ ಉದ್ಯೋಗಿಯಾಗಿದ್ದು ತಂದೆ ತಾಯಿ ಸಹೋದರನನ್ನು ಅಗಲಿದ್ದಾರೆ. ಈ ಕುರಿತು ಮಣಿಪಾಲ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.



