ಹುಣಸೂರಿನಿಂದ ಮೈಸೂರಿಗೆ ಹೆಚ್ಚುವರಿ ಬಸ್ ಸೌಲಭ್ಯ ಕಲ್ಪಿಸುವಂತೆ ಸರ್ಕಾರ ಹಾಗೂ ರಾಜ್ಯ ರಸ್ತೆ ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಮತ್ತು ಘಟಕ ವ್ಯವಸ್ಥಾಪಕರು ಹುಣಸೂರುರವರಲ್ಲಿ ಸತ್ಯಪ್ಪ ಮನವಿ ಮಾಡಿಕೊಂಡಿದ್ದಾರೆ.

ಹುಣಸೂರಿನಿಂದ ಮೈಸೂರಿಗೆ ಅತೀ ಹೆಚ್ಚಿನ ಸಂಖ್ಯೆಯಲ್ಲಿ ಶಾಲಾ ಕಾಲೇಜು ವಿದ್ಯಾರ್ಥಿಗಳು, ಗಾರ್ಮೆಂಟ್ ಉದ್ಯೋಗಿಗಳು, ಸರ್ಕಾರಿ, ಖಾಸಗಿ ಉದ್ಯೋಗಿಳು ಪ್ರಯಾಣಿಸುತ್ತಿದ್ದು, ಪ್ರತಿದಿನ ಬಸ್ ಕಿಕ್ಕಿರಿದು ತುಂಬಿರುವುದರಿಂದ ಬಹಳ ತೊಂದರೆ ಅನುಭವಿಸುತ್ತಿದ್ದಾರೆ. ವಿದ್ಯಾರ್ಥಿಗಳು ಸರಿಯಾದ ಸಮಯಕ್ಕೆ ಶಾಲೆ ಕಾಲೇಜುಗಳಿಗೆ ಹಾಜರಾಗಲಾಗದೆ ತೊಂದರೆ ಪಡುತ್ತಿದ್ದಾರೆ. ಉದ್ಯೋಗಿಗಳು ತಮ್ಮ ಕರ್ತವ್ಯಗಳಿಗೆ ಸಕಾಲದಲ್ಲಿ ತಲುಪಲಾಗದೆ ಮೇಲಾಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿ ತಮ್ಮ ಕೆಲಸಕ್ಕೆ ಸಂಚಕಾರ ತಂದುಕೊಳ್ಳುವ ಪರಿಸ್ಥಿತಿ ನಿರ್ಮಾಣವಾಗಿದೆ. ಶಕ್ತಿ ಯೋಜನೆ ಜೊತೆಯಲ್ಲೇ ಹೆಚ್ಚುವರಿ ಬಸ್ ವ್ಯವಸ್ಥೆ ಸರ್ಕಾರ ಕಲ್ಪಿಸಿಕೊಡುವಂತಾಗಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.



