ವಿಶ್ವಸಂಸ್ಥೆಯಲ್ಲಿ ಇರಾನಿನ ರಾಯಭಾರಿ ಅಮೀರ್ ಸಯೀದ್ ಇರಾವನಿ, ಇಸ್ರೇಲಿ ದಾಳಿಗಳನ್ನು ನಿಲ್ಲಿಸಲು ಭದ್ರತಾ ಮಂಡಳಿಯು ಕ್ರಮ ಕೈಗೊಳ್ಳಬೇಕೆಂದು ಈ ವೇಳೆ ಒತ್ತಾಯಿಸಿದ್ದಾರೆ.

ಈ ದಾಳಿಯನ್ನು ಇಸ್ರೇಲ್ ಎಷ್ಟು ದಿನಗಳವರೆಗೆ ಮುಂದುವರಿಸುತ್ತದೆ ಎಂದು ಸ್ಪಷ್ಟವಾಗಿ ಘೋಷಿಸಿದೆ. ಅಮೆರಿಕ ಈ ಯುದ್ಧಕ್ಕೆ ಸೇರುವ ಸಾಧ್ಯತೆಯಿದೆ ಎಂಬ ವಿಶ್ವಾಸಾರ್ಹ ವರದಿಯ ಬಗ್ಗೆ ನಮಗೆ ಎಚ್ಚರಿಕೆ ಬಂದಿದೆ ಎಂದು ಅವರು ಹೇಳಿದ್ದಾರೆ. ಇಸ್ರೇಲ್ ಮತ್ತು ಇರಾನ್ ನಡುವಿನ ಸಂಘರ್ಷದಲ್ಲಿ ಅಮೆರಿಕ ಭಾಗಿಯಾಗುತ್ತದೆಯೇ ಅಥವಾ ಇಲ್ಲವೆ ಎಂಬುವುದನ್ನು ಎರಡು ವಾರಗಳಲ್ಲಿ ನಿರ್ಧರಿಸುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಗುರುವಾರ ಹೇಳಿದ್ದಾರೆ ಎಂದು ಅವರ ಕಚೇರಿ ಹೇಳಿತ್ತು. ಈ ಬಗ್ಗೆ ಇರಾನ್ ಮೇಲೆ ಇಸ್ರೇಲಿ ಮಿಲಿಟರಿ ನಡೆಸುತ್ತಿರುವ ದಾಳಿಗೆ ಅಮೆರಿಕ ಸೇರಿಕೊಳ್ಳಲಿದೆ ಎಂಬ ಊಹಾಪೋಹಗಳ ನಡುವೆ ಈ ಹೇಳಿಕೆಗಳು ಕೂಡ ಬಂದಿವೆ. ವಾಷಿಂಗ್ಟನ್ ಇಸ್ರೇಲ್‌ನ ಮಿತ್ರ ರಾಷ್ಟ್ರವಾಗಿದ್ದು, ದೇಶದ ಭದ್ರತೆಯ ಖಾತರಿದಾರನಾಗಿ ಕಾರ್ಯನಿರ್ವಹಿಸುತ್ತದೆ. ಇರಾನ್ ಪರಮಾಣು ಶಸ್ತ್ರಾಸ್ತ್ರವನ್ನು ಅಭಿವೃದ್ಧಿಪಡಿಸದಂತೆ ನೋಡಿಕೊಳ್ಳುವುದು ಟ್ರಂಪ್ ಅವರ ಆದ್ಯತೆಯಾಗಿತ್ತು ಎಂದು ಶ್ವೇತಭವನ ತಿಳಿಸಿದೆ. ಇಸ್ರೇಲ್ ದಾಳಿಗಳು ನಿಂತ ನಂತರವೇ ರಾಜತಾಂತ್ರಿಕತೆಯನ್ನು ಪರಿಗಣಿಸಲು ಸಿದ್ಧ ಎಂದು ಇರಾನ್ ಕೂಡ ಸ್ಪಷ್ಟಪಡಿಸಿದೆ.



