ದಿನೇ ದಿನೇ ರಾಜಕೀಯ ಪಾಳಾಯದಲ್ಲಿ ಮಾತಿನ ಬಾಣಗಳು ಬಲು ಜೋರಾಗಿದೆ. ಎರಡು ರಾಷ್ಟ್ರೀಯ ಪಕ್ಷಗಳ ಸಚಿವರ, ಸಂಸದರ ಮಾತಿನ ಚಕಮಕಿ ಸದ್ದಿನಿಂದ ಅಬ್ಬರಿಸುತ್ತಿದೆ.

ಇದೀಗ ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಹಣ ಬರಲು ಬಾಕಿಯಿದೆ ಎಂದು ಹೇಳಿರುವ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತಿಗೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಪ್ರತಿಕ್ರಿಯಿಸಿದ್ದಾರೆ.

ಇವರು ಉಡುಪಿಯಲ್ಲಿ ಮಾತನಾಡಿ, ಕೇಂದ್ರ ಸರಕಾರದಿಂದ ರಾಜ್ಯ ಸರಕಾರಕ್ಕೆ ಹಣ ಬರಲು ಬಾಕಿ ಇದೆ ಎಂದು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದರಲ್ಲಿ ಹುರುಳಿಲ್ಲ ಎಂದಿದ್ದಾರೆ. ಜೊತೆಗೆ ಕೇಂದ್ರದಿಂದ ಹಣ ಬಾಕಿ ಇದೆ ಎಂದು ಹೇಳುವ ಮೊದಲು ಸಚಿವರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಇಲಾಖೆಯ ಕಾರ್ಯದರ್ಶಿ ಮತ್ತು ಇತರ ಅಧಿಕಾರಿಗಳನ್ನು ವಿಚಾರಿಸಿಕೊಳ್ಳುವುದು ಉತ್ತಮ ಎಂದು ಸಲಹೆ ನೀಡುವ ಮೂಲಕ ಟಾಂಗ್ ಕೊಟ್ಟಿದ್ದಾರೆ.



