ಉಡುಪಿ ಜಿಲ್ಲಾ ಕಾಂಗ್ರೆಸ್ ಭವನಕ್ಕೆ ರಾಜ್ಯ ಯುವಕಾಂಗ್ರೆಸ್ ಅಧ್ಯಕ್ಷ ಮಂಜುನಾಥ ಗೌಡ ಭೇಟಿ ಕೊಟ್ಟರು.

ಪ್ರಥಮ ಬಾರಿಗೆ ಉಡುಪಿ ಜಿಲ್ಲೆಗೆ ಆಗಮಿಸಿದ ಅವರನ್ನು ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ನಾಯರ್ ಕೆರೆ ರಸ್ತೆಯಲ್ಲಿ ಹುಲಿ ವೇಷ ಕುಣಿತದ ಮೂಲಕ ಸ್ವಾಗತಿಸಲಾಯಿತು. ಕಾಂಗ್ರೆಸ್ ಭವನದ ಮುಂದೆ ಹುಲಿವೇಷ ಪ್ರದರ್ಶನ ನಡೆಯಿತು. ಮಾಜಿ ಸಚಿವ ವಿನಯ್ ಕುಮಾರ್ ಸೊರಕೆ ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಪ್ರಸಾದ್‌ರಾಜ್ ಕಾಂಚನ್, ಮುನಿಯಾಲು ಉದಯಕುಮಾರ್ ಶೆಟ್ಟಿ ಸೇರಿದಂತೆ ಜಿಲ್ಲಾ ಮಟ್ಟದ ಕಾಂಗ್ರೆಸ್ ನಾಯಕರು ಪದಾಧಿಕಾರಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದ ಸಂಘಟನೆ ಯುವಕರನ್ನ ಒಳಗೊಂಡು ಯೂಥ್ ಕಾಂಗ್ರೆಸ್ ನಡೆಸಬೇಕಾದ ಕಾರ್ಯ ಚಟುವಟಿಕೆಗಳ ಬಗ್ಗೆ ಮಂಜುನಾಥಗೌಡ ಸಲಹೆಗಳನ್ನು ನೀಡಿದರು.



