ಜನ ಮನದ ನಾಡಿ ಮಿಡಿತ

Advertisement

ಮಂಗಳೂರು: ಆ.1,2ರಂದು ಮೂಡಬಿದಿರೆಯಲ್ಲಿ `ಆಳ್ವಾಸ್ ಪ್ರಗತಿ -2025′

15ನೇ ಆವೃತ್ತಿಯ `ಆಳ್ವಾಸ್ ಪ್ರಗತಿ -2025′-ಬೃಹತ್ ಉದ್ಯೋಗ ಮೇಳವು ಮೂಡುಬಿದಿರೆ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ವತಿಯಿಂದ ಆಗಸ್ಟ್ 1 ಮತ್ತು 2 ರಂದು ಕಾಲೇಜಿನ ವಿದ್ಯಾಗಿರಿ ಆವರಣದಲ್ಲಿ ನಡೆಯಲಿದೆ ಎಂದು ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ ಮೋಹನ್ ಆಳ್ವ ಹೇಳಿದ್ದಾರೆ.

ಇವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿ, ಉದ್ಯೋಗ ಮೇಳವನ್ನು 2007 ರಿಂದಲೇ ನಡೆಸಿಕೊಂಡು ಬರಲಾಗುತ್ತಿದ್ದು ಇದರಿಂದ ಸಾವಿರಾರು ವಿದ್ಯಾರ್ಥಿಗಳು, ಉದ್ಯೋಗ ಆಕಾಂಕ್ಷಿಗಳು ಉದ್ಯೋಗವನ್ನು ಪಡೆದುಕೊಂಡಿದ್ದಾರೆ . ಮುಖ್ಯವಾಗಿ ಈ ಮೇಳವು ಗ್ರಾಮೀಣ ಮತ್ತು ಸವಲತ್ತುಗಳಿಲ್ಲದ ವರ್ಗಗಳ ಪ್ರತಿಭೆಗಳಿಗೆ ಉದ್ಯೋಗ ಅವಕಾಶ ಕೊಡಿಸುವ ಮಹತ್ಕಾರ್ಯವನ್ನು ವ್ಯವಸ್ಥಿತವಾಗಿ ನಡೆಸುತ್ತಾ ಬಂದಿದೆ. ಸಂಸ್ಥೆಯು ಈವರೆಗೆ ದೇಶದ ವಿವಿಧ ಭಾಗಗಳಲ್ಲಿ 21 ಬೃಹತ್ ಉದ್ಯೋಗ ಮೇಳಗಳನ್ನು ಬಹಳ ವ್ಯವಸ್ಥಿತವಾಗಿ ನಡೆಸಿದೆ. ಪ್ರತೀ ಉದ್ಯೋಗ ಮೇಳದಲ್ಲಿ ಸರಾಸರಿ 200ರಷ್ಟು ಪ್ರತಿಷ್ಠಿತ ಕಂಪನಿಗಳು ಪಾಲ್ಗೊಂಡು, ಇಲ್ಲಿವರೆಗೆ ಒಟ್ಟು 36,151 ಉದ್ಯೋಗಗಳನ್ನು 61,517 ಅಭ್ಯರ್ಥಿಗಳು ವಿವಿಧ ಕಂಪೆನಿಗಳಿಗೆ ಶಾರ್ಟ್ಲಿಸ್ಟ್ ಆಯ್ಕೆಗೆ ಅರ್ಹರಾಗಿದ್ದಾರೆ. ಈ ಭಾರಿಯ ಬೃಹತ್ ಉದ್ಯೋಗ ಮೇಳದಲ್ಲಿ ವಿವಿಧ ದೇಶಿಯ ಮತ್ತು ವಿದೇಶಿ ಕಂಪೆನಿಗಳು ಭಾಗವಹಿಸುತ್ತಿದೆ. ಬ್ಯಾಂಕಿAಗ್ ಮತ್ತು ಹಣಕಾಸು, ಐಟಿ, ಐಟಿಎಸ್, ಮ್ಯಾನುಫ್ಯಾಕ್ಟರಿಂಗ್, ಹೆಲ್ತ್ ಕೇರ್ ಮತ್ತು ಫಾರ್ಮಾ, ಮಾರಾಟ ಮತ್ತು ಚಿಲ್ಲರೆ ವ್ಯಾಪಾರ, ಆಟೋಮೊಬೈಲ್, ಹಾಸ್ಪಿಟಾಲಿಟಿ, ಟೆಲಿಕಾಂ, ಮಾಧ್ಯಮ, ಶಿಕ್ಷಣ ಮತ್ತು ಎನ್‌ಜಿಓಗಳನ್ನು ಪ್ರತಿನಿಧಿಸುವ ಉನ್ನತ ಕಂಪೆನಿಗಳು ಆಳ್ವಾಸ್ ಪ್ರಗತಿಯಲ್ಲಿ ನೇಮಕಾತಿ ನಡೆಸಲಿವೆ ಎಂದಿದ್ದಾರೆ.

Leave a Reply

Your email address will not be published. Required fields are marked *

ಉಡುಪಿ: ಕೊಲ್ಲೂರು ಮೂಕಾಂಬಿಕಾ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಭೇಟಿ….!

ಬಂಟ್ವಾಳ: ಬಡಗಬೆಳ್ಳೂರಿನಲ್ಲಿ ಕುಸಿದು ಬಿದ್ದ ಸೇತುವೆ; ಜನ ಸಂಚಾರಕ್ಕೆ ಭಾರೀ ಸಂಕಷ್ಟ…..!

ಬಂಟ್ವಾಳ: ಜ್ವರದಿಂದ ಬಳಲುತ್ತಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ನಿಧನ….!

ಬಂಟ್ವಾಳ: ಮಿನಿ ವಿಧಾನಸೌಧ ಮುಂಭಾಗದ ಕ್ಯಾಂಟೀನ್‌ನಲ್ಲಿ ಅನಿಲ ಸೋರಿಕೆ ಆತಂಕ….!

ಕಾಸರಗೋಡು: ಸಮುದ್ರದಲ್ಲಿ ಕೊಚ್ಚಿಹೋದ ಇಬ್ಬರು ಕಾಲೇಜು ವಿದ್ಯಾರ್ಥಿಗಳು..!

ಕಡಬ: ಅಕ್ರಮವಾಗಿ ಜಾನುವಾರು ಸಾಗಾಟ ಮಾಡುತ್ತಿದ್ದ ಪಿಕಪ್ ಪಲ್ಟಿ..!

ಕಡಬ: ಗೋಳಿತ್ತಡಿ-ಏಣಿತ್ತಡ್ಕ-ಕುದುಲೂರು ಸಂಪರ್ಕಿತ ರಸ್ತೆ; ರಸ್ತೆಯುದ್ದಕ್ಕೂ ಹೊಂಡಮಯ..!

ಬಂಟ್ವಾಳ: ಪಾಣೆಮಂಗಳೂರು ಕಲ್ಲುರ್ಟಿ ದೈವಸ್ಥಾನದ ಮುಂಭಾಗದ ಸರ್ವೀಸ್ ರಸ್ತೆಯಲ್ಲಿ ಹೊಂಡಗುಂಡಿ…!

ಉಡುಪಿ: ಮಾದಕ ದ್ರವ್ಯ ಸಾಗಾಟ- ಮಾರಾಟ ಪ್ರಕರಣ: ಪಿಐಟಿ- ಎನ್‌ಡಿಪಿಎಸ್ ಕಾಯ್ದೆಯಡಿ ಆರೋಪಿಯ ಬಂಧನ…!

error: Content is protected !!